‘ಜೋರ್ಡನ್’ ನಲ್ಲಿ ಫ್ಯಾಮಿಲಿ ಡ್ರಾಮಾ: ಡಿ.30ಕ್ಕೆ ತೆರೆಗೆ
Team Udayavani, Dec 19, 2022, 6:31 PM IST
ಸದ್ದಿಲ್ಲದೇ ತಯಾರಾದ, ವಿನೋದ್ ಧಯಾಳನ್ ನಿರ್ದೇಶನದ “ಜೋರ್ಡನ್’ ಸಿನಿಮಾ ಬಿಡುಗಡೆಯ ಹೊಸ್ತಿಲಿಗೆ ಬಂದಿದೆ. ಇದೇ ಡಿಸೆಂಬರ್ 30 ರಂದು ಚಿತ್ರ ತೆರೆಕಾಣಲಿದ್ದು, ಬಿಡುಗಡೆಯ ಮೊದಲ ಹಂತವಾಗಿ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿದೆ ಚಿತ್ರತಂಡ. ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಭಾ.ಮ. ಹರೀಶ್ ಟ್ರೇಲರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡಕ್ಕೆ ಶುಭ ಹಾರೈಸಿದ್ದಾರೆ.
ನಿರ್ದೇಶಕ ವಿನೋದ್ ಧಯಾಳನ್ ಮಾತನಾಡಿ, “ಅಮೆರಿಕನ್ ಬಾಸ್ಕೆಟ್ ಬಾಲ್ ಆಟಗಾರ ಮೈಕಲ್ ಜೋರ್ಡನ್ ಹೇಳಿರುವ ವೈಫಲ್ಯವನ್ನು ನಾನು ಒಪ್ಪಿಕೊಳ್ಳುತ್ತೇನೆ, ಪ್ರತಿಯೊಬ್ಬರೂ ಯಾವುದಾದರೂ ವಿಷಯದಲ್ಲಿ ವಿಫಲರಾಗುತ್ತಾರೆ ಆದರೆ ಪ್ರಯತ್ನ ಪಡದೇ ವೈಫಲ್ಯವನ್ನು ನಾನು ಎಂದಿಗೂ ಒಪ್ಪಿಕೊಳ್ಳಲು ಸಾಧ್ಯವಿಲ್ಲ’ ಎಂಬ ಹೇಳಿಕೆಯನ್ನು ಆಧಾರವಾಗಿಟ್ಟುಕೊಂಡು ಈ ಸಿನಿಮಾ ಕಥೆಯನ್ನು ಹೆಣೆಯಲಾಗಿದೆ. ಕೌಟುಂಬಿಕ ಕಥಾಹಂದರ ಒಳಗೊಂಡ ಸ್ಪೂರ್ತಿದಾಯಕ ಸಿನಿಮಾವಾಗಿದೆ. ಕಥೆಯೇ ಈ ಚಿತ್ರದ ಹೀರೋ. ಕಾಮಿಡಿ ಕಿಲಾಡಿ ಖ್ಯಾತಿಯ ಮಹೇಂದ್ರ ಪ್ರಸಾದ್ ಹಾಗೂ ಸಂಪತ್ ಮೈತ್ರೇಯ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ಈ ಹಿಂದೆ ಕಿರು ಚಿತ್ರಗಳನ್ನು ನಿರ್ದೇಶನ ಮಾಡಿದ್ದ ನನಗೆ ಇದು ಮೊದಲ ಸಂಪೂರ್ಣ ಸಿನಿಮಾ’ ಎಂದು ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಂಡರು.
ನಾಯಕ ಮಹೇಂದ್ರ ಪ್ರಸಾದ್ ಮಾತನಾಡಿ, “ನನ್ನ ನಟನೆಯ ಮೊದಲ ಸಿನಿಮಾ ಇದಾಗಿದ್ದು, ಚಿತ್ರದಲ್ಲಿ ಮೈಕಲ್ ಪಾತ್ರವನ್ನು ಮಾಡಿದ್ದೇನೆ. ತಂದೆ ಮಗನ ಬಾಂಧವ್ಯ ಚಿತ್ರದಲ್ಲಿದೆ. ಈ ಸಿನಿಮಾ ಮುಗಿಯುವವರೆಗೆ ಯಾವ ಚಿತ್ರವನ್ನು ನಾನು ಒಪ್ಪಿಕೊಳ್ಳದೇ ಪಾತ್ರದಲ್ಲೇ ತಲ್ಲೀನನಾಗಿದ್ದೆ. ನಿರ್ದೇಶಕರು ನನ್ನ ಪಾತ್ರದ ಬಗ್ಗೆ ತಿಳಿಸಿಕೊಟ್ಟು ನನ್ನಿಂದ ಅಭಿನಯ ಮಾಡಿಸಿದ್ದಾರೆ’ ಎಂದರು.
ಚಿತ್ರದ ಮತ್ತೋರ್ವ ನಾಯಕ ಸಂಪತ್ ಮೈತ್ರೇಯ ಮಾತನಾಡಿ, “ನನ್ನ ಸ್ನೇಹಿತರೊಬ್ಬರ ಮೂಲಕ ಈ ಸಿನಿಮಾ ನನಗೆ ಸಿಕ್ಕಿತು. ತುಂಬಾ ಒಳ್ಳೆ ಕಂಟೆಂಟ್ ಇರುವ ಸಿನಿಮಾ’ ಎಂದರು.
ಸೀತಾರ, ಸುನೀಲ್, ಯೋಗೇಶ್ ಶಂಕರ್ ನಾರಾಯಣನ್, ಗಣೇಶ್ ಜೈ ಕುಮಾರ್ ಚಿತ್ರದ ತಾರಾಬಳಗದಲ್ಲಿದ್ದಾರೆ. ನೋ ನಾನ್ಸೆನ್ಸ್ ಕ್ರಿಯೇಷನ್ಸ್ ಬ್ಯಾನರ್ ನಡಿ ಜೆ.ಜಾನಕಿರಾಮ್, ಎನ್ ಆರ್ .ಪಾಟೀಲ್ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಜೈಕುಮಾರ್ ಜೆ ಸ್ಟಾಲಿನ್ ಛಾಯಾಗ್ರಹಣ, ಸಾಯಿ ಸರ್ವೇಶ್ ಸಂಗೀತ ನಿರ್ದೇಶನ ಹಾಗೂ ಸಾಹಿತ್ಯ, ನಿರಂಜನ್ ದೇವರಮನೆ ಸಂಕಲನ ಚಿತ್ರಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.