Ramarasa ಚಿತ್ರಕ್ಕೆ ಕಾರ್ತಿಕ್: ಹೀರೋ ಲಾಂಚ್‌ಗೆ ಸುದೀಪ್ ಸಾಥ್
Team Udayavani, Jun 18, 2024, 6:09 PM IST
ಬಿಗ್‌ಬಾಸ್ ವಿನ್ನರ್ ಕಾರ್ತಿಕ್ ಮಹೇಶ್ ಹೊಸ ಸಿನಿಮಾವೊಂದಕ್ಕೆ ನಾಯಕರಾಗಿದ್ದಾರೆ. ಅದು “ರಾಮರಸ’. ಗುರುದೇಶಪಾಂಡೆ ಅವರು ನಿರ್ಮಿಸುತ್ತಿರುವ “ಜಟ್ಟ’ ಗಿರಿರಾಜ್ ನಿರ್ದೇಶನದ “ರಾಮರಸ’ ಚಿತ್ರದಲ್ಲಿ ಜಿ ಅಕಾಡೆಮಿಯಲ್ಲಿ ನಟನೆ ಕಲಿತಿರುವ ಹದಿನಾರು ಪ್ರತಿಭೆಗಳು ನಟಿಸುತ್ತಿರುವುದು ಗೊತ್ತಿರುವ ವಿಷಯ. ಈ ಹದಿನಾರು ಜನ ಯುವಪ್ರತಿಭೆಗಳ ಜೊತೆ ನವ ನಟರೊಬ್ಬರು ನಾಯಕನಾಗಿ ನಟಿಸಲಿದ್ದಾರೆ ಎಂದು ತಿಳಿಸಲಾಗಿತ್ತು. ಅದರಂತೆ ಈಗ ಕಾರ್ತಿಕ್ ಮಹೇಶ್ ನಟಿಸುತ್ತಿದ್ದಾರೆ.
ಇತ್ತೀಚೆಗೆ ನಡೆದ ಸಮಾರಂಭದಲ್ಲಿ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಾಯಕ ನಟನನ್ನು ಪರಿಚಯಿಸುವ ವಿಶೇಷ ವಿಡಿಯೋ ಬಿಡುಗಡೆ ಮಾಡುವ ಮೂಲಕ ರಾಮರಸ ಚಿತ್ರದ ನಾಯಕ ಕಾರ್ತಿಕ್ ಮಹೇಶ್‌ಎಂದು ತಿಳಿಸಿದರು. ನಟ ಸುದೀಪ್ ತಂಡಕ್ಕೆ ಹಾಗೂ ಕಾರ್ತಿಕ್ ಮಹೇಶ್ ಅವರಿಗೆ ಶುಭ ಕೋರಿದರು.
ನಾಯಕ ಕಾರ್ತಿಕ್ ಮಹೇಶ್ ಮಾತನಾಡಿ, ಮೊದಲಿನಿಂದಲೂ ನನಗೆ ಸುದೀಪ್ ಅವರು ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ. ಅವರಿಗೆ ಹಾಗೂ ಈ ಚಿತ್ರದಲ್ಲಿ ಅವಕಾಶ ಕೊಟ್ಟ ನಿರ್ಮಾಪಕರಿಗೆ, ನಿರ್ದೇಶಕರಿಗೆ ಧನ್ಯವಾದಗಳು. ಒಳ್ಳೆಯ ತಂಡದೊಂದಿಗೆ ಕೆಲಸ ಮಾಡುತ್ತಿರುವ ಖುಷಿಯಿದೆ. ಸುದೀಪ್ ಅವರ ಮೇಲೆ ನನಗೆ ವಿಶೇಷ ಪ್ರೀತಿ ಹಾಗೂ ಗೌರವ. ಹಾಗಾಗಿ ಬಿಗ್ ಬಾಸ್ ಫಿನಾಲೆಯಲ್ಲಿ ಅವರು ಕೊಟ್ಟಿದ್ದ ಡ್ರೆಸ್ ಅನ್ನು ಇಂದು ಹಾಕಿಕೊಂಡು ಬಂದಿದ್ದೇನೆ ಎಂದರು.
ಪ್ರತಿಯೊಬ್ಬ ನಿರ್ದೇಶಕನಿಗೂ ಗುರು ದೇಶಪಾಂಡೆ ಅವರಂತಹ ನಿರ್ಮಾಪಕರು ಸಿಗಬೇಕು. ಅವರಿಗೆ ಸಿನಿಮಾ ಮೇಲೆ ತುಂಬಾ ಪ್ರೀತಿ. ಅದ್ದೂರಿಯಾಗಿ ಮೂಡಿಬಂದಿರುವ ನಾಯಕನ ಪರಿಚಯದ ವಿಶೇಷ ವಿಡಿಯೋ ಅದಕ್ಕೆ ಸಾಕ್ಷಿ. ಕಾರ್ತಿಕ್ ಮಹೇಶ್ ಅವರು ಈ ಚಿತ್ರದ ನಾಯಕನಾಗಿ ಆಯ್ಕೆಯಾಗಿದ್ದಾರೆ. ಸುದೀಪ್ ಅವರು ನಾಯಕನನ್ನು ಪರಿಚಯಿಸಿದ್ದಾರೆ. ಈ ಸಂದರ್ಭದಲ್ಲಿ ಸುದೀಪ್ ಅವರಿಗೆ ವಿಶೇಷ ಧನ್ಯವಾದ ತಿಳಿಸುತ್ತೇನೆ ಎಂದರು ನಿರ್ದೇಶಕ ಗಿರಿರಾಜ್.
ಜಿ ಅಕಾಡೆಮಿಯ 16 ಜನ ಹೊಸ ಪ್ರತಿಭೆಗಳಿಗೆ ತರಬೇತಿ ನೀಡಿ ಈ ಚಿತ್ರದಲ್ಲಿ ನಟಿಸಲು ಅವಕಾಶ ನೀಡಲಾಗಿದೆ. ಅವರೊಂದಿಗೆ ಜನಪ್ರಿಯ ನಟರೊಬ್ಬರು ನಾಯಕನಾಗಿ ನಟಿಸಲಿದ್ದಾರೆ ಎಂದು ನಾನು ಮೊದಲು ತಿಳಿಸಿದೆ. ರಾಮರಸ ಚಿತ್ರಕ್ಕೆ ಕಾರ್ತಿಕ್ ಮಹೇಶ್ ನಾಯಕನಾಗಿದ್ದಾರೆ. ನಮ್ಮ ಚಿತ್ರದ ನಾಯಕನನ್ನು ಪರಿಚಯಿಸುವ ಟೀರ್ಸ ಬಿಡುಗಡೆ ಮಾಡಿಕೊಟ್ಟ ಕಿಚ್ಚ ಸುದೀಪ್ ಅವರಿಗೆ ಅನಂತ ಧನ್ಯವಾದಗಳು ಎಂದರು ನಿರ್ಮಾಪಕ ಗುರು ದೇಶಪಾಂಡೆ.
“ರಾಮರಸ’ ಚಿತ್ರಕ್ಕೆ ಬಿ.ಜೆ. ಭರತ್ ಸಂಗೀತ, ಎ.ವಿ. ಕೃಷ್ಣಕುಮಾರ್, ಅರ್ಜುನ್ ಕಿಟ್ಟು ಸಂಕಲನವಿದೆ. ಮುರಳಿ ಮಾಸ್ಟರ್ ನೃತ್ಯ ನಿರ್ದೇಶನ ಹಾಗೂ ಪುನೀತ್ ಆರ್ಯ ಅವರ ಗೀತರಚನೆ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
Kiccha Sudeepa; ತಾಯಿಯನ್ನು ಉಳಿಸಿಕೊಳ್ಳಲಾಗದ ಆ ಕ್ಷಣ ನಾನು ಯೂಸ್‌ಲೆಸ್ ಅನಿಸಿತು…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.