Sandalwood: ‘ಬಸ್ರಿಕಟ್ಟೆ’ಯಲ್ಲಿ ಹಾರರ್ ಫೀಲ್; ನ.3ರಂದು ರಿಲೀಸ್
Team Udayavani, Oct 17, 2023, 5:04 PM IST
“ಬಸ್ರಿಕಟ್ಟೆ’ ಹೀಗೊಂದು ಸಿನಿಮಾ ಸದ್ದಿಲ್ಲದೇ ಚಿತ್ರೀಕರಣ ಮುಗಿಸಿ ಬಿಡುಗಡೆಯ ಹಂತಕ್ಕೆ ಬಂದಿದೆ. ಇದೊಂದು ಹಾರರ್ ಕಂ ಸಸ್ಪೆನ್ಸ್ ಚಿತ್ರವಾಗಿದ್ದು, ನವ ನಿರ್ದೇಶಕ ವೈಭವ್ ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಅಂದಹಾಗೆ, ಬಸ್ರಿಕಟ್ಟೆ ಜಾಗಕ್ಕೆ ಈ ಚಿತ್ರಕ್ಕೂ ಸಂಬಂಧವಿಲ್ಲ.
“ಈ ಚಿತ್ರದಲ್ಲಿ ಸಿನಿಮ್ಯಾಟಿಕ್ ಫೀಲ್‌ಗಿಂತ ನ್ಯಾಚುರಲ್ ಆಗಿ ಮೂಡಿ ಬರಲಿ ಎಂಬ ಕಾರಣಕ್ಕೆ ರಿಯಲಿಸ್ಟಿಕ್ ಆಗಿಯೇ ಶೂಟಿಂಗ್ ಮಾಡಿದ್ದೇವೆ. ಮಂಗಳೂರು, ಚಿಕ್ಕಮಗಳೂರು, ಮೂಡುಬಿದಿರೆ ಮೊದಲಾದ ಸ್ಥಳಗಳಲ್ಲಿ ಚಿತ್ರೀಕರಣ ನಡೆಸಲಾಗಿದೆ. ನಮ್ಮ ಚಿತ್ರದ ಟ್ರೇಲರ್ ನೋಡಿದವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ಟೆಕ್ನಿಕಲ್ ಆಗಿಯೂ ಸಿನಿಮಾ ತುಂಬಾ ಸ್ಟ್ರಾಂಗ್ ಆಗಿದೆ’ ಎಂಬುದು ವೈಭವ್ ಅನಿಸಿಕೆ.
ಐಟಿ ಕ್ಷೇತ್ರದ ಮಂದಿ, ಕಾಲೇಜು ವಿದ್ಯಾರ್ಥಿಗಳು ಸೇರಿದಂತೆ ನಾನಾ ವರ್ಗದ ಜನರಿಗೆ ಟ್ರೇಲರ್ ಸಾಕಷ್ಟು ಇಷ್ಟವಾಗಿದ್ದು, ನವೆಂಬರ್ 3 ರಂದು ಸಿನಿಮಾ ತೆರೆ ಕಾಣಲಿದೆ. ಗೀತಾಂಜಲಿ ಫಿಲಂಸ್ ಬ್ಯಾನರ್ ಅಡಿಯಲ್ಲಿ ಪ್ರಶಾಂತ್ ಎನ್ ಪೈ ಈ ಚಿತ್ರವನ್ನು ನಿರ್ಮಿಸಿದ್ದಾರೆ.ಕನ್ನಡದ ಕಿರಗೂರಿನ ಗಯ್ನಾಳಿಗಳು, ಕಾಫಿ ತೋಟ ಸೇರಿದಂತೆ ಮಲಯಾಳಂನ ಅನೇಕ ಸಿನಿಮಾಗಳಲ್ಲಿ ನಟಿಸಿರುವ ರಾಹುಲ್ ಮಾದೇವ್ ನಾಯಕ.
ಮುಂದಿನ ನಿಲ್ದಾಣ ಸಿನಿಮಾ ಖ್ಯಾತಿಯ ಅನನ್ಯ ಕಶ್ಯಪ್ ನಾಯಕಿ. ಉಳಿದಂತೆ ಬಲರಾಜವಾಡಿ, ಕಿರಣ್ ನಾಯ್ಕ್, ಸಿದ್ಲಿಂಗು ಶ್ರೀಧರ್ ಮುಂತಾದವರು ತಾರಾಗಣದಲ್ಲಿದ್ದಾರೆ. ಅಶ್ವಿನ್ ಕೆನಡಿ ಛಾಯಾಗ್ರಹಣ, ಕದ್ರಿ ಮಣಿಕಾಂತ್ ಸಂಗೀತ ಹಾಗೂ ಉಮೇಶ್ ಸಂಕಲನ ಬಸ್ರಿಕಟ್ಟೆ ಚಿತ್ರಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ
ರಿಲ್ಯಾಕ್ಸ್ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ
Vijay Raghavendra: ಮೊದಲ ಹಂತದ ಚಿತ್ರೀಕರಣ ಮುಗಿಸಿದ ‘ರುದ್ರಾಭಿಷೇಕಂ’
Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್; ದಶಕದ ಬಳಿಕ ಕನ್ನಡಕ್ಕೆ
Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್ ಪ್ರಸಾದ್ ಸಿನಿಮಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Anandapura: ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ; ತಪ್ಪಿದ ಅನಾಹುತ
Delhi Election 2025: ದೆಹಲಿ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆ; ಬಿಜೆಪಿ V/s AAP
Mangaluru: ನೇತ್ರಾವತಿ ಸೇತುವೆ ಮೇಲಿನ ಸಿಸಿ ಕೆಮರಾಗಳಿಗಿಲ್ಲ ನಿರ್ವಹಣೆ ಭಾಗ್ಯ
Asaram Bapu: ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಅಸಾರಾಂ ಬಾಪುಗೆ ಮಧ್ಯಂತರ ಜಾಮೀನು
ಕೌಟುಂಬಿಕ ದೌರ್ಜನ್ಯ ಆರೋಪ: ʼಬಿಂದಾಸ್ʼ ನಟಿ ಹನ್ಸಿಕಾ, ಸಹೋದರ, ತಾಯಿ ವಿರುದ್ಧ FIR ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.