Kannada Cinema; ಬಿಡುಗಡೆಗೆ ಸಿದ್ದವಾದ ‘ಕುಚುಕು’
Team Udayavani, Nov 12, 2023, 3:18 PM IST
“ಕುಚುಕು’ ಎಂಬ ಸಿನಿಮಾವೊಂದು ಸದ್ದಿಲ್ಲದೇ ಚಿತ್ರೀಕರಣ ಮುಗಿಸಿ ಬಿಡುಗಡೆ ಹಂತಕ್ಕೆ ಬಂದಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಈ ಚಿತ್ರವನ್ನು ನಾಗರತ್ನಮ್ಮ ಅವರು ನಿರ್ಮಿಸಿ, ಮೈಸೂರು ರಾಜು ಅವರು ನಿರ್ದೇಶನ ಮಾಡಿದ್ದಾರೆ.
“ನಾನು 26ವರ್ಷಗಳಿಂದ ಡ್ಯಾನ್ಸರ್ ಹಾಗೂ ಡ್ಯಾನ್ಸ್ ಮಾಸ್ಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಹಿಂದೆ ನೃತ್ಯಂ ಚಿತ್ರ ನಿರ್ದೇಶಿಸಿದ್ದೆ. ಇದು ಎರಡನೇ ಚಿತ್ರ. ಸ್ನೇಹದ ಮಹತ್ವ ಸಾರುವ ಕಥಾಹಂದರದ ಜೊತೆಗೆ ಸೆಂಟಿಮೆಂಟ್ ಸನ್ನಿವೇಶಗಳು ಪ್ರೇಕ್ಷಕರ ಮನಸ್ಸಿಗೆ ಹತ್ತಿರವಾಗಲಿದೆ. ಮೈಸೂರು ಸುತ್ತಮುತ್ತ ಚಿತ್ರೀಕರಣ ಮಾಡಿದ್ದೇವೆ. ಚಿತ್ರ ತೆರೆಗೆ ಬರಲು ಸಿದ್ಧವಾಗಿದೆ’ ಎನ್ನುವುದು ನಿರ್ದೇಶಕ ಮೈಸೂರು ರಾಜು ಅವರ ಮಾತು.
“ನಾನು ಸಹಾಯಕ ನಿರ್ದೇಶಕನಾಗಿ ಚಿತ್ರರಂಗಕ್ಕೆ ಬಂದವನು. ಈಗ ನಾಯಕನಾಗಿದ್ದೇನೆ. ಇದು ನನ್ನ ಅಭಿನಯದ ಮೂರನೇ ಚಿತ್ರ. ಹೆಸರೆ ತಿಳಿಸುವಂತೆ ಸ್ನೇಹಿತರ ಕುರಿತಾದ ಚಿತ್ರದಲ್ಲಿ ನಾನು ಒಬ್ಬ ಸ್ನೇಹಿತ’ ಎಂದು ನಾಯಕ ಅರ್ಜುನ್ ಚೋಹಾನ್ ತಿಳಿಸಿದರು.
ಚಿತ್ರದಲ್ಲಿ ನಟಿಸಿರುವ ಬಸವರಾಜ್‌ಕುಮಾರ್ ಮಾತನಾಡಿ, “ಈ ಚಿತ್ರದಲ್ಲಿ ನಾನು ಹಾಗೂ ಅರ್ಜುನ್ ಕುಚುಕುಗಳಾಗಿ ನಟಿಸಿದ್ದೇವೆ’ ಎಂದರು.
“ಈ ಚಿತ್ರದಲ್ಲಿರುವ ಬಹುತೇಕರು ಮೈಸೂರಿನವರು. ನಾನು ಕೂಡ ಮೈಸೂರಿನವನು. ಈ ಚಿತ್ರದಲ್ಲಿ ವಿಲನ್ ಪಾತ್ರ ನಿರ್ವಹಿಸಿದ್ದೇನೆ’ ಎಂದರು ನಟ ಶೈಕ್ ಶಿವಾಜಿ. ಚಿತ್ರದಲ್ಲಿ ಐದು ಸುಮಧುರ ಹಾಡುಗಳಿರುವುದಾಗಿ ಸಂಗೀತ ನಿರ್ದೇಶಕ ಎ.ಟಿ.ರವೀಶ್ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.