ಕೊರಗಜ್ಜ ಚಿತ್ರದ ಗುಳಿಗಕ್ಕೆ ದೇವಸ್ಥಾನ


Team Udayavani, May 6, 2023, 11:47 AM IST

tdy-4

ಕರಾವಳಿಯ ಕೋಲ ಮತ್ತು ಭೂತಾರಾಧನೆಯ ಕಥಾಹಂದರ ಹೊಂದಿರುವ “ಕರಿಹೈದ ಕೊರಗಜ್ಜ’ ಚಿತ್ರದ ಕೆಲಸಗಳು ಭರದಿಂದ ನಡೆಯುತ್ತಿದೆ.

ಇದೇ ವೇಳೆ ಚಿತ್ರದ ನಿರ್ದೇಶಕ ಸುಧೀರ್‌ ಅತ್ತಾವರ ಈ ಸಿನಿಮಾದಲ್ಲಿ ಬರುವ “ಗುಳಿಗ’ ದೈವಕ್ಕೆ ದೇವಸ್ಥಾನ ನಿರ್ಮಿಸುವ ಕೆಲಸಕ್ಕೆ ಕೈ ಹಾಕಿದ್ದಾರೆ. ಅಂದಹಾಗೆ, ಇಂಥದ್ದೊಂದು ಕಾರ್ಯಕ್ಕೆ ಬಲವಾದ ಕಾರಣ “ಕರಿಹೈದ ಕೊರಗಜ್ಜ’ ಚಿತ್ರೀಕರಣದ ವೇಳೆ ನಡೆದ ಅನೇಕ ಪವಾಡಗಳು ಎನ್ನುವುದು ಚಿತ್ರತಂಡದ ಮಾತು.

ಈ ಹಿಂದೆ ನಡೆದ ಸಿನಿಮಾದ ಪತ್ರಿಕಾಗೋಷ್ಠಿ ಯಲ್ಲಿ ಇಂಥ ಅಗೋಚರ ಪವಾಡಗಳ ಬಗ್ಗೆ ಚಿತ್ರದ ಕಲಾವಿದರಾದ ಕಬೀರ್‌ ಬೇಡಿ, ಶ್ರುತಿ, ಭವ್ಯಾ ಹಾಗೂ ಚಿತ್ರತಂಡದ ಅನೇಕ ಸದಸ್ಯರು ತಮ್ಮ ಅನುಭವವನ್ನು ಹಂಚಿಕೊಂಡಿದ್ದರು. ಆದರೆ ಇದಕ್ಕೆ ಸಂಬಂಧಿಸಿದ ಮತ್ತೂಂದು ಕುತೂಹಲದ ವಿಚಾರ ಎಲ್ಲೂ ಹೊರಬಂದಿರಲಿಲ್ಲ.

ಇದನ್ನೂ ಓದಿ: ‘ದಿ ಕೇರಳ ಸ್ಟೋರಿʼ 1st Day ಕಲೆಕ್ಷನ್‌:‌ ಮೊದಲ ದಿನವೇ ಕಾಶ್ಮೀರ್‌ ಫೈಲ್ಸ್‌ ಮೀರಿಸಿದ ಚಿತ್ರ

ಅದೇನೆಂದರೆ, ಈ ಸಿನಿಮಾದ ಚಿತ್ರೀಕರಣದ ಆರಂಭಕ್ಕೂ ಮೊದಲು ಪುತ್ತೂರಿನಲ್ಲಿ ಸೆಟ್‌ ನಿರ್ಮಾಣದ ವೇಳೆ, ಸೆಟ್‌ ಕೆಲಸಗಾರರು ಯಾವುದೋ ಆವೇಶ ಬಂದಂತವರಾಗಿ ಅಲ್ಲಲ್ಲಿ ಮೂರ್ಛೆ ಹೋಗ ತೊಡಗಿದರು. ಸ್ಥಳಿಯರು ಅರಿಶಿಣ ನೀರನ್ನು ಪ್ರೋಕ್ಷಿಸಿ, ಕೆಲವರನ್ನು ಅಲ್ಲಿನ ಆಸ್ಪತ್ರೆಗೂ ಸೇರಿಸಲಾಯಿತು. ನಂತರ ಆ ಪ್ರದೇಶದಲ್ಲಿ ಯಾರೂ ಸೆಟ್‌ ಕೆಲಸ ಮಾಡಲು ಮುಂದೆ ಬರಲಿಲ್ಲ. ಸೆಟ್‌ ಹಾಕಲಿದ್ದ ಆ ಜಾಗವು ಕರಾವಳಿಯ ಉಗ್ರರೂಪದ ದೈವ ಗುಳಿಗನ ಸ್ಥಳವೆಂದು ಸ್ಥಳಿಯರು ತಿಳಿಸಿದರು. ದೈವದ ಮೇಲಿನ ಗೌರವ-ಭಕ್ತಿಯಿಂದ ಪುತ್ತೂರಿನಿಂದ ಬೆಳ್ತಂಗಡಿಯ ಅರಣ್ಯ ಪ್ರದೇಶದಲ್ಲಿ ಸೆಟ್‌ ಕೆಲಸವನ್ನು ಸ್ಥಳಾಂತರ ಗೊಳಿಸಲಾಯಿತು.

ಇನ್ನು ಚಿತ್ರದಲ್ಲಿ “ಗುಳಿಗ’ ದೈವದ ಪಾತ್ರವನ್ನು ಹಾಲಿವುಡ್‌ ನಟ, ಫ್ರೆಂಚ್‌ ಹಾಗೂ ಬಾಲಿವುಡ್‌ ಕೊರಿಯೋಗ್ರಾಫ‌ರ್‌ ಸಂದೀಪ್‌ ಸೋಪರ್ಕರ್‌ ಅಭಿನಯಿಸಿದ್ದು, ಮಂಗಳೂರಿನ ಸೋಮೆಶ್ವರ ಸಮುದ್ರ ಕಿನಾರೆಯಲ್ಲಿ ಗುಳಿಗ ದೈವದ ಚಿತ್ರೀಕರಣವನ್ನು ನಡೆಸುತ್ತಿದ್ದಾಗಲೂ, ತಂಡಕ್ಕೆ ಹಲವಾರು ರೀತಿಯ ಅಡೆತಡೆಗಳು ಎದುರಾಯಿತು. ಈ ಬಗ್ಗೆ ತಿಳಿದವರಲ್ಲಿ ಚಿಂತನ -ಮಂಥನ ನಡೆಸಿದಾಗ ನಿರ್ದೇಶಕ ಸುಧೀರ್‌ ಅತ್ತಾವರ್‌ ರವರ ಹಿರಿಯರಿದ್ದ ಮನೆಯಲ್ಲಿ ಗುಳಿಗ ದೈವದ ಸಾನಿಧ್ಯವಿದ್ದು, ಹಲವಾರು ವರ್ಷಗಳಿಂದ ಆ ಮನೆಯಲ್ಲಿ ಯಾರೂ ವಾಸವಿರದೆ, ಪಾಳು ಬಿದ್ದಕಾರಣ ದೈವಕ್ಕೆ ಪೂಜೆ ಪುರಸ್ಕಾರಗಳು ನಡೆಯದಿರುವ ವಿಚಾರ ಗೋಚರಿಸಿತು. ಕೂಡಲೇ ನಿರ್ದೇಶಕರು ದೈವಕ್ಕೆ ಗುಡಿ ನಿರ್ಮಾಣ ಮಾಡುವ ಕಾರ್ಯಕ್ಕೆ ಮುಂದಾಗಿ, ಚಿತ್ರದ ಎಡಿಟಿಂಗ್‌ ಕೆಲಸ ಮುಗಿದ ಕೂಡಲೇ, ದೈವಸ್ಥಾನದ ಕಾರ್ಯ ಮುಗಿಸಿ, ಗುಳಿಗ ಹಾಗೂ ಕಲ್ಲುಟಿಗ ದೈವಗಳಿಗೆ ಅದ್ದೂರಿಯ ಕೋಲ ಸೇವೆಯನ್ನು ನಡೆಸಿದರು.

ಈ ಸಮಯದಲ್ಲಿ ಹಿರಿಯ ನಟಿ ಭವ್ಯಾ, ನಿರ್ಮಾಪಕರಾದ ತ್ರಿವಿಕ್ರಮ ಸಾಫ‌ಲ್ಯ, ಕಾರ್ಯಕಾರಿ ನಿರ್ಮಾಪಕ ವಿದ್ಯಾಧರ್‌ ಶೆಟ್ಟಿ, ಕಲಾವಿದರಾದ ಭರತ್‌ ಸೂರ್ಯ, ರಿತಿಕ ಹಾಗೂ ಹಲವು ತಂತ್ರಜ್ಞರು ಅಹೋರಾತ್ರಿ ವಿಜೃಂಭಣೆಯಿಂದ ನಡೆದ ಕೋಲಸೇವೆಯಲ್ಲಿ ಪಾಲ್ಗೊಂಡಿದ್ದರು.

ಇದಕ್ಕೂ ಮುನ್ನ ಚಿತ್ರತಂಡವು ಚಿತ್ರೀಕರಣ ಮುಗಿದ ಕೂಡಲೇ ಕೊರಗಜ್ಜನಿಗೂ ಕೋಲಸೇವೆಯನ್ನು ಅದ್ದೂರಿಯಾಗಿ ನೆರವೇರಿಸಿತ್ತು. ಅದಾದ ಬಳಿಕ ಸಿನಿಮಾದ ಕೆಲಸಗಳು ಶರವೇಗದಲ್ಲಿ ಪೂರ್ಣಗೊಳ್ಳುತ್ತ ಬಂದಿದ್ದು, ಆಗಸ್ಟ್‌ ತಿಂಗಳಲ್ಲಿ ಸಿನಿಮಾ ಬಿಡುಗಡೆ ಮಾಡುವ ಯೋಜನೆಯಲ್ಲಿದೆ ಚಿತ್ರತಂಡ. ಈ ಸಂದರ್ಭದಲ್ಲಿ ತಮ್ಮ ಸಂಕಲ್ಪದಂತೆ “ಗುಳಿಗ’ ದೈವದ ದೇವಸ್ಥಾನಕ್ಕೆ ನಿರ್ದೇಶಕ ಸುಧೀರ್‌ ಅತ್ತಾವರ್‌ ಮತ್ತು ಚಿತ್ರತಂಡ ಚಾಲನೆ ನೀಡಿದ್ದು, ಇದೆಲ್ಲವೂ ದೈವದ ಪವಾಡ ಎಂಬುದು ಚಿತ್ರತಂಡದ ಒಕ್ಕೊರಲ ಮಾತು.

ಟಾಪ್ ನ್ಯೂಸ್

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

1-max

Max; ಟ್ರೈಲರ್ ಬಿಡುಗಡೆ: ಭರ್ಜರಿ ಲುಕ್ ನಲ್ಲಿ ಕಿಚ್ಚ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.