‘ಜಯ ಯಾರಿಗೆ ಎಂದು ನೋಡೇ ಬಿಡೋಣ’ : ಕನ್ನಡದ ಸುದ್ದಿ ವಾಹಿನಿಗೆ ರಕ್ಷಿತ್ ಶೆಟ್ಟಿ ಸವಾಲು
Team Udayavani, Jul 1, 2021, 6:45 PM IST
ಬೆಂಗಳೂರು: ತಮ್ಮ ತೇಜೋವಧೆ ಮಾಡುವಂತಹ ಕಾರ್ಯಕ್ರಮ ಪ್ರಸಾರ ಮಾಡಿದ ಕನ್ನಡದ ಸುದ್ದಿವಾಹಿನಿ ವಿರುದ್ಧ ನಟ ರಕ್ಷಿತ್ ಶೆಟ್ಟಿ ಆಕ್ರೋಶ ಹೊರ ಹಾಕಿದ್ದಾರೆ. ಹಾಗೂ ಆ ವಾಹಿನಿಗೆ ಬಹಿರಂಗ ಸವಾಲು ಎಸೆದಿದ್ದಾರೆ.
ಈ ಬಗ್ಗೆ ಇಂದು ಟ್ವೀಟ್ ಮಾಡಿರುವ ಅವರು, ‘ನಿಮ್ಮ ಬಳಿ ಇರುವ ಅಸ್ತ್ರ’ಟಿಆರ್ ಪಿ’ ಗೋಸ್ಕರ ನಡೆಸುತ್ತಿರುವ ಒಂದು ನ್ಯೂಸ್ ಚಾನೆಲ್. ನನ್ನ ಬಳಿ ಇರುವ ಅಸ್ತ್ರ ಕೆಲಸದ ಮೇಲಿರೋ ನನ್ನ ಶ್ರದ್ಧೆ, ಜೀವನದಲ್ಲಿ ಅಳವಡಿಸಿಕೊಂಡಿರುವ ನೀತಿ, ನನ್ನ ಸಿನಿಮಾ ಹಾಗೂ ಜನಬೆಂಬಲ. ಇವೆರಡರಲ್ಲಿ ಜಯ ಯಾರಿಗೆ ಎಂದು ನೋಡಿ ಬಿಡೋಣ’ ಎಂದು ಗುಡುಗಿದ್ದಾರೆ.
ನನ್ನ ವೃತ್ತಿ ಜೀವನದಲ್ಲಿ ಯಾರೆಲ್ಲ ನನ್ನ ಜೊತೆ ಕೆಲಸ ಮಾಡಿದ್ದಾರೋ, ಅವರಲ್ಲಿ ಶೇಕಡಾ 90 ರಷ್ಟು ಜನ ಇಂದಿಗೂ ನನ್ನ ಜೊತೆಯಲ್ಲೇ ಇರುವರು. ಬಿಟ್ಟು ಹೋದವರು ನನ್ನಿಂದ ನನ್ನ ಕೆಲಸದಿಂದ ಏನಾದರೂ ಪಡೆದುಕೊಂಡು ಹೋಗಿದ್ದಾರೆ ಹೊರತು ಯಾರೂ ಕಳೆದುಕೊಂಡು ಹೋಗಿಲ್ಲ. ಕಳೆದುಕೊಂಡವರಿಗೆ ಮುಂದೆ ಹೋಗಿ ಸಹಾಯ ಮಾಡಿದ್ದೇನೆ. ಅಥವಾ ಅವರಿಗೆ ಭುಜ ಕೊಟ್ಟು ನಿಂತಿದ್ದೇನೆ. ಇದಕ್ಕೆ ನನ್ನ ಜೊತೆ ಕೆಲಸ ಮಾಡಿದ ಪ್ರತಿಯೊಬ್ಬ ಲೈಟ್ ಆಪರೇಟರ್ ನಿಂದ ಹಿಡಿದು ಟೆಕ್ನಿಷಿಯನ್ ಡೈರೆಕ್ಟರ್ ಹಾಗೂ ಪ್ರತಿಯೊಬ್ಬ ಪ್ರೊಡ್ಯೂಸರ್ ಸಾಕ್ಷಿ. ನಾನು ಇದೆಲ್ಲದರ ಬಗ್ಗೆ ಎಲ್ಲಿಯೂ ಮಾತಾಡಲು ಬಯಸುವುದಿಲ್ಲ. ನನಗೆ ಅದರ ಅಗತ್ಯವೂ ಇಲ್ಲ. ಹಾಗಂತ ನಿಜ ಸುಳ್ಳಾಗಲ್ಲ.
ಖಾಸಗಿ ವಾಹಿನಿಯವರು ಕಳೆದ ಎರಡು ವರ್ಷಗಳಲ್ಲಿ ನನ್ನ ಬಗ್ಗೆ ಈ ರೀತಿಯ ಹಲವಾರು ಕಾರ್ಯಕ್ರಮ ಮಾಡಿದ್ದಾರೆ. ನಾನು ಈ ಎಲ್ಲ ತೇಜೋವಧೆಯ ಪ್ರಯತ್ನಗಳನ್ನು ನಿರ್ಲಕ್ಷ್ಯಿಸುತ್ತ ಬಂದಿದ್ದೆ. ಕಾರಣ ಇದಕ್ಕೆಲ್ಲ ನನ್ನ ಕೆಲಸ ಉತ್ತರ ಕೊಡುತ್ತದೆ ಎನ್ನುವ ನಂಬಿಕೆ ಇತ್ತು.
ಈಗ ಮತ್ತೊಮ್ಮೆ ಈ ಸುದ್ದಿ ವಾಹಿನಿಯು ಮಾಧ್ಯಮದ ನೈತಿಕ ಜವಾಬ್ದಾರಿಯನ್ನು ಮರೆತು ವೈಯಕ್ತಿಕ ದಾಳಿ ನಡೆಸಿ, ನನ್ನ ವ್ಯಕ್ತಿತ್ವಕ್ಕೆ ಮತ್ತೆ ಮಸಿ ಬಳಿಯುವ ಕೀಳು ಮಟ್ಟದ ಕೆಲಸಕ್ಕೆ ಇಳಿದಿದ್ದಾರೆ.
ಈ ಬಾರಿ ಇದನ್ನು ನಿರ್ಲಕ್ಷಿಸಲು ನನ್ನ ಮನಸ್ಸು ಒಪ್ಪುತ್ತಿಲ್ಲ. ಇದಕ್ಕೆ ಉತ್ತರ ಕೊಡುತ್ತೇನೆ. ಆದರೆ, 10 ದಿನಗಳ ಬಳಿಕ. ಅಲ್ಲಿಯವರೆಗೆ ನಾನು ಕೆಲಸ ಮಾಡಿದ ಪ್ರತಿಯೊಂದು ಸಿನಿಮಾದ ಕುರಿತು ನನ್ನ ಕೆಲಸದ ಕುರಿತು ಯಾವ ಯಾವ ಸತ್ಯ ಹೊರ ಬರುತ್ತದೋ ಅದಕ್ಕೆ ಸಂಬಂಧಪಟ್ಟವರ ಬಾಯಿಯಿಂದಲೆ ಹೊರ ಬರಲಿ. ನಾನು ಕಾದು ನೋಡುತ್ತೇನೆ.
ನನ್ನ ಉತ್ತರ ಜುಲೈ 11 ರಂದು. ಕಾದು ನೋಡಿ. ‘Truth is mighty And must prevail’.
ನನ್ನ ಎಲ್ಲಾ ಏಳು ಬೀಳುಗಳಲ್ಲಿ ನನ್ನ ಜೊತೆಗಿದ್ದ ನನ್ನ ಆತ್ಮೀಯರಿಗೂ ಹಿತೈಸಿಗಳಿಗೂ ಅಭಿಮಾನಿಗಳ ಬಳಗಕ್ಕೂ ಚಿರಋಣಿ ಎಂದು ಬಹಿರಂಗ ಪತ್ರ ಬರೆದಿದ್ದಾರೆ.
ನಿಮ್ಮ ಬಳಿ ಇರುವ ಅಸ್ತ್ರ TRPಗೋಸ್ಕರ ನಡೆಸುತ್ತಿರುವ ಒಂದು news channel. ನನ್ನ ಬಳಿ ಇರುವ ಅಸ್ತ್ರ ಕೆಲಸದ ಮೇಲಿರೋ ನನ್ನ ಶ್ರದ್ಧೆ, ಜೀವನದಲ್ಲಿ ಅಳವಡಿಸಿಕೊಂಡಿರುವ ನೀತಿ, ನನ್ನ ಸಿನಿಮಾ ಹಾಗು ಜನಬೆಂಬಲ. ಇವೆರಡರಲ್ಲಿ ಜಯ ಯಾರಿಗೆ ಎಂದು ನೋಡಿ ಬಿಡೋಣ… pic.twitter.com/wOpCvnE3Z9
— Rakshit Shetty (@rakshitshetty) July 1, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್
Bunts Hostel, ಕರಂಗಲ್ಪಾಡಿ ಜಂಕ್ಷನ್: ಶಾಶ್ವತ ಡಿವೈಡರ್ ನಿರ್ಮಾಣ ಕಾಮಗಾರಿ
Mangaluru: ರಾತ್ರಿ ಪ್ರಿಪೇಯ್ಡ್ ಆಟೋ ಇಲ್ಲದೆ ಪ್ರಯಾಣಿಕರ ಪರದಾಟ
Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್ ಆಗಲಿದೆ ʼಕಂಗುವʼ
Urwa: ಬಾಯ್ದೆರೆದ ಕಾಂಕ್ರೀಟ್ ಚೇಂಬರ್‌ಗಳಿಗೆ ಬಿತ್ತು ಮುಚ್ಚಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.