ಥ್ರಿಲ್ ನೀಡೋ ಮಹಲ್! : ಈ ವಾರ ಕಸ್ತೂರಿ ಮಹಲ್ ತೆರೆಗೆ
Team Udayavani, May 9, 2022, 12:44 PM IST
ಶಾನ್ವಿ ಶ್ರೀವಾಸ್ತವ್ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿರುವ “ಕಸ್ತೂರಿ ಮಹಲ್’ ಈ ವಾರ (ಮೇ. 13) ತೆರೆಗೆ ಬರುತ್ತಿದೆ.
ಈಗಾಗಲೇ “ಕಸ್ತೂರಿ ಮಹಲ್’ ಸಿನಿಮಾದ ಪೋಸ್ಟರ್, ಟೀಸರ್, ಟ್ರೇಲರ್ ಮತ್ತು ಶಾನ್ವಿ ಲುಕ್ ಎಲ್ಲವೂ ಸಿನಿ ಪ್ರಿಯರ ಗಮನ ಸೆಳೆಯಲು ಯಶಸ್ವಿಯಾಗಿದ್ದು, ಸಿನಿಮಾ ಕೂಡ ಥಿಯೇಟರ್‌ನಲ್ಲಿ ಪ್ರೇಕ್ಷಕರಿಗೆ ಇಷ್ಟವಾಗಲಿದೆ ಎಂಬ ವಿಶ್ವಾಸದಲ್ಲಿದೆ ಚಿತ್ರತಂಡ.
ಇನ್ನು ಸುಮಾರು ಮೂರುವರೆ ವರ್ಷಗಳ ಬಳಿಕ ಶಾನ್ವಿ ಶ್ರೀವಾಸ್ತವ್ ಅಭಿನಯದ ಸಿನಿಮಾ ಬಿಡುಗಡೆಯಾಗುತ್ತಿರುವುದರಿಂದ, ಶಾನ್ವಿಗೆ “ಕಸ್ತೂರಿ ಮಹಲ್’ ಮೇಲೆ ಸಹಜವಾಗಿಯೇ ಸಾಕಷ್ಟು ನಿರೀಕ್ಷೆ ಇದೆ.
ಇದನ್ನೂ ಓದಿ: ವಿಕ್ರಾಂತ್ ರೋಣ ವಿದೇಶಿ ಹಕ್ಕಿಗೆ 10 ಕೋಟಿ!
“ಈಗಾಗಲೇ “ಕಸ್ತೂರಿ ಮಹಲ್’ ಟೀಸರ್, ಟ್ರೇಲರ್ ನೋಡಿದವರಿಗೆ ಇದೊಂದು ಹಾರರ್ ಸಿನಿಮಾ ಎಂಬ ಸುಳಿವು ಗೊತ್ತಾಗಿರುತ್ತದೆ. ಖಂಡಿತವಾಗಿಯೂ ಇದು ಹಾರರ್ ಸಿನಿಮಾನೇ. ಆದ್ರೆ ಕೇವಲ ಆಡಿಯನ್ಸ್ ಎದೆ ನಡುಗಿಸುವ ಹಾರರ್ ಮಾತ್ರ ಈ ಸಿನಿಮಾದಲ್ಲಿ ಇಲ್ಲ. ಅದರ ಜೊತೆಗೆ ಸಸ್ಪೆನ್ಸ್, ಥ್ರಿಲ್ಲರ್, ಎಮೋಶನ್ಸ್ ಎಲ್ಲವನ್ನೂ ಸ್ಕ್ರೀನ್ ಮೇಲೆ ಕಾಣಬಹುದು. ಥಿಯೇಟರ್‌ನಲ್ಲಿ “ಕಸ್ತೂರಿ ಮಹಲ್’ ಒಳಗೆ ಕುಳಿತರೆ ಥಿಲ್ಲಿಂಗ್ ಎಕ್ಸ್‌ಪೀರಿಯನ್ಸ್ ಗ್ಯಾರೆಂಟಿ’ ಅನ್ನೋದು ಶಾನ್ವಿ ಮಾತು.
ಇನ್ನು “ಶ್ರೀ ಭವಾನಿ ಆರ್ಟ್ಸ್’ ಬ್ಯಾನರ್‌ನಲ್ಲಿ ರವೀಶ್ ಆರ್. ಸಿ ನಿರ್ಮಿಸಿರುವ ಈ “ಕಸ್ತೂರಿ ಮಹಲ್’ ಚಿತ್ರಕ್ಕೆ ಹಿರಿಯ ನಿರ್ದೇಶಕ ದಿನೇಶ್ ಬಾಬು ಕಥೆ, ಚಿತ್ರಕಥೆ ಬರೆದು ಆ್ಯಕ್ಷನ್-ಕಟ್ ಹೇಳಿದ್ದಾರೆ. “ಸಸ್ಪೆನ್ಸ್ – ಥ್ರಿಲ್ಲರ್ ಸಿನಿಮಾಗಳು ಅಂದ ಕೂಡಲೇ ಪ್ರೇಕ್ಷಕರು ಬೇರೆ ಥರದ ಒಂದಷ್ಟು ನಿರೀಕ್ಷೆ ಇಟ್ಟುಕೊಂಡು ಥಿಯೇಟರ್‌ಗೆ ಬರುತ್ತಾರೆ. ಆದರೆ, ಆ ನಿರೀಕ್ಷೆಗೂ ಹೊಸದಾಗಿ, ಬೇರೆ ಥರದ ಅನುಭವ ಕೊಡುವಂಥೆ “ಕಸ್ತೂರಿ ಮಹಲ್’ ಸಿನಿಮಾವಿದೆ. ಕನ್ನಡದ ಪ್ರೇಕ್ಷಕರಿಗೆ ಇದೊಂದು ಹೊಸಥರದ ಅನುಭವ ಕೊಡುವಂಥ ಸಿನಿಮಾ ಆಗಲಿದೆ ಎಂಬ ಭರವಸೆ ನಮಗಿದೆ’ ಎನ್ನುವುದು ನಿರ್ದೇಶಕ ಬಾಬು ಅವರ ಮಾತು.
ಒಟ್ಟಾರೆ ಬಿಡುಗಡೆಗೂ ಮೊದಲೇ ಒಂದಷ್ಟು ಸೌಂಡ್ ಮಾಡುತ್ತಿರುವ “ಕಸ್ತೂರಿ ಮಹಲ್’ ಥಿಯೇಟರ್‌ನಲ್ಲಿ ಹೇಗಿರಲಿದೆ ಅನ್ನೋದು ಈ ವಾರ ಗೊತ್ತಾಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಶ್ರೀರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ಪ್ರಕಟ
ರಿಲ್ಯಾಕ್ಸ್ ಮೂಡ್‌ನಲ್ಲಿದ್ದ ದಾಸನಿಗೆ ಖಾಕಿ ಶಾಕ್: ಜಾಮೀನು ರದ್ದು ಕೋರಿ ಸುಪ್ರೀಂಗೆ ಅರ್ಜಿ
Vijay Raghavendra: ಮೊದಲ ಹಂತದ ಚಿತ್ರೀಕರಣ ಮುಗಿಸಿದ ‘ರುದ್ರಾಭಿಷೇಕಂ’
Hebah Patel: ‘ರಾಮರಸ’ ನೀಡಲು ಬಂದ ಹೆಬಾ ಪಟೇಲ್; ದಶಕದ ಬಳಿಕ ಕನ್ನಡಕ್ಕೆ
Sidlingu 2: ಬಿಡುಗಡೆ ದಿನಾಂಕ ಘೋಷಿಸಿದ ಯೋಗಿ- ವಿಜಯ್ ಪ್ರಸಾದ್ ಸಿನಿಮಾ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Mudbidri: ಕೊಳಚೆ ನೀರು ಗದ್ದೆಗೆ; ಒಳಚರಂಡಿ ಯೋಜನೆ ಇಲ್ಲದೆ ಸಮಸ್ಯೆ
Oscars 2025: ಹೀನಾಯವಾಗಿ ಸೋತರೂ ʼಆಸ್ಕರ್ʼ ಅರ್ಹತಾ ಸುತ್ತಿನಲ್ಲಿ ಕಾಣಿಸಿಕೊಂಡ ʼಕಂಗುವʼ
Kadaba: ಇದ್ದೂ ಇಲ್ಲವಾದ 108 ಆ್ಯಂಬುಲೆನ್ಸ್ ಸೇವೆ
Karinja: ಅಪಾಯಕಾರಿ ವಿದ್ಯುತ್ ಕಂಬ; ತುಕ್ಕು ಹಿಡಿದ, ಶಕ್ತಿ ಕಳೆದು ಬಾಗಿರುವ ಕಂಬ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.