Kannada Cinema: ತಿಲಕ್ -ಪ್ರಿಯಾ ಜೋಡಿಯ ‘ಉಸಿರು’ ಶೂಟಿಂಗ್ ಶೀಘ್ರ ಆರಂಭ
Team Udayavani, Jan 12, 2024, 12:42 PM IST
“ಉಸಿರು’- ಹೀಗೊಂದು ಟೈಟಲ್‌ನಡಿ ಚಿತ್ರವೊಂದು ಚಿತ್ರೀಕರಣ ಆರಂಭಿಸಲು ಸಿದ್ಧವಾಗಿದೆ. ಮೊದಲ ಹಂತವಾಗಿ ಇತ್ತೀಚೆಗೆ ಚಿತ್ರದ ಟೈಟಲ್ ಲಾಂಚ್ ನಡೆಯಿತು. ತಿಲಕ್, ಪ್ರಿಯಾ ಹೆಗ್ಡೆ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಈ ಚಿತ್ರಕ್ಕೆ ಪ್ರಭಾಕರ್ ಅವರ ನಿರ್ದೇಶನವಿದೆ. ಆರ್ ಎಸ್‌ಪಿ ಬ್ಯಾನರ್‌ನಡಿ ಲಕ್ಷ್ಮೀ ಹರೀಶ್ ಈ ಸಿನಿಮಾವನ್ನು ನಿರ್ಮಿಸುತ್ತಿದ್ದಾರೆ.
ಚಿತ್ರದ ಬಗ್ಗೆ ಮಾತನಾಡುವ ನಿರ್ದೇಶಕ ಪ್ರಭಾಕರ್, “ಇದೊಂದು ಸೈಕೋ ಥ್ರಿಲ್ಲರ್ ಕಥಾ ಹಂದರ ಇರುವ ಚಿತ್ರ ವಾಗಿದ್ದು, ಉಸಿರು ಟೈಟಲ್ ನಮ್ಮ ಕಥೆಗೆ ಸೂಕ್ತವಾಗುತ್ತದೆ. ಒಂದೊಳ್ಳೆಯ ಟೀಮ್ ಕಟ್ಟಿಕೊಂಡು ಈ ಸಿನಿಮಾ ಮಾಡುತ್ತಿದ್ದೇವೆ. ತಿಲಕ್ ಒಬ್ಬ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಮುಖ್ಯವಾಗಿ 9 ಪಾತ್ರಗಳ ಮೇಲೆ ಚಿತ್ರದ ಕಥೆ ಸಾಗುತ್ತದೆ. ಮೊದಲ ಹಂತದಲ್ಲಿ ಮಡಿಕೇರಿ ಸುತ್ತಮುತ್ತ 15 ದಿನಗಳ ಚಿತ್ರೀಕರಣ ನಡೆಸಿ, ನಂತರ ಬೆಂಗಳೂರಲ್ಲಿ ಮುಂದುವೆಸುತ್ತೇವೆ. ಬೇಜವಾಬ್ದಾರಿ ಪೊಲೀಸ್ ಅಧಿಕಾರಿ, ತನ್ನ ಹೆಂಡತಿಗೆ ಅನಾಮಿಕ ವ್ಯಕ್ತಿಯಿಂದ ಪ್ರಾಣಕ್ಕೆ ಆಪತ್ತು ಬಂದಾಗ ಆತ ಪತ್ನಿಯನ್ನು ಹೇಗೆ ಕಾಪಾಡಿಕೊಳ್ಳುತ್ತಾನೆ, ತನ್ನ ತಾಯಿಯನ್ನು ಕೊಂದವರ ಮೇಲೆ ಹೇಗೆ ಪ್ರತೀಕಾರ ತೀರಿಸಿಕೊಳ್ಳುತ್ತಾನೆ ಎಂಬುದನ್ನು ಉಸಿರು ಚಿತ್ರದ ಹೇಳುತ್ತಿದ್ದೇನೆ’ ಎಂದರು.
ಸುಮಾರು 6 ತಿಂಗಳವರೆಗೆ ಪೂರ್ವ ತಯಾರಿ ನಡೆಸಿರುವ ಚಿತ್ರತಂಡ ಇದೇ ತಿಂಗಳ 17ರಿಂದ ಮಡಿಕೇರಿಯಲ್ಲಿ ಚಿತ್ರದ ಮುಹೂರ್ತ ನಡೆಸಿ ಶೂಟಿಂಗ್ ಆರಂಭಿಸಲಿದೆ.
“ನಮ್ಮ ಸಂಸ್ಥೆಯ ಮೂಲಕ ನಿರ್ಮಾಣವಾಗುತ್ತಿರುವ ಪ್ರಥಮ ಚಿತ್ರವಿದು. ನಿರ್ದೇಶಕ ಪ್ರಭಾಕರ್ ನಮಗೆ ಬಹಳ ದಿನಗಳ ಪರಿಚಯ. ಅವರು ಹೇಳಿದ ಸ್ಟೋರಿಲೈನ್ ನಮಗೆ ಇಷ್ಟವಾಯ್ತು’ಎಂದು ಹೇಳಿದರು. “ನನ್ನ ಸಿನಿ ಜರ್ನಿಯ 25ನೇ ವರ್ಷ. ಕಥೆಯಲ್ಲಿರುವ ಸನ್ನಿವೇಶಗಳು ನನಗೆ ತುಂಬಾ ಇಷ್ಟವಾಯ್ತು. ಬೇರೆ ಬೇರೆ ಜಾನರ್‌ನ 4 ಹಾಡುಗಳನ್ನು ಮಾಡಿದ್ದು, ತುಂಬಾ ಚೆನ್ನಾಗಿ ಮೂಡಿಬಂದಿವೆ’ ಎಂಬುದು ಅವರ ಮಾತು.
ಚಿತ್ರದ ನಾಯಕಿ ಪ್ರಿಯಾ ಹೆಗ್ಡೆ ಮಾತನಾಡಿ, “ಚಿತ್ರದ ಕಾನ್ಸೆಪ್ಟ್. ಟೈಟಲ್ ಎರಡೂ ಚೆನ್ನಾಗಿದೆ. ಸಿನಿಮಾದಲ್ಲಿ ನನ್ನ ಪಾತ್ರಕ್ಕೆ ಎರಡು ಶೇಡ್ಸ್ ಇದೆ. ಈಗಾಗಲೇ ಕನ್ನಡದ ಜಿಲ್ಕಾ, ಕುದ್ರು ಅಲ್ಲದೇ ಒಂದು ತೆಲುಗು ಚಿತ್ರದಲ್ಲೂ ಸಹ ಅಭಿನಯಿಸಿದ್ದೇನೆ’ ಎಂದು ಹೇಳಿದರು. ಮತ್ತೂಬ್ಬ ನಟ ಸಂತೋಷ್ ಮಾತನಾಡಿ, “ನಾನು ರಂಗಭೂಮಿಯಿಂದ ಬಂದವನು. ಇದು ನನ್ನ ಮೊದಲ ಚಿತ್ರವಾಗಿದ್ದು, ಪಾತ್ರ ತುಂಬಾ ಎಮೋಷನಲ್ ಇದೆ’ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Owaisi: ಮದ್ಯದಂಗಡಿ ತೆರೆಯಲು ಮಾತ್ರ ಹಣವಿದೆ: ಉತ್ತರಪ್ರದೇಶ ಸರ್ಕಾರದ ವಿರುದ್ಧ ಒವೈಸಿ ಆರೋಪ
ಕೊಪ್ಪಳದಲ್ಲಿ ಕ್ಯಾನ್ಸರ್ ಖಾಯಿಲೆಗಿಲ್ಲ ಚಿಕಿತ್ಸೆ -114 ಜನರಲ್ಲಿ ಕ್ಯಾನ್ಸರ್ ಪತ್ತೆ!
ಬೆಳಗಾವಿ: ಎರಡೂ ಅಧಿವೇಶನಗಳಿಗೆ ಕಾಡಿದ ಶೋಕ
Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.