Kannad Cinema; ಸೆನ್ಸಾರ್ ಪಾಸಾದ ‘ಅಥಿ ಐ ಲವ್ ಯು’
Team Udayavani, Dec 2, 2023, 5:53 PM IST
ಲೋಕೇಂದ್ರ ಸೂರ್ಯ ಮತ್ತು ಸಾತ್ವಿಕಾರಾವ್ ಅಭಿನಯದ “ಅಥಿ ಐ ಲವ್ ಯು’ ಸಿನಿಮಾ ಬಿಡುಗಡೆಗೆ ಸಿದ್ದವಾಗುತ್ತಿದೆ. ಈಗಾಗಲೇ “ಅಥಿ’ ಸಿನಿಮಾದ ಟ್ರೇಲರ್ಗೆ ಸೋಶಿಯಲ್ ಮೀಡಿಯಾದಲ್ಲಿ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಈಗ ಸೆನ್ಸಾರ್ ನಿಂದ ಚಿತ್ರಕ್ಕೆ “ಯು’ ಪ್ರಮಾಣ ಪತ್ರ ಸಿಕ್ಕಿ ದೆ. ಸೆವೆನ್ ರಾಜ್ ಈ ಚಿತ್ರದ ನಿರ್ಮಾಪಕರು.
“ಈ ಸಿನಿಮಾ ಅಥಿ ಹಾಗೂ ವಸಂತ್ ಎಂಬ ಎರಡು ಪಾತ್ರಗಳ ಸುತ್ತ ನಡೆಯುತ್ತದೆ. ಇದು ಒಂದ ದಿನ, ಒಂದೇ ಮನೆಯಲ್ಲಿ ನಡೆಯುವ ಕಥೆ. ಪ್ರತಿದಿನ ಬೆಳಗ್ಗೆ ಕೆಲಸಕ್ಕೆ ಹೋಗುವ ಗಂಡ ದಿನ ರಾತ್ರಿ ವಾಪಸು ಬರುತ್ತಾನೆ. ಒಂದು ದಿನ ಇದಕ್ಕಿದಂತೆ ಗಂಡ ಮಧ್ಯಾಹ್ನ ಮನೆಗೆ ಬಂದಾಗ ಮನೆಯಲ್ಲಿ ಹೆಂಡತಿ ಏನು ಮಾಡುತ್ತಿರುತ್ತಾಳೆ? ಎಂಬುದನ್ನು ತೆರೆಯ ಮೇಲೆ ನೋಡಬೇಕು. ನಮ್ಮ ಸಿನಿಮಾವನ್ನು ಮದುವೆಯಾದ ದಂಪತಿಗಳು ಹಾಗೂ ಪ್ರೀತಿ ಮಾಡುತ್ತಿರುವವರು ನೋಡಿ. ಸಿನಿಮಾದಲ್ಲಿ ಸಮಾಜಕ್ಕೆ ಒಂದೊಳ್ಳೆ ಉತ್ತಮ ಸಂದೇಶ ಕೊಡುವ ಪ್ರಯತ್ನ ಮಾಡಿದ್ದೇವೆ. ಇಡೀ ಸಿನಿಮಾದಲ್ಲಿ ಎರಡೇ ಪಾತ್ರಗಳು ಮಾತ್ರ ನಿಮಗೆ ತೆರೆಯ ಮೇಲೆ ಕಾಣುವುದು. ಉಳಿದ ಪಾತ್ರಗಳು ಧ್ವನಿಯ ಮೂಲಕ ಸಿನಿಮಾಕ್ಕೆ ಜೀವ ತುಂಬಿದೆ’ ಎಂಬುದು ಕಥಾಹಂದರದ ಬಗ್ಗೆ ಲೋಕೇಂದ್ರ ಸೂರ್ಯ ನೀಡುವ ವಿವರಣೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.