Kannada ಖ್ಯಾತ ನಟ ಕಿರಣ್ ರಾಜ್ ಕಾರು ಅಪಘಾತ: ಐಸಿಯುನಲ್ಲಿ ಚಿಕಿತ್ಸೆ
ನಾಳೆ ಬಹು ನಿರೀಕ್ಷಿತ ಸಿನಿಮಾ ಬಿಡುಗಡೆಯಾಗುತ್ತಿದೆ... ಕಾರು ಸಂಪೂರ್ಣ ಜಖಂ!!
Team Udayavani, Sep 11, 2024, 10:14 AM IST
ಬೆಂಗಳೂರು: ಉದಯೋನ್ಮುಖ ಖ್ಯಾತ ಯುವನಟ ಕಿರಣ್ ರಾಜ್(Kiran raj) ಅವರು ಕಾರು ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡ ಘಟನೆ ಕೆಂಗೇರಿ ಬಳಿ ಮಂಗಳವಾರ ರಾತ್ರಿ (ಸೆ 10) ರಂದು ನಡೆದಿದೆ.
ಕಿರಣ್ ರಾಜ್ ಅವರೊಂದಿಗೆ ಬೆಂಜ್ ಕಾರಿನಲ್ಲಿ ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಇದ್ದಿದ್ದು ಅವರು ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಚಾಲಕನ ನಿಯಂತ್ರಣ ತಪ್ಪಿ ಕಾರು ಡಿವೈಡರ್ಗೆ ಡಿಕ್ಕಿಯಾದ್ದು, ಕಾರು ಸಂಪೂರ್ಣ ಜಖಂಗೊಂಡಿದೆ. ಕಾರಿನ ಮುಂದಿನ ಚಕ್ರ ಕಳಚಿ ಬಿದ್ದಿರುವುದು ಅಪಘಾತದ ತೀವ್ರತೆಗೆ ಸಾಕ್ಷಿಯಾಗಿದೆ.
31 ರ ಹರೆಯದ ಕಿರಣ್ ರಾಜ್ ಅವರನ್ನು ಆಸ್ಪತೆಗೆ ದಾಖಲಿಸಲಾಗಿದ್ದು ಅವರ ಎದೆಯ ಭಾಗಕ್ಕೆ ಗಂಭೀರ ಸ್ವರೂಪದ ಗಾಯವಾಗಿದ್ದು ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿಯಾಗಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ.
ಗುಟ್ಟಯ್ಯನ ಪಾಳ್ಯದ ಸಿದ್ದೇಶ್ವರ ನಿರಾಶ್ರಿತ ಕೇಂದ್ರಕ್ಕೆ ಭೇಟಿ ನೀಡಿ ವಾಪಾಸಾಗುತ್ತಿದ್ದ ವೇಳೆ ಅವಘಡ ನಡೆದಿದೆ ಎನ್ನಲಾಗಿದೆ. ಪ್ರತಿವಾರವೂ ಅಲ್ಲಿಗೆ ಭೇಟಿ ನೀಡಿ ಊಟ ನೀಡುತ್ತಿದ್ದರು ಎಂದು ತಿಳಿದು ಬಂದಿದೆ.
”ಕನ್ನಡತಿ” ಧಾರಾವಾಹಿಯ ಹರ್ಷ ಪಾತ್ರದ ಮೂಲಕ ಜನಪ್ರಿಯರಾಗಿದ್ದರು. ಚಿತ್ರರಂಗಕ್ಕೂ ಕಾಲಿಟ್ಟಿದ್ದ ಕಿರಣ್ ರಾಜ್ ಅಭಿನಯದ ರಾನಿ ಸಿನಿಮಾ ನಾಳೆ(ಗುರುವಾರ-ಸೆ.12)ಬಿಡುಗಡೆಯಾಗುತ್ತಿದೆ. ಟೀಸರ್, ಟ್ರೇಲರ್ ಬಿಡುಗಡೆಯಾಗಿದ್ದು ಚಿತ್ರ ನಿರೀಕ್ಷೆ ಹುಟ್ಟುಹಾಕಿದೆ.
ಕಿರಣ್ ರಾಜ್ ಕನ್ನಡ ಕನ್ನಡ ಕಿರುತೆರೆ ಮಾತ್ರವಲ್ಲದೆ ತೆಲುಗು ಮತ್ತು ಹಿಂದಿಯಲ್ಲೂ ಧಾರವಾಹಿ ಮತ್ತು ಚಿತ್ರಗಳಲ್ಲಿ ನಟಿಸಿದ್ದಾರೆ.ಹಿಂದಿಯ ಲವ್ ಬೈ ಚಾನ್ಸ್, ಯೇ ರಿಸ್ತಾ ಕ್ಯಾ ಕೆಹಲಾತಾ ಹೈ, ಹೀರೋಸ್ ಮೊದಲಾದ ಸೀರಿಯಲ್ ಗಳಲ್ಲಿ ನಟಿಸಿದ್ದಾರೆ.
ದೇವತೆ, ಕಿನ್ನರಿ, ಕನ್ನಡತಿ ಧಾರಾವಾಹಿಗಳಲ್ಲಿ ನಟಿಸಿದ್ದಾರೆ. ಹಾಗೇ ಮಾರ್ಚ್ 22 ,ಅಸತೋಮ ಸದ್ಗಮಯ, ಜೀವ್ನಾನೇ ನಾಟ್ಕ ಸ್ವಾಮಿ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ತೆಲುಗಿನ ನುವ್ವೇ ನಾ ಪ್ರಾಣಂ, ವಿಕ್ರಮ್ ಗೌಡ ಮುಂತಾದ ಚಿತ್ರಗಳಲ್ಲಿ ನಾಯಕನಾಗಿ ನಟಿಸಿದ್ದರು. ಕನ್ನಡತಿ ಧಾರಾವಾಹಿಯಲ್ಲಿನ ಅಭಿನಯಕ್ಕಾಗಿ ಜನಮೆಚ್ಚಿದ ನಾಯಕ ಪ್ರಶಸ್ತಿಯನ್ನೂ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
OTT Release Date: ಸೂಪರ್ ಹಿಟ್ ʼಭೈರತಿ ರಣಗಲ್ʼ ಓಟಿಟಿ ರಿಲೀಸ್‌ಗೆ ಡೇಟ್ ಫಿಕ್ಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.