Kannada Cinema; ತೆರೆಗೆ ಬರುತ್ತಿದ್ದಾಳೆ ‘ತಾರಿಣಿ’
Team Udayavani, Mar 9, 2024, 6:15 PM IST
ಈಗಾಗಲೇ ಹಲವು ಪ್ರತಿಷ್ಠಿತ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡು, ವಿವಿಧ ವಿಭಾಗಗಳಲ್ಲಿ ಸುಮಾರು 25ಕ್ಕೂ ಹೆಚ್ಚು ಪ್ರಶಸ್ತಿಗಳನ್ನು ಬಾಚಿಕೊಂಡಿರುವ ಮಹಿಳಾ ಪ್ರಧಾನ ಕಥಾಹಂದರದ “ತಾರಿಣಿ’ ಸಿನಿಮಾ ಇದೇ ಮಾರ್ಚ್ 29ಕ್ಕೆ ಬಿಡುಗಡೆಯಾಗುತ್ತಿದೆ.
ಸಿದ್ದು ಪೂರ್ಣಚಂದ್ರ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ “ತಾರಿಣಿ’ ಸಿನಿಮಾವನ್ನು “ಶ್ರೀಗಜನಿ ಪ್ರೊಡಕ್ಷನ್ಸ್’ ಬ್ಯಾನರಿನಲ್ಲಿ ಡಾ. ಸುರೇಶ್ ಕೋಟ್ಯಾನ್ ಚಿತ್ರಾಪು ಬಂಡವಾಳ ಹೂಡಿ ನಿರ್ಮಿಸಿದ್ದಾರೆ.
ಹೆಣ್ಣು ಭ್ರೂಣ ಹತ್ಯೆ ಕುರಿತಾದ ಕಥಾಹಂದರ ಹೊಂದಿರುವ “ತಾರಿಣಿ’ ಸಿನಿಮಾದಲ್ಲಿ ನಟಿ ಮಮತಾ ರಾಹುತ್ ಗರ್ಭಿಣಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ವೈಯಕ್ತಿಕ ಜೀವನದಲ್ಲಿ ಗರ್ಭಿಣಿಯಾಗಿದ್ದಾಗಲೇ ತೆರೆಮೇಲೆ ಕೂಡ ಮಮತಾ ರಾಹುತ್ ಗರ್ಭಿಣಿ ಪಾತ್ರದಲ್ಲೇ ಕಾಣಿಸಿಕೊಂಡಿರುವುದು ಈ ಸಿನಿಮಾದ ಮತ್ತೂಂದು ವಿಶೇಷ.
ಉಳಿದಂತೆ ರೋಹಿತ್, ಭವಾನಿ ಪ್ರಕಾಶ್, ವಿಜಯ ಲಕ್ಷ್ಮೀ, ಡಾ. ಸುರೇಶ್ ಕೋಟ್ಯಾನ್ ಅಭಿನಯಿಸಿದ್ದಾರೆ. ಸಿನಿಮಾಕ್ಕೆ ಅನಂತ್ ಆರ್ಯನ್ ಸಂಗೀತ, ರಾಜು ಹೆಮ್ಮಿಗೇಪುರ ಛಾಯಾಗ್ರಹಣ, ದೀಪಕ್ ಸಿ. ಎಸ್ ಸಂಕಲನವಿದೆ.
“ಅಯೋಧ್ಯ ಇಂಟರ್‌ನ್ಯಾಶನಲ್ ಫಿಲಂ ಫೆಸ್ಟಿವಲ್’, “ರಾಜಸ್ಥಾನ್ ಇಂಟರ್‌ನ್ಯಾಶನಲ್ ಫಿಲಂ ಫೆಸ್ಟಿವಲ್’, “ಬೆಂಗಳೂರು ಇಂಟರ್‌ನ್ಯಾಶನಲ್ ಫಿಲಂ ಫೆಸ್ಟಿವಲ್’, “ವಿಂಧ್ಯ ಇಂಟರ್‌ನ್ಯಾಶನಲ್ ಫಿಲಂ ಫೆಸ್ಟಿವಲ್’, “ನ್ಯೂಯಾರ್ಕ್ ಫಿಲಂ ಫೆಸ್ಟಿವಲ್’ ಹೀಗೆ ಹಲವು ಪ್ರತಿಷ್ಠಿತ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರದರ್ಶನಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್ ಅನಿಸಿತು…
UI Movie: 9 ವರ್ಷ ಬಳಿಕ ಉಪ್ಪಿ ಡೈರೆಕ್ಟ್ ಮಾಡಿದ ಯು-ಐ ಸಿನಿಮಾದ ಹೈಲೈಟ್ಸ್ ಏನು?
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
TuluMovie; ತೆರೆಗೆ ಬರಲು ಸಿದ್ದವಾಯ್ತು ಮಿಡಲ್ ಕ್ಲಾಸ್ ಫ್ಯಾಮಿಲಿ: ರಿಲೀಸ್ ದಿನಾಂಕ ಬಂತು
BJP ಪೂರ್ವಾಂಚಲಿಗಳನ್ನು ರೋಹಿಂಗ್ಯಾಗಳೆಂದು ಮತಗಳನ್ನು ಅಳಿಸುತ್ತಿದೆ: ಕೇಜ್ರಿವಾಲ್ ಆರೋಪ
Gold & Cash: ಕಾಡಿನ ಬಳಿ ನಿಲ್ಲಿಸಿದ್ದ ಕಾರಿನಲ್ಲಿ 52 ಕೆ.ಜಿ ಚಿನ್ನ, 9 ಕೋಟಿ ನಗದು ಪತ್ತೆ
Aligarh; ಮುಸ್ಲಿಂ ಬಾಹುಳ್ಯದ ಪ್ರದೇಶದಲ್ಲಿ ಮತ್ತೊಂದು ಶಿವ ದೇವಾಲಯ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.