ವಯಸ್ಸು ಎಪ್ಪತ್ತೈದು, ಬಣ್ಣದ ಬದುಕಿಗೆ 50: ಹಿರಿಯ ನಟ ಶ್ರೀನಿವಾಸ ಮೂರ್ತಿ ಮನದ ಮಾತು..


Team Udayavani, May 10, 2023, 3:07 PM IST

srinivas-murthy

“ನಾನೊಬ್ಬ ಕಲಾವಿದನಾಗಿ ಜನರಿಗೆ ಪರಿಚಯವಾದೆ. ಜನ ಎಲ್ಲೇ ಹೋದರೂ, ನನ್ನನ್ನು ಕಲಾವಿದನಾಗಿ ಗುರುತಿಸಿ ಮಾತನಾಡಿಸುತ್ತಾರೆ. ನನಗೀಗ 75 ವರ್ಷವಾಗಿದೆ. ಈ ಬಣ್ಣದ ನಂಟು, ಬಣ್ಣದ ಬದುಕಿಗೆ ಬಂದು 50 ವರ್ಷವಾಗುತ್ತಿದೆ. ಒಬ್ಬ ಕಲಾವಿದನಾಗಿ ಈ ಬದುಕಿನಲ್ಲಿ ತೃಪ್ತಿ ಕಂಡಿದ್ದೇನೆ’ ಇದು ಹಿರಿಯ

ನಟ ಶ್ರೀನಿವಾಸ ಮೂರ್ತಿ ಅವರ ಮಾತು.  ಹೌದು, ರಂಗಭೂಮಿ ಕಲಾವಿದನಾಗಿ ಆನಂತರ ಚಿತ್ರರಂಗದಲ್ಲಿ ನಾಯಕ, ನಿರ್ಮಾಪಕ, ಪೋಷಕ ಕಲಾವಿದನಾಗಿ ಗುರುತಿಸಿಕೊಂಡಿರುವ ಹಿರಿಯ ನಟ ಶ್ರೀನಿವಾಸ ಮೂರ್ತಿ ಅವರಿಗೀಗ 75 ವರ್ಷ. ಇದೇ ವರ್ಷ ಶ್ರೀನಿವಾಸ ಮೂರ್ತಿ ಬಣ್ಣದ ಬದುಕಿಗೆ ಕಾಲಿಟ್ಟು 50 ವರ್ಷವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಶ್ರೀನಿವಾಸ ಮೂರ್ತಿ ಇದೇ ಮೇ 15 ಮತ್ತು 16 ರಂದು ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ನಡೆಯಲಿರುವ “ತರಕಾರಿ ಚೆನ್ನಿ’ ಮತ್ತು “ಸದಾರಮೆ ಕಳ್ಳ’ ಎಂಬ ಎರಡು ನಾಟಕಗಳಲ್ಲಿ ವಿಶೇಷ ಪ್ರದರ್ಶನ ನೀಡಲಿದ್ದಾರೆ.

ತಮಗೆ 75 ಮತ್ತು ತಮ್ಮ ಬಣ್ಣದ ಬದುಕಿಗೆ 50 ವರ್ಷವಾಗುತ್ತಿರುವ ಈ ಸಂದರ್ಭದಲ್ಲಿ ಮಾತನಾಡಿದ ಶ್ರೀನಿವಾಸ ಮೂರ್ತಿ, “ಈಗ ನನಗೆ 75 ವರ್ಷ ಆಗಿದೆ. ಜತೆಗೆ ನಾನು ಬಣ್ಣದ ಬದುಕಿಗೆ ಬಂದು 50 ವರ್ಷಗಳಾಗುತ್ತಿವೆ. ಈ ನೆನಪಿನಲ್ಲಿ “ತರಕಾರಿ ಚೆನ್ನಿ’ ಮತ್ತು “ಸದಾರಮೆ ಕಳ್ಳ’ ಎಂಬ ನಾಟಕಗಳನ್ನು ಪ್ರದರ್ಶನ ಮಾಡುವ ಮೂಲಕ ನನ್ನ ಬದುಕಿಗೆ ನಾನು ಸಾರ್ಥಕತೆ ಕಂಡುಕೊಳ್ಳುತ್ತಿರುವೆ’ ಎನ್ನುತ್ತಾರೆ.

“ನಾನು ದೊಡ್ಡಬಳ್ಳಾಪುರದಿಂದ ಬೆಂಗಳೂರಿಗೆ ಬಂದು ಸರ್ವೆ ಇಲಾಖೆಯಲ್ಲಿ ಉದ್ಯೋಗಿಯಾಗಿ ಕೆಲಸ ಮಾಡುತ್ತಿದ್ದೆ. ಆ ವೇಳೆ ನಾಟಕದ ರುಚಿ ಹತ್ತಿಸಿಕೊಂಡೆ. ಒಮ್ಮೆ ಬಂಗಾರಪ್ಪ ನನ್ನ ನಾಟಕ ನೋಡಲು ಬಂದರು. ನಾಟಕ ನೋಡಿದ ನಂತರ, ಇನ್ನು ಮೇಲೆ ಇಲಾಖೆಯಲ್ಲಿ ಇವರಿಗೆ ಏನೂ ಕೆಲಸ ಹೇಳಬೇಡಿ. ಕಲಾವಿದರಾಗಿ ಹೆಚ್ಚು ತೊಡಗಿಸಿಕೊಳ್ಳಲಿ ಎಂದು ಅಧಿಕಾರಿಗಳಿಗೆ ಸೂಚಿಸಿದರು. ಅಲ್ಲಿಂದ ನಟನೆ ಹೆಚ್ಚಾಯಿತು’ ಎಂದು ತಮ್ಮ ಬಣ್ಣದ ಬದುಕಿನ ಆರಂಭದ ದಿನಗಳನ್ನು ಮೆಲುಕು ಹಾಕುತ್ತಾರೆ ಶ್ರೀನಿವಾಸ ಮೂರ್ತಿ.

“ತಮಿಳಿನ “ಕಾಲತ್ತಿಲ್’ ಸಿನಿಮಾಕ್ಕೆ ಹೀರೋ ಆದೆ. ಆದ್ರೆ ಆ ಸಿನಿಮಾದ ಬಿಡುಗಡೆ ಸಮಯದಲ್ಲಿ ನಿರ್ಮಾಪಕರು ಅರೆಸ್ಟ್‌ ಆದರು. ಮುಂದೆ “ಅಪ್ಪು’ ಸಿನಿಮಾದಲ್ಲಿ ನನ್ನ ಪಾತ್ರ ನೋಡಿದ ನಿರ್ದೇಶಕ ಪುರಿ ಜಗನ್ನಾಥ್‌ ತೆಲುಗಿಗೆ ನನ್ನ ಕರೆದರೂ, ಇಲ್ಲಿ ಒಂದಷ್ಟು ಸಿನಿಮಾಗಳಲ್ಲಿ ಬಿಝಿಯಾಗಿದ್ದರಿಂದ ಅಲ್ಲಿಗೂ ಹೋಗಲಿಲ್ಲ. ಬೇರೆ ಭಾಷೆಗಳಿಂದಲೂ ಕರೆ ಬಂದಿರೂ ಹೋಗಲಿಲ್ಲ. ಹಾಗಾಗಿ ಪರಭಾಷೆಗಳಲ್ಲಿ ನಟಿಸುವ ಕನಸು ಹಾಗೆ ಉಳಿದು ಹೋಯಿತು. “ನೀನು ಯಾಕೆ ತಮಿಳು ಚಿತ್ರಗಳಲ್ಲಿ ಬಂದು ನಟಿಸಬಾರದು? ಬಾ ಇಲ್ಲಿಗೆ’ ಅಂತ ರಜನಿಕಾಂತ್‌ ಆಗಾಗ ಕರೆಯುತ್ತಿರುತ್ತಾರೆ’ ಎಂದು ಬೇರೆ ಭಾಷೆಗಳಲ್ಲೂ ತಮಗಿದ್ದ ಅವಕಾಶಗಳ ಬಗ್ಗೆ ಮಾತನಾಡುತ್ತಾರೆ ಶ್ರೀನಿವಾಸ ಮೂರ್ತಿ.

ಟಾಪ್ ನ್ಯೂಸ್

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

1-parm

Caste ನೋಡಿ ಮತ ಹಾಕಿದರೆ ಸಮಾಜದಲ್ಲಿ ಬದಲಾವಣೆ ಅಸಾಧ್ಯ : ಸಿಎಂ ಸಿದ್ದರಾಮಯ್ಯ

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

ಶ್ರೀಮಂತ ಟೊಕಿಯೊ ಈ ದುಸ್ಥಿತಿಗೆ ತಲುಪಿದ್ಯಾಕೆ…ಈ ದೇಶವೀಗ ಸೆ*ಕ್ಸ್‌ ಟೂರಿಸಂ ಹಬ್ಬ!

BJP-waqf-Protest

BJP Protest: ʼ1,500 ವರ್ಷದ ಹಿಂದೆ ಅಲ್ಲಾನು ಇರಲಿಲ್ಲ ಮುಲ್ಲಾನೂ ಇರಲಿಲ್ಲʼ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Love Reddy movie released today

Love Reddy: ತೆರೆಗೆ ಬಂತು ʼಲವ್‌ ರೆಡ್ಡಿʼ

tenant kannada movie

Sandalwood: ತೆರೆಗೆ ಬಂತು ʼಟೆನೆಂಟ್ʼ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್‌; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ

Sandalwood: ಮಾಸ್‌ ಸಿನಿಮಾಗಳಿಗ ಜೈ ಎಂದ ಪ್ರೇಕ್ಷಕ

Sandalwood: ಮಾಸ್‌ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

madhu-bangara

Madhu Bangarappa ; ಟ್ರೋಲ್ ಗಳಿಗೆ ಬಗ್ಗಲ್ಲ.. ಕಿಡಿ ಕಿಡಿಯಾದ ಶಿಕ್ಷಣ ಸಚಿವ!

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.