ಶಿವ ಮೀಟ್ಸ್ ತಲೈವಾ: ರಜಿನಿಕಾಂತ್ ಭೇಟಿಯಾಗಿ ಆಶೀರ್ವಾದ ಪಡೆದ ರಿಷಬ್ ಶೆಟ್ಟಿ
Team Udayavani, Oct 29, 2022, 10:05 AM IST
ಕಾಂತಾರ ಚಿತ್ರದ ನಟ- ನಿರ್ದೇಶಕ ರಿಷಬ್ ಶೆಟ್ಟಿ ಅವರು ಸದ್ಯ ಯಶಸ್ಸಿನ ಸಂತಸ ಅನುಭವಿಸಿದ್ದಾರೆ. ಇತ್ತೀಚೆಗೆ ಸೂಪರ್ ಸ್ಟಾರ್ ರಜಿನಿಕಾಂತ್ ಅವರು ಚಿತ್ರ ನೋಡಿ ಟ್ವೀಟ್ ಮಾಡಿದ್ದಾಗ ರಿಷಬ್ ಪುಳಕಗೊಂಡಿದ್ದರು. ಇದೀಗ ರಿಷಬ್ ಅವರು ರಜಿನಿಕಾಂತ್ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದಿದ್ದಾರೆ.
ಈ ಬಗ್ಗೆ ಸ್ವತಃ ರಿಷಬ್ ಶೆಟ್ಟಿ ಅವರೇ ಟ್ವೀಟ್ ಮಾಡಿ ಸಂತಸ ಹಂಚಿಕೊಂಡಿದ್ದಾರೆ. “ನೀವು ಒಂದ್ ಸಲ ಹೊಗಳಿದರೆ ನೂರು ಸಲ ಹೊಗಳ್ದ೦ಗೆ ನಮಗೆ. ಧನ್ಯವಾದಗಳು ರಜಿನಿಕಾಂತ್ ಸರ್, ನಮ್ಮ ಕಾಂತಾರ ಚಿತ್ರ ನೋಡಿ ನೀವು ಮೆಚ್ಚಿದ್ದಕ್ಕೆ ನಾವು ಸದಾ ಆಭಾರಿ’ ಎಂದು ರಿಷಬ್ ಫೋಟೊಗಳನ್ನು ಹಂಚಿಕೊಂಡಿದ್ದಾರೆ.
ಕೆಲ ದಿನಗಳ ಹಿಂದೆ ರಜಿನಿಕಾಂತ್ ಅವರು ಕಾಂತಾರ ಚಿತ್ರ ವೀಕ್ಷಿಸಿ ರಿಷಬ್ ಶೆಟ್ಟಿ ಅವರನ್ನು ಹೊಗಳಿ ಟ್ವೀಟ್ ಮಾಡಿದ್ದರು. ಕಾಂತಾರ ಚಿತ್ರವನ್ನು ಭಾರತೀಯ ಸಿನಿಮಾದ ಮಾಸ್ಟರ್ ಪೀಸ್ ಎಂದು ತಲೈವಾ ಹೊಗಳಿದ್ದರು.
ಇದನ್ನೂ ಓದಿ:ಟೇಕ್-ಆಫ್ ಆಗುವ ಮುನ್ನ ಇಂಡಿಗೋ ವಿಮಾನದ ಇಂಜಿನ್ ಗೆ ಬೆಂಕಿ: VIDEO
ಸೆ.30ರಂದು ತೆರೆಕಂಡ ಕಾಂತಾರ ಚಿತ್ರವು ದೇಶದೆಲ್ಲೆಡೆ ಅದ್ಭುತ ಪ್ರದರ್ಶನ ನೀಡುತ್ತಿದೆ. ಬಿಡುಗಡೆಯಾಗಿ ತಿಂಗಳಾದರೂ ಹೌಸ್ ಫುಲ್ ಪ್ರದರ್ಶನ ಕಾಣುತ್ತಿದೆ. ಈಗಾಗಲೇ 200 ಕೋಟಿ ರೂ ಬ್ಯುಸಿನೆಸ್ ಮಾಡಿರುವ ಕಾಂತಾರ, ಅತಿ ಹೆಚ್ಚು ವೀಕ್ಷಣೆ ಕಂಡ ಕನ್ನಡ ಚಿತ್ರ ಎಂಬ ದಾಖಲೆಯನ್ನೂ ಬರೆದಿದೆ.
ರಿಷಬ್ ಶೆಟ್ಟಿ ನಿರ್ದೇಶನದ ಚಿತ್ರವನ್ನು ಹೊಂಬಾಳೆ ಫಿಲಂಸ್ ಬ್ಯಾನರ್ ನಡಿ ವಿಜಯ್ ಕಿರಗಂದೂರು ನಿರ್ಮಿಸಿದ್ದರು. ಅಜನೀಶ್ ಲೋಕನಾಥ್ ಸಂಗೀತ ನಿರ್ದೇಶನದ ಚಿತ್ರದಲ್ಲಿ, ಸಪ್ತಮಿ ಗೌಡ, ಕಿಶೋರ್, ಅಚ್ಯುತ್ ಕುಮಾರ್, ಪ್ರಮೋದ್ ಶೆಟ್ಟಿ ಮುಂತಾದವರು ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.
ನೀವು ಒಂದ್ ಸಲ ಹೊಗಳಿದ್ರೆ.. ನೂರು ಸಲ ಹೊಗಳ್ದ೦ಗೆ ನಮಗೆ.❤️ಧನ್ಯವಾದಗಳು @rajinikanth sir ನಮ್ಮ ಕಾಂತಾರ ಚಿತ್ರ ನೋಡಿ ನೀವು ಮೆಚ್ಚಿದ್ದಕ್ಕೆ ನಾವು ಸದಾ ಆಭಾರಿ?? #Kantara @VKiragandur @hombalefilms @gowda_sapthami @Karthik1423 pic.twitter.com/MNPSDR5jx8
— Rishab Shetty (@shetty_rishab) October 28, 2022
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Max Movie: ಸಖತ್ ರೆಸ್ಪಾನ್ಸ್ ಪಡೆದ ಕಿಚ್ಚನ ʼಮ್ಯಾಕ್ಸ್ʼ ಮೊದಲ ದಿನ ಗಳಿಸಿದ್ದೆಷ್ಟು?
Actor Health: ಸ್ವಲ್ಪ ಜರುಗಿದ ದರ್ಶನ್ ಬೆನ್ನುಮೂಳೆ; ತುರ್ತಾಗಿ ಆಪರೇಷನ್ ಇಲ್ಲ: ವೈದ್ಯರು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.