ಇನ್ನು ನೆನಪು ಮಾತ್ರ; ಹಿರಿಯ ನಟ ಕಾಶೀನಾಥ್ ಪಂಚಭೂತಗಳಲ್ಲಿ ಲೀನ
Team Udayavani, Jan 18, 2018, 6:34 PM IST
ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಕಾಶೀನಾಥ್ ಅವರ ಪಾರ್ಥಿವ ಶರೀರಕ್ಕೆ ಮಾಧ್ವ ಬ್ರಾಹ್ಮಣ ಸಂಪ್ರದಾಯದ ಪ್ರಕಾರ ಅಂತಿಮ ವಿಧಿ ವಿಧಾನ ನೆರವೇರಿಸಿದ ಬಳಿಕ ಚಾಮರಾಜಪೇಟೆಯಲ್ಲಿರುವ ಹಿಂದೂ ರುದ್ರಭೂಮಿಯಲ್ಲಿ ಪುತ್ರ ಅಭಿಮನ್ಯು ತಂದೆಯ ಚಿತೆಗೆ ಅಗ್ನಿಸ್ಪರ್ಶ ಮಾಡಿದರು.
ಕನ್ನಡ ಚಿತ್ರರಂಗಕ್ಕೆ ತನ್ನದೇ ವಿಶಿಷ್ಟ ಅಭಿನಯ, ಹಾಸ್ಯದ ಮೂಲಕ ಪ್ರೇಕ್ಷಕರನ್ನು ಸೆಳೆದವರು ಕಾಶೀನಾಥ್, ಗುರುವಾರ ಬೆಳಗ್ಗೆ ಕಾಶೀನಾಥ್ (67ವರ್ಷ) ಅವರು ಕೊನೆಯುಸಿರೆಳೆದಿದ್ದರು.
ಎಪಿಎಸ್ ಕಾಲೇಜು ಮೈದಾನದಲ್ಲಿ ಕಾಶೀನಾಥ್ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗಿತ್ತು, ಸಂಜೆ ಎಪಿಎಸ್ ಕಾಲೇಜು ಮೈದಾನದಿಂದ ಪಾರ್ಥಿವ ಶರೀರವನ್ನು ಜಯನಗರ 3ನೇ ಬ್ಲಾಕ್ ನಲ್ಲಿರುವ ನಿವಾಸಕ್ಕೆ ಸ್ಥಳಾಂತರಿಸಲಾಗಿತ್ತು.
ನಿವಾಸದಲ್ಲಿ ಕೆಲಕಾಲ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಿಕೊಡಲಾಗಿತ್ತು, ದುಬೈನಲ್ಲಿದ್ದ ಪುತ್ರಿ ಅಮೃತವರ್ಷಿಣಿ ನಿವಾಸಕ್ಕೆ ಆಗಮಿಸಿದ ಬಳಿಕ ಪುತ್ರ ಅಭಿಮನ್ಯು, ಪತ್ನಿ ಚಂದ್ರಪ್ರಭಾ, ಪುತ್ರಿ ಅಮೃತವರ್ಷಿಣಿ ಹಾಗೂ ಕುಟುಂಬಸ್ಥರು ಅಂತಿಮ ವಿಧಿವಿಧಾನದಲ್ಲಿ ಪಾಲ್ಗೊಂಡರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Upendra: ʼಯುಐʼಗೆ ಸ್ಯಾಂಡಲ್ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.