ನ.18ಕ್ಕೆ ರಿಲೀಸ್ ಆಗಲಿದೆ “ಹೊಂದಿಸಿ ಬರೆಯಿರಿ”
Team Udayavani, Sep 25, 2022, 1:37 PM IST
ಹೊಸಬರ “ಹೊಂದಿಸಿ ಬರೆಯಿರಿ’ ಸಿನಿಮಾ ಬಿಡುಗಡೆಗೆ ರೆಡಿಯಾಗಿದೆ. ನವೆಂಬರ್ 18ಕ್ಕೆ ಸಿನಿಮಾ ರಾಜ್ಯಾದ್ಯಂತ ತೆರೆ ಕಾಣುತ್ತಿದೆ. ಬಹು ದೊಡ್ಡ ಹಾಗೂ ಕಲರ್ ಫುಲ್ ತಾರಾಗಣ ಚಿತ್ರದಲ್ಲಿದ್ದು, ಪ್ರವೀಣ್ ತೇಜ್, ಐಶಾನಿ ಶೆಟ್ಟಿ, ಸಂಯುಕ್ತ ಹೊರನಾಡು, ಶ್ರೀಮಹಾದೇವ್, ಭಾವನಾ ರಾವ್, ನವೀನ್ ಶಂಕರ್, ಅರ್ಚನಾ ಜೋಯಿಸ್ ಚಿತ್ರದ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ.
ಪರಿಸ್ಥಿತಿಗಳೊಂದಿಗೆ ಹೊಂದಿಕೊಂಡು ಸಾಗುವ ಬದುಕಿನ ಪಯಣವೇ ಜೀವನ ಎನ್ನುವ ಎಳೆಯನ್ನು ಮೂಲವಾಗಿಟ್ಟುಕೊಂಡು ಅದರ ಸುತ್ತ ಹೆಣೆಯಲಾದ ಕಥಾಹಂದರವೇ “ಹೊಂದಿಸಿ ಬರೆಯಿರಿ’ ಸಿನಿಮಾ. ಚಿತ್ರದಲ್ಲಿ ಐದು ಜನ ಸ್ನೇಹಿತರ ಬದುಕಿನ ಒಂದೊಂದು ಕಥೆಯಿದೆ. ಭಾವನಾತ್ಮಕ ಜರ್ನಿಯೂ ಇದೆ.
ಚಿತ್ರದಲ್ಲಿ ಎಂಟು ಹಾಡುಗಳಿದ್ದು ಈಗಾಗಲೇ ಒಂದು ಸಾಂಗ್ ಬಿಡುಗಡೆಯಾಗಿ ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ಅಕ್ಟೋಬರ್‌ನಲ್ಲಿ ಟ್ರೇಲರ್ ರಿಲೀಸ್ ಮಾಡಲು ಚಿತ್ರತಂಡ ಪ್ಲ್ರಾನ್ ಮಾಡಿಕೊಂಡಿದೆ.
ಇದನ್ನೂ ಓದಿ:ಅತಿಯಾದ ಸ್ಲೆಡ್ಜಿಂಗ್; ಯಶಸ್ವಿ ಜೈಸ್ವಾಲ್’ರನ್ನು ಮೈದಾನದಿಂದ ಹೊರಗೆ ಕಳುಹಿಸಿದ ರಹಾನೆ| VIDEO
ನಿರ್ದೇಶಕ ಜಗನ್ನಾಥ್ ಗಿದು ಮೊದಲ ಸಿನಿಮಾ. ರಾಕ್ ಲೈನ್ ಪ್ರೊಡಕ್ಷನ್ ನಲ್ಲಿ ಕೆಲಸ ಮಾಡಿದ ಅನುಭವ ಇವರಿಗಿದೆ. ಚಿತ್ರಕ್ಕೆ ಕಥೆ ಬರೆದು ನಿರ್ದೇಶನ ಮಾಡುವುದರ ಜೊತೆಗೆ ನಿರ್ಮಾಣವನ್ನು ತಾವೇ ಮಾಡಿದ್ದಾರೆ.
ಕೆ. ಕಲ್ಯಾಣ್, ಹೃದಯಶಿವ ಹಾಗೂ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ್ ಚಿತ್ರದ ಹಾಡುಗಳಿಗೆ ಸಾಹಿತ್ಯ ಬರೆದಿದ್ದಾರೆ. ಟಗರು ಖ್ಯಾತಿಯ ಮಾಸ್ತಿ, ಪ್ರಶಾಂತ್ ರಾಜಪ್ಪ ಹಾಗೂ ನಿರ್ದೇಶಕ ಜಗನ್ನಾಥ್ ಮೂವರ ಸಂಭಾಷಣೆ ಚಿತ್ರಕ್ಕಿದೆ. ಸಂಡೇ ಸಿನಿಮಾಸ್ ಬ್ಯಾನರ್‌ನಡಿ ರಾಮೇನಹಳ್ಳಿ ಜಗನ್ನಾಥ್ ಹಾಗೂ ಸ್ನೇಹಿತರು ಸೇರಿ ಹೊಂದಿಸಿ ಬರೆಯಿರಿ ಚಿತ್ರ ನಿರ್ಮಾಣ ಮಾಡಿದ್ದಾರೆ. ಸುನೀಲ್ ಪುರಾಣಿಕ್, ಪ್ರವೀಣ್ ಡಿ ರಾವ್, ಧರ್ಮೇಂದ್ರ ಅರಸ್, ನಂಜುಂಡೇ ಗೌಡ, ಸುಧಾ ನರಸಿಂಹರಾಜು ಒಳಗೊಂಡ ದೊಡ್ಡ ತಾರಾಬಳಗ ಚಿತ್ರದಲ್ಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Court Notice: 2002ರ ಹ*ತ್ಯೆ ಪ್ರಕರಣ: ಡೇರಾ ಸೌಧ ಮುಖ್ಯಸ್ಥ ಗುರ್ಮೀತ್ಗೆ ನೋಟಿಸ್
Madikeri: ಬೈಕ್ನಲ್ಲಿ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ; ಇಬ್ಬರಿಗೆ ಗಾಯ
Madikeri ಅಪರಿಚಿತ ವಾಹನ ಡಿಕ್ಕಿ: ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
Madikeri: ಲಾರಿಯಿಂದ ಹಾರಿದ ಚಾಲಕ: ಚಕ್ರದಡಿಗೆ ಸಿಲುಕಿ ಸಾವು
Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.