ಕಸದ ರಾಶಿ ಪಕ್ಕ ನಟಿ ಬಿ. ಜಯಮ್ಮ ಮೃತದೇಹ : ಕುಟುಂಬಸ್ಥರು ಹೇಳಿದ್ದೇನು ?
Team Udayavani, Jun 5, 2021, 12:52 PM IST
ಬೆಂಗಳೂರು: ಹಿರಿಯ ನಟಿ ಬಿ. ಜಯಮ್ಮ ಮೃತದೇಹ ರಸ್ತೆ ಪಕ್ಕದಲ್ಲಿ ಅನಾಥವಾಗಿದ್ದ ವಿಡಿಯೋ ಕುರಿತು ಅವರ ಕುಟುಂಬಸ್ಥರು ಸ್ಪಷ್ಟನೆ ನೀಡಿದ್ದಾರೆ.
ಸೋಷಿಯಲ್ ಮೀಡಿಯಾದಲ್ಲಿ ಹರಿದಾಡಿದ ವಿಡಿಯೋ ಕುರಿತು ಜಯಾ ಸಹೋದರನ ಪುತ್ರಿ ಮಾತನಾಡಿದ್ದು, ಕೊವಿಡ್ ನಿಂದಾಗಿ ಅವರ ಅಂತ್ಯಸಂಸ್ಕಾರಕ್ಕೆ ಯಾರೂ ಬರುವುದು ಬೇಡ ಎಂದು ನಾವೇ ಹೇಳಿದ್ದೆವು. 11.30 ರಿಂದ 12 ಗಂಟೆಯವರೆಗೆ ನಮಗೆ ಸ್ಮಶಾನದಲ್ಲಿ ಸಮಯ ನಿಗದಿಯಾಗಿತ್ತು. ಆದರೆ ಒಳಗಡೆ ನಮ್ಮ ಸಂಪ್ರದಾಯ ಪ್ರಕಾರ ವಿಧಿ ವಿಧಾನ ಮಾಡಲು ಅವಕಾಶವಿರಲಿಲ್ಲ. ಹೀಗಾಗಿ ಅಲ್ಲಿನ ನಿಯಮದ ಪ್ರಕಾರ ಹೊರಗಡೆಯೇ ಪೂಜೆ ಮಾಡಬೇಕಾಯ್ತು.ಹಾಗಾಗಿ ರಸ್ತೆ ಪಕ್ಕದಲ್ಲೇ ಪೂಜೆ ಮಾಡಿದ್ವಿ. ಇದನ್ನೇ ಯಾರೋ ವಿಡಿಯೋ ಮಾಡಿ ಅಪಪ್ರಚಾರ ಮಾಡಿದ್ದಾರೆ ಎಂದು ಸ್ಪಷ್ಟನೆ ನೀಡಿದ್ದಾರೆ.
ಇನ್ನು ಕನ್ನಡದಲ್ಲಿ ಹಲವು ಸಿನಿಮಾ, ಧಾರವಾಹಿಗಳಲ್ಲಿ ನಟಿಸಿದ ಹಿರಿಯ ನಟಿ ಮೃತದೇಹ ಕಸದ ರಾಶಿಯ ಪಕ್ಕ, ರಸ್ತೆ ಬದಿಯಲ್ಲಿ ಇಡಲಾಗಿರುವ ದೃಶ್ಯವನ್ನು ಕೆಲವರು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದರು. ಅವಿವಾಹಿತರಾಗಿದ್ದ ಜಯಮ್ಮ ಅಂತ್ಯ ಸಂಸ್ಕಾರ ಮಾಡಲು ಕುಟುಂಬಸ್ಥರೂ ಬಂದಿಲ್ಲ. ಹಿರಿಯ ನಟ ಶವ ಅನಾಥವಾಗಿದೆ ಎಂದು ಆರೋಪ ಕೇಳಿಬಂದಿತ್ತು. ಕನ್ನಡ ಚಿತ್ರರಂಗದವರು ಘಟನೆ ಕುರಿತು ಆಘಾತ ವ್ಯಕ್ತಪಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
OTT Release Date: ಸೂಪರ್ ಹಿಟ್ ʼಭೈರತಿ ರಣಗಲ್ʼ ಓಟಿಟಿ ರಿಲೀಸ್‌ಗೆ ಡೇಟ್ ಫಿಕ್ಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Banahatti: ತಾಂತ್ರಿಕ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಬದ್ಧಳಾಗಿದ್ದೇನೆ: ಉಮಾಶ್ರೀ
Road Mishap; ದ್ವಿಚಕ್ರ ವಾಹನ-ಲಾರಿ ನಡುವೆ ಅಪಘಾತ: ದಂಪತಿ ಸಾವು
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.