FIR ಕುರಿತು ರಕ್ಷಿತ್ ಶೆಟ್ಟಿ ಪ್ರತಿಕ್ರಿಯೆ: ಇದೊಂದು ಯಕ್ಷ ಪ್ರಶ್ನೆ!

ಇನ್ಯಾವ ಸಿನಿಮಾ ಕರ್ಮಿಗೂ ಈ ಪರಿಸ್ಥಿತಿ ಎದುರಾಗಬಾರದು...

Team Udayavani, Jul 15, 2024, 8:54 PM IST

1-ssa-dasd

ಬೆಂಗಳೂರು: ಕಾಪಿರೈಟ್ಸ್‌ ವಿಚಾರದಲ್ಲಿ ಎಫ್‌ ಐಆರ್‌ ದಾಖಲಾದ ಬೆನ್ನಲ್ಲೇ ನಟ,ನಿರ್ಮಾಪಕ ಹಾಗೂ ನಿರ್ದೇಶಕ ರಕ್ಷಿತ್‌ ಶೆಟ್ಟಿ(Rakshit Shetty) ಸಾಮಾಜಿಕ ತಾಣದ ಮೂಲಕ ಪ್ರತಿಕ್ರಿಯೆ ನೀಡಿದ್ದಾರೆ.

ʼಬ್ಯಾಚುಲರ್‌ ಪಾರ್ಟಿʼ(Bachelor party) ಚಿತ್ರದಲ್ಲಿ ಅನುಮತಿಯಿಲ್ಲದೆ ಎರಡು ಹಾಡುಗಳನ್ನು ಬಳಸಲಾಗಿದೆ ಎಂದು ಆರೋಪಿಸಿ ಅವರ ವಿರುದ್ಧ ಎಂಆರ್‌ಟಿ ಮ್ಯೂಸಿಕ್ ಸಂಸ್ಥೆಯ ನವೀನ್ ಕುಮಾರ್ ಎನ್ನುವವರು ಯಶವಂತಪುರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ದೂರು ದಾಖಲಾದ ಬೆನ್ನಲ್ಲೇ ರಕ್ಷಿತ್ ಅವರು ತನ್ನ ‘ಪರಂವಃ ಸ್ಟುಡಿಯೋಸ್’ ಖಾತೆಯಲ್ಲಿ ಪೋಸ್ಟ್ ಮಾಡಿದ್ದಾರೆ. ಪೋಸ್ಟ್ ಈ ರೀತಿ ಇದೆ.

”ಪ್ರೀತಿಯ ಪ್ರೇಕ್ಷಕರೆ ಮತ್ತು ಮಾಧ್ಯಮ ಮಿತ್ರರೆ, ನಾವು ಈ ಬಹಿರಂಗ ಪತ್ರವನ್ನು ಎಂ ಆರ್ ಟಿ ಮ್ಯೂಸಿಕ್ ಸಂಸ್ಥೆ ನಮ್ಮ ಮೇಲೆ ಎರಡು ಹಾಡಿನ ಹಕ್ಕು ಉಲ್ಲಂಘನೆಯ ಆರೋಪ ಮಾಡಿರುವ ಬಗ್ಗೆ ಪ್ರತಿಕ್ರಿಯೆ ನೀಡಲು ಬರೆದಿರುತ್ತೇವೆ. ಮೊದಲಿಗೆ ಸ್ಪಷ್ಟೀಕರಿಸಲು, ಚಿತ್ರದಲ್ಲಿ ಬಳಕೆಯಾಗಿರುವ ತುಣುಕುಗಳನ್ನು ನಿಮ್ಮೊಂದಿಗೆ ಹಂಚಿಕೊಳ್ಳುತ್ತಿದ್ದೇವೆ, ಕಾರಣ ಚಿತ್ರದಲ್ಲಿ ಈ ಹಾಡುಗಳು ಯಾವ ಭಾಗದಲ್ಲಿ, ಯಾವ ರೀತಿಯಲ್ಲಿ ಬಳಕೆಯಾಗಿವೆ ಎಂದು ಮತ್ತು ಬಳಕೆಯ ರೂಪವನ್ನು ನಿಮ್ಮ ಮುಂದೆ ತರಲು..

ಬಳಕೆಯ ವಿವರ
1.ತರಗತಿಯೊಂದರಲ್ಲಿ ಶಾಲಾ ಬಾಲಕಿ -”ಒಮ್ಮೆ ನಿನ್ನನ್ನು” ಹಾಡನ್ನು ಸಹಪಾಠಿಗಳ ಮುಂದೆ ಹಾಡುವುದು
2. ಮನೆಯ ಟಿವಿಯಲ್ಲಿ ”ನ್ಯಾಯ ಎಲ್ಲಿದೆ” ಹಾಡಿನ ಪ್ರಸಾರ

ಈ ಮುಂಚೆ ಅಂದರೆ, ಬ್ಯಾಚುಲರ್ ಪಾರ್ಟಿ ಸಿನಿಮಾ ತೆರೆಕಾಣುವುದಕ್ಕೂ ಮುನ್ನವೇ ನಾವು ಎಂಆರ್‌ಟಿ ಮ್ಯೂಸಿಕ್ ಸಂಸ್ಥೆ ಮುಖ್ಯಸ್ಥರೊಂದಿಗೆ ಈ ಕುರಿತು ಮಾತುಕತೆ ನಡೆಸಿದ್ದೆವು. ಆದರೆ, ಅವರು ನಮ್ಮ ಮುಂದೆ ಇತ್ತ ಶುಲ್ಕ ನಮ್ಮ ಬಜೆಟ್ ಅನ್ನು ಮೀರಿತ್ತು. ಎಂಆರ್‌ಟಿ ಮ್ಯೂಸಿಕ್ ಸಂಸ್ಥೆ ಶುಲ್ಕದ ಕುರಿತು ಮಾತುಕತೆಗೆ ತಯಾರಿರಲಿಲ್ಲ. ಈಗ ನಮ್ಮ ಮೇಲೆ ಹಾಡಿನ ಉಲ್ಲಂಘನೆಯ ಆರೋಪ ಬಂದಿದ್ದು, ಎಫ್ ಐಆರ್ ದಾಖಲಾಗಿದೆ. ಇದು ನಿಜವಾಗಿ ಹಾಡಿನ ಹಕ್ಕು ಉಲ್ಲಂಘನೆಯೇ ? ಹೌದಾಗಿದ್ದೆ ಆಗಿದ್ದಲ್ಲಿ ನಾವು ತೆರಬೇಕಾದ ದಂಡವಾದರೂ ಎಷ್ಟು? ಏಕೆಂದರೆ ಎಂಆರ್‌ಟಿ ಸಂಸ್ಥೆಯಿಂದ ಕೇಳಲ್ ಪಟ್ಟಿದ್ದು ಬೃಹತ್ ಮೊತ್ತ ಎಂದರೆ ತಪ್ಪಾಗಲಾರದು. ಅಲ್ಲವಾದರೆ ಈ ತರಹದ ಆರೋಪವನ್ನು ಈಗಾಗಲಿ ಅಥವಾ ಮುಂಬರುವ ದಿನಗಳಲ್ಲಾಗಲಿ ಹೇಗೆ ಸಹಿಸಿಕೊಳ್ಳುವುದು! ಇದೊಂದು ಯಕ್ಷ ಪ್ರಶ್ನೆ! ಇದಕ್ಕೆ ಉತ್ತರ ನಾವು ಹುಡುಕ ಬಯಸುತ್ತೇವೆ. ಹಾಗಾಗಲಿ, ನ್ಯಾಯ ಮತ್ತು ಪ್ರಬುದ್ಧತೆಯನ್ನು ಕಾಪಾಡಿಕೊಳ್ಳಲು ನಾವು ಇದನ್ನು ನ್ಯಾಯ ಸ್ಥಾನದಲ್ಲಿಯೇ ನಿರ್ಧಾರವಾಗಲಿ ಎಂದು ನ್ಯಾಯಾಲಯದ ಮೊರೆ ಹೋಗುತ್ತಿದ್ದೇವೆ. ಇದರಿಂದ ಮುಂಬರುವ ದಿನಗಳಲ್ಲಿ, ನಮಗಷ್ಟೇ ಅಲ್ಲ, ಬೇರೆ ಇನ್ಯಾವ ಸಿನಿಮಾ ಕರ್ಮಿಗೂ ಈ ಪರಿಸ್ಥಿತಿ ಹಾಗೂ ಗೊಂದಲ ಎದುರಾಗಬಾರದೆಂದು ನಮ್ಮ ಈ ಪ್ರಾಮಾಣಿಕ ಪ್ರಯತ್ನ, ನಿಮ್ಮ ಬೆಂಬಲ ಮತ್ತು ಪ್ರೀತಿಯನ್ನು ಆಶಿಸುವ ಪರಂವಃ ಸ್ಟುಡಿಯೋಸ್ ” ಎಂದು ಪೋಸ್ಟ್ ಮಾಡಿದ್ದಾರೆ.

ಟಾಪ್ ನ್ಯೂಸ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

Vijay Raghavendra is in Rudrabhishekam Movie

Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್‌ ರಾಘವೇಂದ್ರ

Shivaraj-Kumar

Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್‌

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್

Love Reddy movie released today

Love Reddy: ತೆರೆಗೆ ಬಂತು ʼಲವ್‌ ರೆಡ್ಡಿʼ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

drowned

Honnavar;ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಯುವತಿಯರ ರಕ್ಷಣೆ

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್

ncp

NCP Vs NCP: ಶರದ್‌ ಬಣದ ವಿರುದ್ಧ 29 ಕ್ಷೇತ್ರ ಗೆದ್ದ ಅಜಿತ್‌ ಬಣ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.