ಏಪ್ರಿಲ್‌ 7ಕ್ಕೆ ಪೆಂಟಗನ್‌ ತೆರೆಗೆ; ಗುರುದೇಶಪಾಂಡೆ ನಿರ್ಮಾಣ

Team Udayavani, Mar 19, 2023, 4:46 PM IST

ಏಪ್ರಿಲ್‌ 7ಕ್ಕೆ ಪೆಂಟಗನ್‌ ತೆರೆಗೆ; ಗುರುದೇಶಪಾಂಡೆ ನಿರ್ಮಾಣ

ಗುರುದೇಶಪಾಂಡೆ ನಿರ್ಮಾಣ, ನಿರ್ದೇಶನದ “ಪೆಂಟಗನ್‌’ ಚಿತ್ರ ಬಿಡುಗಡೆಯ ಹಂತಕ್ಕೆ ಬಂದಿದೆ. ಚಿತ್ರ ಏಪ್ರಿಲ್‌ 7ರಂದು ಬಿಡುಗಡೆಯಾಗುತ್ತಿದೆ. ಈ ವಿಚಾರವನ್ನು ಸ್ವತಃ ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ. ಇದರಲ್ಲಿ ಏಕಕಾಲಕ್ಕೆ ಐದು ಕಥೆಗಳನ್ನು ತೆರೆಮೇಲೆ ಹೇಳಲಾಗುತ್ತಿದೆ. ಇತ್ತೀಚೆಗೆ ಚಿತ್ರದ ಹಾಡುಗಳು ಬಿಡುಗಡೆಯಾಗಿ ಮೆಚ್ಚುಗೆ ವ್ಯಕ್ತವಾಗುತ್ತಿರುವುದು ಚಿತ್ರತಂಡದ ಖುಷಿಗೆ ಕಾರಣವಾಗಿದೆ.

ಇನ್ನು, “ಪೆಂಟಗನ್‌’ ಸಿನಿಮಾದ ಮೂರನೇ ಕಥೆಯಲ್ಲಿ ಬರುವ “ಕಾಮನಬಿಲ್ಲು ಮೂಡುತಿದೆ…’ ಎಂಬ ರೊಮ್ಯಾಂಟಿಕ್‌ ಲಿರಿಕಲ್‌ ವಿಡಿಯೋ ಹಾಡನ್ನು ಬಿಡುಗಡೆ ಮಾಡಿದೆ.

ಮಣಿಕಾಂತ್‌ ಕದ್ರಿ ಸಂಗೀತ ಸಂಯೋಜನೆಯಲ್ಲಿ ಮೂಡಿಬಂದಿರುವ ಈ ಗೀತೆಗೆ ನಾಗಾರ್ಜುನ ಶರ್ಮಾ ಸಾಹಿತ್ಯವಿದೆ. ಸಂತೋಷ ವೆಂಕಿ ಮತ್ತು ಇಂಚರ ರಾವ್‌ ಗೀತೆಗೆ ಧ್ವನಿಯಾಗಿದ್ದಾರೆ.

ರಾಘು ಶಿವಮೊಗ್ಗ ನಿರ್ದೇಶನದಲ್ಲಿ ಮೂಡಿಬಂದಿರುವ “ಪೆಂಟಗನ್‌’ ಮೂರನೇ ಅಧ್ಯಾಯದಲ್ಲಿ ಪ್ರಕಾಶ್‌ ಬೆಳವಾಡಿ, ತನಿಷಾ ಕುಪ್ಪಂದ, ಪ್ರೇರಣಾ, ಸಾಗರ್‌, ರಾಕೇಶ್‌ ಮೊದಲಾದ ಕಲಾವಿದರು ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಕಥೆಯಲ್ಲಿ ಸಾಮಾಜಿಕ ಜಾಲತಾಣದ ಮೋಸ, ಅಪರಾಧ ಜಗತ್ತು, ಯುವ ಪೀಳಿಗೆಯ ಭವಿಷ್ಯದ ಕುರಿತು ಬೆಳಕು ಚೆಲ್ಲುವ ಪ್ರಯತ್ನ ಮಾಡಲಾಗಿದೆ ಎಂಬುದು ಚಿತ್ರತಂಡ ಮಾಹಿತಿ. ಈ ಅಧ್ಯಾಯಕ್ಕೆ ಕಿರಣ್‌ ಹಂಪಾಪುರ ಛಾಯಾಗ್ರಹಣ, ವೆಂಕಟೇಶ ಯುಡಿವಿ ಸಂಕಲನವಿದೆ.

“ಪೆಂಟಗನ್‌’ ಸಿನಿಮಾದಲ್ಲಿ ಬರುವ ಒಂದು ಕಥೆಯನ್ನು ಗುರು ದೇಶಪಾಂಡೆ ನಿರ್ದೇಶಿಸಿದರೆ, ಇನ್ನುಳಿದ ನಾಲ್ಕು ಕಥೆಗಳಿಗೆ ಆಕಾಶ್‌ ಶ್ರೀವತ್ಸ, ರಾಘು ಶಿವಮೊಗ್ಗ, ಚಂದ್ರ ಮೋಹನ್‌ ಮತ್ತು ಕಿರಣ್‌ ಕುಮಾರ್‌ ನಿರ್ದೇಶನ ಮಾಡಿದ್ದಾರೆ. ಐದೂ ಕಥೆಗಳ ಕಥಾವಸ್ತು ಬೇರೆಯಾಗಿದ್ದರೂ, ಎಲ್ಲದರಲ್ಲೂ ಒಂದು ಸಾಮಾನ್ಯ ವಿಷಯ ಅಡಕವಾಗಿದೆ. ಈ ವಿಷಯವೇ ಎಲ್ಲ ಕಥೆಗಳಿಗೂ ಒಂದು ಕಾಮನ್‌ ಕೊಂಡಿಯಾಗಿರುತ್ತದೆ.

ತಮ್ಮ ಬ್ಯಾನರ್‌ ಬಗ್ಗೆ ಮಾತನಾಡುವ ಗುರು ದೇಶಪಾಂಡೆ, “ನಮ್ಮ ಜಿ ಸಿನಿಮಾಸ್‌ ಕೇವಲ ಮನರಂಜನೆಯ ಸಿನಿಮಾಗಳನ್ನು ಮಾತ್ರ ಮಾಡದೇ, ಚಿಂತನೆ- ಪ್ರಚೋದನೆ ಹಾಗೂ ಪ್ರಚಲಿತ ವಿಷಯಗಳನ್ನು ಸಿನಿಮಾವಾಗಿಸುವ ಪ್ರಯತ್ನಗಳನ್ನು ಮಾಡುತ್ತಿದೆ. ಈಗಾಗಲೇ ಹಲವು ನಿರ್ದೇಶಕರನ್ನು, ತಂತ್ರಜ್ಞರನ್ನು ಮತ್ತು ಹೊಸ ಹೊಸ ಕಲಾವಿದರನ್ನು ಸಿನಿಮಾ ರಂಗಕ್ಕೆ ಪರಿಚಯಿಸಿದೆ. ಪೆಂಟಗನ್‌ ಸಿನಿಮಾದಲ್ಲೂ ಇದನ್ನು ಮುಂದುವರೆಸಿದೆ’ ಎನ್ನುತ್ತಾರೆ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Mangaluru ಮಾದಕವಸ್ತು ಸೇವನೆ; ಇಬ್ಬರು ವಶಕ್ಕೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆMalpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

Malpe: ಕಣ್ಮರೆಯಾಗಿದ್ದ ಮೀನುಗಾರನ ಮೃತದೇಹ ಪತ್ತೆ

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

ಮೂರು ದಿನವಾದರೂ ದಾಖಲಾಗದ ಎಫ್‌ಐಆರ್‌ ಮುಡಾ ದೂರಿನಲ್ಲಿ “ಕಡತ ತಿದ್ದುಪಡಿ’ ಅಂಶವೇ ಇಲ್ಲ!

sringeri-new

Sringeri: ಇಂದು ಸುವರ್ಣ ಭಾರತೀ ಮಹೋತ್ಸವ “ಸ್ತೋತ್ರ ತ್ರಿವೇಣಿ ಮಹಾಸಮರ್ಪಣೆ’

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು

BBK11: ದೈತ್ಯ ಸ್ಪರ್ಧಿಗಳನ್ನು ಸೋಲಿಸಿ ಫಿನಾಲೆಗೆ ಎಂಟ್ರಿ ಕೊಟ್ಟ ಹಳ್ಳಿಹೈದ ಹನುಮಂತು

Sandalwood: ‘ಕೋರ’ ಚಿತ್ರದ ಟ್ರೇಲರ್‌ ಬಂತು

Sandalwood: ‘ಕೋರ’ ಚಿತ್ರದ ಟ್ರೇಲರ್‌ ಬಂತು

ulock

Sandalwood: ಅನ್‌ಲಾಕ್‌ ರಾಘವದಿಂದ ಲಾಕ್‌ ಸಾಂಗ್‌ ಬಂತು

yogaraj bhat song in Manada kadalu movie

Manada Kadalu: ಭಟ್ರು ಬರೆದ ಅನರ್ಥ ಹಾಡು: ಮನದ ಕಡಲಿನಲ್ಲಿ ತುರ್ರಾ…

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

Sandalwood: ಹೊಸ ವರ್ಷ ಹಳೇ ಸಮಸ್ಯೆ… ಮತ್ತೆ ಥಿಯೇಟರ್‌ ರಗಳೆ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

Udupi: ಗೀತಾರ್ಥ ಚಿಂತನೆ 152: ತಣ್ತೀ ನಿಶ್ಚಯದಿಂದ ದೃಢತೆ

BCCI

Vijay Hazare Trophy ಕ್ವಾರ್ಟರ್‌ ಫೈನಲ್‌ : ಕರ್ನಾಟಕಕ್ಕೆ ಬರೋಡ ಸವಾಲು

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

Kundapura: ಅಡುಗೆ ಅನಿಲ ಜಾಗೃತಿ: ಮಹಿಳೆಯ ಸಂಶಯಾಸ್ಪದ ವರ್ತನೆ

1-saaai

Malaysia Open Badminton: ಸಾತ್ವಿಕ್‌-ಚಿರಾಗ್‌ ಜೋಡಿ ಸೆಮಿಗೆ

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವುSiddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Siddapura ಮಡಾಮಕ್ಕಿ: ಬಾವಿಗೆ ಬಿದ್ದು ವ್ಯಕ್ತಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.