ಆ್ಯಕ್ಟಿಂಗ್ ಡೈರೆಕ್ಷನ್ ಎರಡಕ್ಕೂ ಸೈ… ಬಿಝಿ ಅಪೂರ್ವ
Team Udayavani, Apr 30, 2022, 3:30 PM IST
ಕ್ರೇಜಿಸ್ಟಾರ್ ರವಿಚಂದ್ರನ್ ಅಭಿನಯದ “ಅಪೂರ್ವ’ ಸಿನಿಮಾದಲ್ಲಿ ನಾಯಕಿಯಾಗುವ ಮೂಲಕ ಚಂದನವನಕ್ಕೆ ಪರಿಚಯವಾದ ನಟಿ ಅಪೂರ್ವ, ನಂತರ “ವಿಕ್ಟರಿ’, “ಕೃಷ್ಣ ಟಾಕೀಸ್’ ಸಿನಿಮಾದ ಮೂಲಕ ಭರವಸೆಯ ನಾಯಕ ನಟಿಯಾಗಿ ಗುರುತಿಸಿಕೊಂಡವರು. ನಾಯಕಿಯಾಗಿ ಒಂದಷ್ಟು ಅವಕಾಶಗಳು ಕೈಯಲ್ಲಿರುವಾಗಲೇ ಅಪೂರ್ವಾ ಈಗ ನಿರ್ದೇಶಕಿಯಾಗಿಯೂ ಗುರುತಿಸಿಕೊಳ್ಳುತ್ತಿದ್ದಾರೆ.
“ಓ ನನ್ನ ಚೇತನ’ ಎಂಬ ಸಿನಿಮಾವನ್ನು ನಿರ್ದೇಶಿಸುವ ಮೂಲಕ ಅಪೂರ್ವಾ, ಈಗ ನಿರ್ದೇಶಕಿಯಾಗಿಯೂ ಬಡ್ತಿ ಪಡೆದುಕೊಂಡಿದ್ದಾರೆ. ಇಂದಿನ ಮಕ್ಕಳು ಹಾಗೂ ಸ್ಮಾರ್ಟ್ ಪೋನ್ ವಿಷಯವನ್ನು ಇಟ್ಟುಕೊಂಡು ತಯಾರಾದ ಈ ಚಿತ್ರ, ಇತ್ತೀಚೆಗೆ ನಡೆದ 13ನೇ “ಬೆಂಗಳೂರು ಅಂತರ ರಾಷ್ಟ್ರೀಯ ಸಿನಿಮೋತ್ಸವದಲ್ಲಿ ಪ್ರದರ್ಶನಗೊಂಡು ವಿಮರ್ಶಕರ ಮೆಚ್ಚುಗೆಗೂ ಪಾತ್ರವಾಗಿತ್ತು.
ಅಂದಹಾಗೆ, ಹೋಮ್ಲಿ ಮತ್ತು ಗ್ಲಾಮರಸ್ ಎರಡೂ ಥರದ ಲುಕ್ಗೂ ಸೈ ಎನಿಸಿಕೊಂಡಿರುವ ಅಪೂರ್ವಾ, ಈಗ “ಪುರುಷೋತ್ತಮ’ ಚಿತ್ರದಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದು, ಇದೇ ಮೇ ತಿಂಗಳಿನಲ್ಲಿ ಚಿತ್ರ ತೆರೆ ಕಾಣುತ್ತಿದೆ.
ಇದನ್ನೂ ಓದಿ:‘ಬೆಂಕಿ’ಯಲ್ಲಿ ಅರಳಿದ ಹಾಡು
ಇನ್ನು “ಪುರುಷೋತ್ತಮ’ ಚಿತ್ರದಲ್ಲಿ ಅಪೂರ್ವಾ ಕಂಪ್ಲೀಟ್ ಹೋಮ್ಲಿ ಲುಕ್ನಲ್ಲಿ ಕಾಣಿಸಿಕೊಳ್ಳುತ್ತಿದ್ದಾರಂತೆ. ಇತ್ತೀಚೆಗೆ ನಟ ಮತ್ತು ನಿರ್ದೇಶಕ ರಿಷಭ್ ಶೆಟ್ಟಿ, “ಪುರುಷೋತ್ತಮ’ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Harapanahalli: ಪ್ರತಿಷ್ಠೆಯ ಕಣವಾದ ಬಿ90 ಸೊಸೈಟಿ ಚುನಾವಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.