

Team Udayavani, Jan 30, 2025, 6:51 PM IST
“ಸೀಟ್ ಎಡ್ಜ್’ ಎಂಬ ಟೈಟಲ್‌ನಲ್ಲಿ ಸಿನಿಮಾವೊಂದು ಬರುತ್ತಿದೆ. ಈಗಾಗಲೇ ಸದ್ದಿಲ್ಲದೇ ಚಿತ್ರೀಕರಣ ಪೂರ್ಣಗೊಳಿಸಿದ್ದು, ಈಗ ಬಿಡುಗಡೆ ಹಂತಕ್ಕೆ ಬಂದಿದೆ. ಸಿದ್ದು ಮೂಲಿಮನಿ “ಸೀಟ್ ಎಡ್ಜ್’ ಸಿನಿಮಾದ ನಾಯಕ.
ರವೀಕ್ಷಾ ಶೆಟ್ಟಿ ಚಿತ್ರದ ನಾಯಕಿ. ಡಾರ್ಕ್ ಕಾಮಿಡಿಗೆ ಹಾರರ್ ಥ್ರಿಲ್ಲರ್ ಟಚ್ ಕೊಟ್ಟು ಯುವ ನಿರ್ದೇಶಕ ಚೇತನ್ ಶೆಟ್ಟಿ ಚಿತ್ರ ತಯಾರಿಸಿದ್ದಾರೆ.
ನೈಜ ಘಟನೆಯಿಂದ ಸ್ಫೂರ್ತಿ ಪಡೆದಿರುವ ಸಿನಿಮಾದಲ್ಲಿ ರಾಘು ರಾಮನಕೊಪ್ಪ, ಗಿರೀಶ್ ಶಿವಣ್ಣ, ಮಿಮಿಕ್ರಿ ಗೋಪಿ, ಕಿರಣ್ ನಾಯಕ, ಪುನೀತ್ ಬಾಬು, ತೇಜು ಪೊನ್ನಪ್ಪ, ಮನಮೋಹನ್ ರೈ ಬಣ್ಣ ಹಚ್ಚಿದ್ದಾರೆ.
ಚಿತ್ರಕ್ಕೆ ಆಕಾಶ್ ಪರ್ವ ಸಂಗೀತ, ದೀಪಕ್ ಕುಮಾರ್ ಜೆಕೆ ಛಾಯಾಗ್ರಹಣ ಹಾಗೂ ನಾಗೇಂದ್ರ ಉಜ್ಜನಿ ಸಂಕಲನವಿದೆ. ಗಿರಿಧರ ಟಿ. ವಸಂತಪುರ ಚಿತ್ರವನ್ನು ನಿರ್ಮಾಣ ಮಾಡಿದ್ದು, ಬೆಂಗಳೂರು, ಮೈಸೂರು, ಶಿವಮೊಗ್ಗ, ಚಿಕ್ಕಮಗಳೂರು ಸುತ್ತಮುತ್ತ ಚಿತ್ರದ ಚಿತ್ರೀಕರಣ ನಡೆಸಲಾ ಗಿದೆ. ಫೆಬ್ರವರಿ 7ಕ್ಕೆ “ಸೀಟ್ ಎಡ್ಜ್’ ಸಿನಿಮಾದ ಮೊದಲ ಹಾಡನ್ನು ಬಿಡುಗಡೆ ಮಾಡಲು ಚಿತ್ರತಂಡ ಸಜ್ಜಾಗಿದೆ.
You seem to have an Ad Blocker on.
To continue reading, please turn it off or whitelist Udayavani.