Karki; ಟ್ರೇಲರ್‌ನಲ್ಲಿ ಕರ್ಕಿ; ತಮಿಳು ನಿರ್ದೇಶಕನ ಕನ್ನಡ ಸಿನಿಮಾ

Team Udayavani, Aug 25, 2024, 12:39 PM IST

Karki kannada movie

ಕರ್ಕಿ’ ಚಿತ್ರದ ಟೀಸರ್‌ ಹಾಗೂ ಟ್ರೇಲರ್‌ ಇತ್ತೀಚೆಗೆ ಬಿಡುಗಡೆ ಯಾಗಿದೆ. ಈ ವೇಳೆ “ಕರ್ಕಿ’ ಸಿನೆಮಾದ ಕಲಾವಿದರು, ತಂತ್ರಜ್ಞರು ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ಹಾಜರಿದ್ದರು.

ಮೊದಲಿಗೆ “ಕರ್ಕಿ’ ಸಿನೆಮಾದ ಹಾಡುಗಳಿಗೆ ಸಾಹಿತ್ಯ ರಚಿಸಿರುವ ಚಿತ್ರ ಸಾಹಿತಿ ಕವಿರಾಜ್‌ ಮಾತನಾಡಿ, ತಮಿಳಿನ ಹಿರಿಯ ಮತ್ತು ಅನುಭವಿ ನಿರ್ದೇಶಕ ಪವಿತ್ರನ್‌ “ಕರ್ಕಿ’ ಸಿನೆಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ. ಈ ಸಿನೆಮಾದಲ್ಲಿ ಆರು ಹಾಡುಗಳಿದ್ದು, ಎಲ್ಲಾ ಹಾಡುಗಳಿಗೆ ಸಾಹಿತ್ಯ ಬರೆಯಲು ಅವಕಾಶ ಸಿಕ್ಕಿದೆ. ಪವಿತ್ರನ್‌ ಅವರಂಥ ನಿರ್ದೇಶಕರ ಜೊತೆ ಕೆಲಸ ಮಾಡಲು “ಕರ್ಕಿ’ ಸಿನೆಮಾದಲ್ಲಿ ಅವಕಾಶ ಸಿಕ್ಕಿದ್ದು, ನನಗೂ ಹೊಸ ಅನುಭವ ನೀಡಿದೆ. ಪ್ರತಿ ಹಾಡಿನ ಒಂದೊಂದು ಪದವನ್ನೂ ಅವರೂ ಅರ್ಥೈಸಿಕೊಂಡು, ಸ್ಪಂದಿಸುತ್ತಿದ್ದರು. ನಮ್ಮ ನಡುವಿನ ಕಥೆಯೊಂದು ಹೊಸ ರೀತಿಯಲ್ಲಿ ಮೂಡಿಬಂದಿದ್ದು, ಕರ್ಕಿ’ ನೋಡುಗರಿಗೆ ಹೊಸ ಅನುಭವ ಕೊಡಲಿದೆ’ ಎಂದು ತಮ್ಮ ಅನಿಸಿಕೆ ಹಂಚಿಕೊಂಡರು.

ಈಗಾಗಲೇ ಸುಮಾರು 20ಕ್ಕೂ ಹೆಚ್ಚು ಸಿನೆಮಾಗಳನ್ನು ವಿತರಿಸಿರುವ ವಿತರಕ ಮತ್ತು ಉದ್ಯಮಿ ಪ್ರಕಾಶ್‌ ಪಳನಿ “ಕರ್ಕಿ’ ಸಿನೆಮಾಕ್ಕೆ ಬಂಡವಾಳ ಹೂಡಿ ನಿರ್ಮಿಸಿದ್ದಾರೆ. ತಮ್ಮ ಚೊಚ್ಚಲ ನಿರ್ಮಾಣದ ಸಿನೆಮಾದ ಬಗ್ಗೆ ಮಾತನಾಡಿದ ಪ್ರಕಾಶ್‌ ಪಳನಿ, ಸಿನೆಮಾದ ಕಥೆ ಇಷ್ಟವಾಗಿ ಈ ಸಿನೆಮಾವನ್ನು ನಿರ್ಮಿಸಲು ಮುಂದಾದೆ. ಮೊದಲು ಈ ಸಿನೆಮಾವನ್ನು ಕನ್ನಡದ ದೊಡ್ಡ ನಿರ್ದೇಶಕರೊಬ್ಬರು ಮಾಡಬೇಕಿತ್ತು. ಆದರೆ ಕಾರಣಾಂತರಗಳಿಂದ ಅವರು ನಿರ್ದೇಶನ ಮಾಡಲಾಗಲಿಲ್ಲ. ಅವರ ಬದಲಾಗಿ ತಮಿಳು ನಿರ್ದೇಶಕ ಪವಿತ್ರನ್‌ ಈ ಸಿನೆಮಾವನ್ನು ನಿರ್ದೇಶಿಸಿದರು. ಇದೇ ಸೆಪ್ಟೆಂಬರ್‌ ಅಂತ್ಯದೊಳಗೆ ಸಿನಿಮಾವನ್ನು ಬಿಡುಗಡೆ ಮಾಡುವ ಯೋಚನೆಯಿದೆ’ ಎಂದರು.

ಬಾಲನಟನಾಗಿ ಕನ್ನಡ ಚಿತ್ರರಂಗ ಪ್ರವೇಶಿಸಿದ್ದ, ಈಗಾಗಲೇ ವಾಟ್ಸಾಪ್‌ ಲವ್‌, ರಾಜರಾಣಿ ಸೇರಿದಂತೆ ಕೆಲ ಸಿನೆಮಾಗಳಲ್ಲಿ ನಾಯಕ ನಟನಾಗಿ ಅಭಿನಯಿಸಿದ್ದ ಜಯಪ್ರಕಾಶ್‌ (ಜೆ.ಪಿ) ರೆಡ್ಡಿ “ಕರ್ಕಿ’ ಸಿನೆಮಾದಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದಾರೆ. ಈ ಸಿನೆಮಾದಲ್ಲಿ ಕಾನೂನು ಪದವಿಧರನಾಗಬೇಕು ಎಂಬ ಕನಸು ಇಟ್ಟುಕೊಂಡ ಹಳ್ಳಿ ಹುಡುಗನ ಪಾತ್ರದಲ್ಲಿ ಜೆ. ಪಿ ಅಭಿನಯಿಸಿದ್ದಾರೆ. ತಮ್ಮ ಪಾತ್ರದ ಬಗ್ಗೆ ಮಾತನಾಡಿದ ನಾಯಕ ಜಯಪ್ರಕಾಶ್‌ ರೆಡ್ಡಿ, ಈ ಸಿನೆಮಾದಲ್ಲಿ ನನ್ನದು ಮುತ್ತುರಾಜ್‌ ಎಂಬ ಹಳ್ಳಿ ಹುಡುಗನ ಪಾತ್ರ. ಜಾತಿ ಮತ್ತು ಜನಾಂಗೀಯ ವಿಷಯವನ್ನು ಮನ ಮುಟ್ಟುವಂತೆ ಈ ಸಿನೆಮಾದಲ್ಲಿ ಹೇಳಲಾಗಿದೆ. ಸ್ನೇಹ, ಪ್ರೀತಿ, ಪ್ರೇಮ ಮತ್ತು ಮಾನವೀಯತೆಯ ಅಂಶಗಳ ಸುತ್ತ ಈ ಸಿನೆಮಾ ಸಾಗುತ್ತದೆ. ಆದಷ್ಟು ನೈಜವಾಗಿ ಸಿನೆಮಾದ ಕಥೆ, ಪಾತ್ರಗಳು ಮೂಡಿಬಂದಿದೆ. ಎಲ್ಲ ವರ್ಗದ ಪ್ರೇಕ್ಷಕರಿಗೂ ಇಷ್ಟವಾಗುವಂತೆ ಕರ್ಕಿ’ ಸಿನೆಮಾ ಮೂಡಿಬಂದಿದೆ’ ಎಂದರು ಮಲೆಯಾಳಿ ಬೆಡಗಿ ಮೀನಾಕ್ಷಿ ಚಿತ್ರದ ನಾಯಕಿ.

ಉಳಿದಂತೆ ಸಾಧುಕೋಕಿಲ, ಬಲರಾಜವಾಡಿ, ಯತಿರಾಜ್, ಮಿಮಿಕ್ರಿ ಗೋಪಿ, ಸ್ವಾತಿ, ಸವಿತಾ ಮೊದಲಾದವರು “ಕರ್ಕಿ’ ಸಿನೆಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ. ಚಿತ್ರಕ್ಕೆ ಅರ್ಜುನ್‌ ಜನ್ಯ ಸಂಗೀತ ಸಂಯೋಜಿಸಿದ್ದಾರೆ.

ಟಾಪ್ ನ್ಯೂಸ್

1-trfff

PM Modi ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಘೋಷಿಸಿದ ಟ್ರಂಪ್

Auction of more than 600 gifts received by Modi has started

Auction; ಮೋದಿಗೆ ಸಿಕ್ಕ 600ಕ್ಕೂ ಅಧಿಕ ಉಡುಗೊರೆಗಳ ಹರಾಜು ಶುರು

Panamburu

Mangaluru: ಕಿರಿದಾಗುತ್ತಿದೆ‌ ಪಣಂಬೂರು ಬೀಚ್‌! ಇನ್ನೂ ಖಚಿತವಾಗದ ಕಾರಣ

Pililkula

Biological Park: ಪಿಲಿಕುಳಕ್ಕೆ ಪೆಂಗ್ವಿನ್‌, ಅನಕೊಂಡ ತರಿಸುವ ಮಹತ್ವದ ನಿರ್ಧಾರ

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ

High Court: ಒಂದೇ ದಿನ 503 ಪ್ರಕರಣ ವಿಚಾರಣೆ ನಡೆಸಿದ ನ್ಯಾ| ನಾಗಪ್ರಸನ್ನ

Cap-Brijesh-Chowta

MSEZ: ಜೆಬಿಎಫ್‌ಗೆ ಭೂಮಿ ಕೊಟ್ಟವರಿಗೆ ಜಿಎಂಪಿಎಲ್‌ನಲ್ಲಿ ಉದ್ಯೋಗ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

JHONTY SON OF JAYRAJ: ಜಯರಾಜ್‌ ಸುತ್ತ ಮತ್ತೊಂದು ಚಿತ್ರ

Dhruva Thare Movie: ಸೆ.20ಕ್ಕೆ ಧ್ರುವತಾರೆ ತೆರೆಗೆ

Dhruva Thare Movie: ಸೆ.20ಕ್ಕೆ ಧ್ರುವತಾರೆ ತೆರೆಗೆ

Renukaswamy Case: ಸೆ.30ರವರೆಗೆ ದರ್ಶನ್‌ & ಗ್ಯಾಂಗ್‌ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

Renukaswamy Case: ಸೆ.30ರವರೆಗೆ ದರ್ಶನ್‌ & ಗ್ಯಾಂಗ್‌ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

11

Kannada Short Movie: ದುಡ್ಡಿನ ಸುತ್ತ ಜೋಕರ್‌ ಆಲ್ಬಮ್‌

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-trfff

PM Modi ಅವರನ್ನು ಭೇಟಿಯಾಗಿ ಮಾತುಕತೆ ನಡೆಸುವುದಾಗಿ ಘೋಷಿಸಿದ ಟ್ರಂಪ್

Auction of more than 600 gifts received by Modi has started

Auction; ಮೋದಿಗೆ ಸಿಕ್ಕ 600ಕ್ಕೂ ಅಧಿಕ ಉಡುಗೊರೆಗಳ ಹರಾಜು ಶುರು

Panamburu

Mangaluru: ಕಿರಿದಾಗುತ್ತಿದೆ‌ ಪಣಂಬೂರು ಬೀಚ್‌! ಇನ್ನೂ ಖಚಿತವಾಗದ ಕಾರಣ

Pililkula

Biological Park: ಪಿಲಿಕುಳಕ್ಕೆ ಪೆಂಗ್ವಿನ್‌, ಅನಕೊಂಡ ತರಿಸುವ ಮಹತ್ವದ ನಿರ್ಧಾರ

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

Assembly Elections: ಕಾಶ್ಮೀರದಲ್ಲಿ ಪ್ರಾದೇಶಿಕ ಪಕ್ಷಗಳೇ ಕಿಂಗ್‌ಮೇಕರ್!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.