Gumti: ಕರಾವಳಿ ಸೊಗಡಿನ ಸಿನಿಮಾ ʼಗುಂಮ್ಟಿʼ ಟ್ರೇಲರ್ ಬಂತು
Team Udayavani, Nov 11, 2024, 1:29 PM IST
ಕರ್ನಾಟಕದ ಕರಾವಳಿ ತೀರದ ಕುಡುಬಿ ಜನಾಂಗದ ಕಥೆಯನ್ನು ಮೂಲವಾಗಿಟ್ಟುಕೊಂಡು ಬರುತ್ತಿರುವ ಸಿನಿಮಾ “ಗುಂಮ್ಟಿ’. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆಆಗಿದೆ.
“ಗುಂಮ್ಟಿ’ ಸಿನೆಮಾದ ಬಗ್ಗೆ ಮಾತನಾಡಿದ ನಿರ್ಮಾಪಕ ವಿಕಾಸ್ ಎಸ್. ಶೆಟ್ಟಿ, ಬಾಲ್ಯದಿಂದಲೂ ನಮ್ಮ ಸುತ್ತಮುತ್ತ ಕಂಡ ಜಾನಪದ ಕಲೆಯೊಂದನ್ನು ಈ ಸಿನಿಮಾದಲ್ಲಿ ತೆರೆಗೆ ತರುವ ಪ್ರಯತ್ನ ಮಾಡಿದ್ದೇವೆ. ನೈಜತೆಯಿಂದ ಸಿನೆಮಾ ಮೂಡಿಬಂದಿದ್ದು, ಎಲ್ಲರಿಗೂ ಈ ಸಿನೆಮಾದ ಕಥಾಹಂದರ ಇಷ್ಟವಾಗಲಿದೆ. “ಗುಂಮಿr’ ನೋಡುಗರ ಮನಮುಟ್ಟುತ್ತದೆ’ ಎಂಬ ವಿಶ್ವಾಸ ವ್ಯಕ್ತಪಡಿಸಿದರು.
ನಿರ್ದೇಶಕ ಸಂದೇಶದ ಶೆಟ್ಟಿ ಆಜ್ರಿ, “ಗುಂಮ್ಟಿ’ ಸಿನೆಮಾಕ್ಕೆ ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್-ಕಟ್ ಹೇಳಿದ್ದು, ಜೊತೆಗೆ ತೆರೆಮೇಲೆ ನಾಯಕ ನಟನಾಗಿಯೂ ಕಾಣಿಸಿಕೊಂಡಿದ್ದಾರೆ.
ಚಿತ್ರದ ಬಗ್ಗೆ ಮಾತನಾಡುವ ಸಂದೇಶ್ ಶೆಟ್ಟಿ ಆಜ್ರಿ, “ಇದೊಂದು ಕಲಾತ್ಮಕ ಸಿನೆಮಾವಾಗಿದ್ದು, ಕರ್ನಾಟಕದ ಕರಾವಳಿ ತೀರದ ಕುಡುಬಿ ಜನಾಂಗದ ಕಥೆಯನ್ನು ತೆರೆಮೇಲೆ ಹೇಳಲು ಹೊರಟಿದ್ದೇವೆ. “ಗುಂಮ್ಟಿ’ ಎಂಬುದು ಕುಡುಬಿ ಸಮುದಾಯಕ ಕಲಾಪ್ರಾಕಾರದ ಸಾಂಪ್ರದಾಯಿಕ ವಾದ್ಯವಾಗಿದ್ದು, ಅದನ್ನೇ ಸಿನೆಮಾದ ಟೈಟಲ್ ಆಗಿ ಇಟ್ಟುಕೊಂಡಿದ್ದೇವೆ. ಕುಡುಬಿ ಜನಾಂಗದ ಸಂಪ್ರದಾಯ, ಆಚಾರ-ವಿಚಾರ, ಬದುಕು ಮತ್ತು ಆಧುನಿಕತೆಯ ನಡುವಿನ ಸಂಘರ್ಷ ಗುಂಮ್ಟಿ’ ಸಿನಿಮಾದಲ್ಲಿ ಅನಾವರಣವಾಗಲಿದೆ’ ಎಂದು ಶೀರ್ಷಿಕೆ ಮತ್ತು ಕಥಾಹಂದರದ ಬಗ್ಗೆ ವಿವರಣೆ ನೀಡಿದರು.
ಈಗಾಗಲೇ ಸಿನೆಮಾ ಬಿಡುಗಡೆಗೂ ಮೊದಲೇ ಎಲ್ಲ ಕಡೆಗಳಿಂದ “ಗುಂಮ್ಟಿ’ಗೆ ಉತ್ತಮ ಪ್ರತಿಕ್ರಿಯೆ ಬರುತ್ತಿದೆ. ಈಗಾಗಲೇ ಉಡುಪಿ ಜಿಲ್ಲೆಯ ಸುತ್ತಮುತ್ತ ಸುಮಾರು 24 ಕ್ಕೂ ಹೆಚ್ಚು ಪ್ರದರ್ಶನಗಳು ಮುಂಗಡವಾಗಿ ಬುಕ್ಕಿಂಗ್ ಆಗಿದೆ ಎಂಬ ಮಾಹಿತಿಯನ್ನು ಚಿತ್ರತಂಡ ಇದೇ ವೇಳೆ ಹಂಚಿಕೊಂಡಿತು.
“ಗುಂಮ್ಟಿ’ ಸಿನೆಮಾದಲ್ಲಿ ವೈಷ್ಣವಿ ನಾಡಿಗ್ ನಾಯಕಿಯಾಗಿ ಮಲ್ಲಿ ಎಂಬ ಹೆಸರಿನ ಕುಡುಬಿ ಸಮುದಾಯದ ಹುಡುಗಿಯ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ರಂಜನ್ ಛತ್ರಪತಿ, ಕರಣ್ ಕುಂದರ್, ಯಶ್ ಆಚಾರ್ಯ, ಪ್ರಭಾಕರ ಕುಂದರ್, ರಘು ಪಾಂಡೇಶ್ವರ, ಚೇತನ ನೈಲಾಡಿ, ಚಿತ್ರಕಲಾ ಸೇರಿದಂತೆ ಅನೇಕರು ನಟಿಸಿದ್ದಾರೆ.
ಚಿತ್ರವನ್ನು ಉಡುಪಿ, ಕುಂದಾಪುರ, ಕಾರವಾರ, ಶಿರಸಿ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಮಹಾರಾಷ್ಟ್ರದ ಸೋಲಾಪುರ ಹೀಗೆ ಕರಾವಳಿ-ಮಲೆನಾಡು ಮತ್ತು ಪಶ್ಚಿಮ ಘಟ್ಟದ ಸುತ್ತಮುತ್ತ ಸುಮಾರು 30ಕ್ಕೂ ಹೆಚ್ಚು ದಿನಗಳ ಕಾಲ ಚಿತ್ರೀಕರಣ ಮಾಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ
Trasi: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.