Kerebeate Movie: ಕೆರಿಬ್ಯಾಟಿ ಶುರುವಾತು…

Team Udayavani, Mar 3, 2024, 4:16 PM IST

Kerebeate Movie: ಕೆರಿಬ್ಯಾಟಿ ಶುರುವಾತು…

“ಕೆರೆಬೇಟೆ’ ಸಿನಿಮಾದ ಟ್ರೇಲರ್‌ ಬಿಡುಗಡೆಯಾಗಿ ಮೆಚ್ಚುಗೆ ಪಡೆಯುತ್ತಿದೆ. ಇದರ ಬೆನ್ನಲ್ಲೇ ಚಿತ್ರದ ಹಾಡೊಂದು ಬಿಡುಗಡೆಯಾಗಿದೆ. ಅದು ಟೈಟಲ್‌ ಟ್ರ್ಯಾಕ್‌. ಈ ಹಾಡನ್ನು ಶಾಸಕ ಹಾಗೂ ಮಾಜಿ ಸಚಿವ ಆರಗ ಜ್ಞಾನೇಂದ್ರ ಹಾಗೂ ಸಂಸದರಾದ ಬಿ.ವೈ ರಾಘವೇಂದ್ರ ರಿಲೀಸ್‌ ಮಾಡಿ ಸಿನಿಮಾ ತಂಡಕ್ಕೆ ಶುಭ ಹಾರೈಸಿದರು.

ಶಿವಮೊಗ್ಗದ ಕುವೆಂಪು ರಂಗಮಂದಿರದಲ್ಲಿ ನಡೆದ ಟೈಟಲ್‌ ಟ್ರ್ಯಾಕ್‌ ರಿಲೀಸ್‌ ಕಾರ್ಯಕ್ರಮದಲ್ಲಿ ಕೆರೆಬೇಟೆ ಚಿತ್ರದ ಹಾಡು ಅದ್ಧೂರಿಯಾಗಿ ಬಿಡುಗಡೆಯಾಯಿತು.

“ಕೆರಿಬ್ಯಾಟಿ ಶುರುವಾತು…’ ಎನ್ನುವ ಈ ಟೈಟಲ್‌ ಟ್ರ್ಯಾಕ್‌ ಅನ್ನು ಪ್ರಮೋದ್‌ ಮರವಂತೆ ಬರೆದಿದ್ದಾರೆ. ಗಗನ್‌ ಬಡೇರಿಯಾ ಸಂಗೀತ ಸಂಯೋಜನೆ ಮಾಡಿದ್ದು, ಕರಿಬಸವ ತಡಕಲ್‌ ಈ ಹಾಡಿಗೆ ಧ್ವನಿ ನೀಡಿದ್ದಾರೆ.

ಟೈಟಲ್‌ ಟ್ರ್ಯಾಕ್‌ ರಿಲೀಸ್‌ ಮಾಡಿ ಮಾತನಾಡಿದ ಬಿ ವೈ ರಾಘವೇಂದ್ರ, “ಈ ಸಿನಿಮಾ ಸಂಪೂರ್ಣವಾಗಿ ಮಲೆನಾಡಿನ ಸುತ್ತಮುತ್ತವೇ ಚಿತ್ರೀಕರಣಗೊಂಡಿದೆ. ಜೊತೆಗೆ ಮಲೆನಾಡಿನವರೇ ಸೇರಿ ಈ ಸಿನಿಮಾ ಮಾಡಿದ್ದಾರೆ. ಮಲೆನಾಡಿನ ಸೌಂದರ್ಯವನ್ನು ತುಂಬಾ ಸುಂದರವಾಗಿ ತೋರಿಸಲಾಗಿದೆ. ಇಡೀ ಚಿತ್ರತಂಡಕ್ಕೆ ಒಳ್ಳೆಯದಾಗಲಿ’ ಎಂದು ಶುಭ ಹಾರೈಸಿದರು.

ಇನ್ನು ಆರಗ ಜ್ಞಾನೇಂದ್ರ ಮಾತನಾಡಿ, “ಇತ್ತೀಚಿನ ದಿನಗಳಲ್ಲಿ ಮಲೆನಾಡಿನ ಸಂಸ್ಕೃತಿಗಳು ಕಣ್ಮರೆಯಾಗಿವೆ. ಅನೇಕ ಪದ್ಧತಿಗಳು ಮರೆಯಾಗಿವೆ. ಇದೀಗ ಕೆರೆಬೇಟೆ ಸಂಸ್ಕೃತಿಯ ಬಗ್ಗೆ ಸಿನಿಮಾ ಮಾಡಿರುವುದು ತುಂಬಾ ಖುಷಿ ಆಗುತ್ತೆ. ಟ್ರೇಲರ್‌ ಮತ್ತು ಸಾಂಗ್‌ ಅದ್ಭುತವಾಗಿ ಮೂಡಿ ಬಂದಿದೆ.

ನಾಯಕ ನಟ, ನಿರ್ದೇಶಕ ನಿರ್ಮಾಪಕ ಸೇರಿದಂತೆ ಎಲ್ಲರೂ ಮಲೆನಾಡಿನವರೇ ಎನ್ನುವುದು ಖುಷಿಯ ವಿಚಾರ. ಸಿನಿಮಾ ಎಲ್ಲಾ ಕಡೆ ಹೌಸ್‌ ಫ‌ುಲ್‌ ಪ್ರದರ್ಶನ ಕಾಣಲಿ’ ಎಂದು ಹೇಳಿದರು.

ಚಿತ್ರ ಮಾರ್ಚ್‌ 15ಕ್ಕೆ ಚಿತ್ರಮಂದಿರಕ್ಕೆ ಎಂಟ್ರಿ ಕೊಡುತ್ತಿದೆ. ಜನಮನ ಸಿನಿಮಾ ಸಂಸ್ಥೆಯಲ್ಲಿ ಮೂಡಿ ಬಂದಿರುವ ಕೆರಬೇಟೆ ಸಿನಿಮಾ ಹೇಗಿರಲಿದೆ, ಮಲೆನಾಡಿನ ಮೀನು ಬೇಟೆಯ ಸಂಸ್ಕೃತಿ ಹೇಗೆ ಮೂಡಿ ಬಂದಿದೆ ಎಂದು ನೋಡಲು ಅಭಿಮಾನಿಗಳು ಸಹ ಕಾತರರಾಗಿದ್ದಾರೆ. ಗೌರಿ ಶಂಕರ್‌ ಈ ಸಿನಿಮಾದ ಹೀರೋ. ರಾಜಗುರು ಮೊದಲ ಬಾರಿಗೆ “ಕೆರೆಬೇಟೆ’ ಸಿನಿಮಾಕ್ಕೆ ಆ್ಯಕ್ಷನ್‌-ಕಟ್‌ ಹೇಳಿದ್ದಾರೆ.

“ಕೆರೆಬೇಟೆ’ಯಲ್ಲಿ ಗೌರಿಶಂಕರ್‌ಗೆ ಬಿಂದು ಶಿವರಾಮ್‌ ನಾಯಕಿಯಾಗಿದ್ದು, ಗೋಪಾಲ ದೇಶಪಾಂಡೆ, ಹರಿಣಿ, ಸಂಪತ್‌ ಕುಮಾರ್‌, ರಘು ರಾಜನಂದ, ರಾಮದಾಸ್‌, ರಾಕೇಶ್‌ ಪೂಜಾರಿ, ವರ್ಧನ್‌ ತೀರ್ಥಹಳ್ಳಿ ಮತ್ತು ಮಲೆನಾಡಿನ ಅನೇಕ ಕಲಾವಿರು ನಟಿಸಿದ್ದಾರೆ.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್.. ವಿಡಿಯೋದಲ್ಲಿ ಸುಳಿವು

BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

Adhipatra Movie: ರೂಪೇಶ್‌ ಅಧಿಪತ್ರ ಫೆ.7ಕ್ಕೆ ಬಿಡುಗಡೆ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.