2000 ಸಾವಿರ ಪರದೆ ಮೇಲೆ ಕೆಜಿಎಫ್

Team Udayavani, Dec 20, 2018, 11:44 AM IST

kgf178.jpg

ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಹುಟ್ಟಿಸಿದ್ದ “ಕೆಜಿಎಫ್’, ಡಿಸೆಂಬರ್‌ 21 ರಂದು ತೆರೆ ಕಾಣುತ್ತಿರುವುದು ಎಲ್ಲರಿಗೂ ಗೊತ್ತಿದೆ. ಈಗ ಹೊಸ ಸುದ್ದಿಯೆಂದರೆ, ದೇಶದೆಲ್ಲೆಡೆ ಸುಮಾರು ಎರಡು ಸಾವಿರ ಚಿತ್ರಮಂದಿರಗಳಲ್ಲಿ “ಕೆಜಿಎಫ್’ ಬಿಡುಗಡೆಯಾಗುತ್ತಿದೆ. ಅಷ್ಟೇ ಅಲ್ಲ, ಅಮೆರಿಕಾ, ಕೆನಡಾ, ಯುಕೆಯಲ್ಲೂ “ಕೆಜಿಎಫ್’ ತೆರೆಕಾಣುತ್ತಿದೆ. ಕನ್ನಡದಲ್ಲೇ ಸುಮಾರು 350 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ “ಕೆಜಿಎಫ್’ ಬಿಡುಗಡೆಯಾಗುತ್ತಿದ್ದು, ಹಿಂದಿ ಭಾಷೆಯಲ್ಲಿ ಭಾರತಾದ್ಯಂತ ಒಂದು ಸಾವಿರ ಚಿತ್ರಮಂದಿರಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿರುವುದು ವಿಶೇಷ.

ಈ ಕುರಿತು ವಿವರ ಕೊಡುವ ನಿರ್ಮಾಪಕ ವಿಜಯ್‌ ಕಿರಗಂದೂರ್‌, “ಸದ್ಯಕ್ಕೆ “ಕೆಜಿಎಫ್’ ಚಿತ್ರಕ್ಕೆ ಬೇಡಿಕೆ ಹೆಚ್ಚಾಗಿರುವುದು ನಿಜ. ಈವರೆಗೆ ನಾವು ವಿತರಣೆ ಹಕ್ಕುಗಳನ್ನು ನೀಡಿದ್ದೇವೆ ಹೊರತು, ಮಾರಾಟ ಮಾಡಿಲ್ಲ. ಈ ಚಿತ್ರ ಐದು ಭಾಷೆಯಲ್ಲಿ ತೆರೆಗೆ ಬರುತ್ತಿರುವುದರಿಂದ  ಈಗಲೇ ಬಿಡುಗಡೆಯಾಗಲಿರುವ ಚಿತ್ರದ ಚಿತ್ರಮಂದಿರಗಳ ಸಂಖ್ಯೆಯನ್ನು ಹೇಳಲಾಗದು. ಆದರೂ, ಎಲ್ಲೆಡೆಯಿಂದಲೂ ಚಿತ್ರ ಬಿಡುಗಡೆ ಮಾಡುವಂತೆ ಕೇಳಲಾಗುತ್ತಿದೆ. ಈಗಾಗಲೇ ಎಲ್ಲಾ ತಯಾರಿ ಮಾಡಿಕೊಳ್ಳಲಾಗಿದೆ’ ಎಂಬುದು ಅವರ ಮಾತು.

ಇನ್ನು, ಚಿತ್ರಮಂದಿರಗಳಲ್ಲಿ “ಕೆಜಿಎಫ್’ ವೀಕ್ಷಿಸುವ ವೇಳೆ ಯಾರಾದರೂ ಸಿನಿಮಾದ ದೃಶ್ಯಗಳನ್ನು ತಮ್ಮ ಮೊಬೈಲ್‌ಗ‌ಳಲ್ಲಿ ಸೆರೆಹಿಡಿದು ಯುಟ್ಯೂಬ್‌ನಲ್ಲಿ ಹರಿ ಬಿಡುವುದನ್ನು ಮಾಡಿದರೆ, ಆ ವಿರುದ್ಧ ಸೈಬರ್‌ ಕ್ರೈಮ್‌ಗೆ ದೂರು ನೀಡಲು ಚಿತ್ರತಂಡ ಮುಂದಾಗಲಿದೆ. ಅಷ್ಟೇ ಅಲ್ಲ, ಈಗಾಗಲೇ ಅದಕ್ಕೊಂದು ವಿಶೇಷ ತಂಡವನ್ನೂ ರಚಿಸಲಾಗಿದೆ. ನಿರೀಕ್ಷೆಯ ಚಿತ್ರ ಬಿಡುಗಡೆಯಾಗುತ್ತಿರುವ ಆ ಕುರಿತು ಮಾತನಾಡುವ ಯಶ್‌, “ಈ ಚಿತ್ರಕ್ಕೆ ನಾನು ನಾಯಕನಲ್ಲ. ಅದು ತಂತ್ರಜ್ಞರು.

ಎಲ್ಲಾ ತಂತ್ರಜ್ಞರು ಸಾಥ್‌ ನೀಡಿದ್ದರಿಂದಲೇ “ಕೆಜಿಎಫ್’ ಅದ್ಭುತವಾಗಿ ಮೂಡಿಬರಲು ಕಾರಣವಾಗಿದೆ’ ಎನ್ನುತ್ತಲೇ, ಚಿತ್ರದಲ್ಲಿ ಕೆಲಸ ಮಾಡಿದ ಪ್ರತಿಯೊಬ್ಬ ತಂತ್ರಜ್ಞರ ಹೆಸರು ಹೇಳುವ ಮೂಲಕ ಅವರಿಗೆ ಥ್ಯಾಂಕ್ಸ್‌ ಹೇಳಿದರು ಯಶ್‌. “ಕೆಜಿಎಫ್’ ಕನ್ನಡಿಗರ ಚಿತ್ರ. ಈ ಚಿತ್ರವನ್ನು ದೇಶದ ಎಲ್ಲಾ ಭಾಷೆಯ ಜನರು ನೋಡಬೇಕು. ಹಾಗೆಯೇ ನಮ್ಮ ಕನ್ನಡ ಚಿತ್ರರಂಗದತ್ತ ತಿರುಗಿ ನೋಡಬೇಕು ಎಂಬುದು ಆಸೆಯಾಗಿತ್ತು.  ಈಗಾಗಲೇ ಅಂಥದ್ದೊಂದು ಮೋಡಿ ಮಾಡಿದೆ. ಪರಭಾಷೆಯ ಚಿತ್ರೋದ್ಯಮ ಮತ್ತು ಮಾದ್ಯಮಗಳು “ಕೆಜಿಎಫ್’ ಬಗ್ಗೆ ಕುತೂಹಲಗೊಂಡಿವೆ.  

ಚಿತ್ರ ಐದು ಭಾಷೆಯಲ್ಲಿ ತೆರೆಕಾಣುತ್ತಿರುವುದರಿಂದ ಎರಡು ವರ್ಷದಲ್ಲಿ ಐದು ಚಿತ್ರದಲ್ಲಿ ನಟಿಸಿದಂತಹ ಅನುಭವ ನನಗಾಗಿದೆ. ಸದ್ಯಕ್ಕೆ “ಕಿರಾತಕ-2′ ನಡೆಯುತ್ತಿದೆ. ಅದಾದ ಬಳಿಕ “ಕೆಜಿಎಫ್ ಚಾಪ್ಟರ್‌-2′, ಆಮೇಲೆ “ರಾಣಾ’ ಚಿತ್ರಗಳಲ್ಲಿ ನಟಿಸಲು ಸಿದ್ಧತೆ ಮಾಡಿಕೊಳ್ಳುತ್ತಿದ್ದೇನೆ. ಒಳ್ಳೆಯ ಕಥೆ ಹಾಗು ನಿರ್ಮಾಣ ಸಂಸ್ಥೆ ಇದ್ದಲ್ಲಿ ಯಾವುದೇ ಭಾಷೆಯಿದ್ದರೂ ನಟಿಸಲು ಅಭ್ಯಂತರವಿಲ್ಲ. ಇಲ್ಲಿಯವರೆಗೂ ಅಂತಹ ಯಾವುದೇ ಅವಕಾಶ ಬಂದಿಲ್ಲ’ ಎಂಬ ಸ್ಪಷ್ಟನೆ ಕೊಟ್ಟರು ಯಶ್‌. ನಾಯಕಿ ಶ್ರೀನಿಧಿಶೆಟ್ಟಿ  ಕೂಡಾ ತಮ್ಮ ಅನುಭವ ಹಂಚಿಕೊಂಡರು. 

ಟಾಪ್ ನ್ಯೂಸ್

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Jaipur: ಶ್ರೀಮಂತ ಪುರುಷರನ್ನು ಮೋಡಿ ಮಾಡುವ ʼಕಿಲಾಡಿ ವಧುʼ; ಇವಳು ಪೀಕಿದ್ದು ಕೋಟಿ ಕೋಟಿ ಹಣ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Gurunandan

Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್‌ ಬಾಂಡ್‌’ ಚಿತ್ರ

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

Nodidavaru Enanthare Movie: ನವೀನ್‌ ಶಂಕರ್‌ ಚಿತ್ರದ ಟೀಸರ್‌ ಬಂತು

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ

KD

Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್‌

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

champions trophy

Cricket: ಚಾಂಪಿಯನ್ಸ್‌ ಟ್ರೋಫಿ ವೇಳಾಪಟ್ಟಿ ಅಂತಿಮ; ಭಾರತದ ಪಂದ್ಯಗಳಿಗೆ ಯುಎಇ ಆತಿಥ್ಯ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ: ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Arrested: ನಟ ಸುನಿಲ್‌ ಪಾಲ್‌, ಮುಸ್ತಾಕ್‌ ಅಪಹರಣ; ಎನ್‌ಕೌಂಟರ್‌ ಮೂಲಕ ಪ್ರಮುಖ ಆರೋಪಿ ಬಂಧನ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Belagavi: ಕಾಂಗ್ರೆಸ್ ಅಧಿವೇಶನ ಶತಮಾನೋತ್ಸವ ದೇಶದ ಇತಿಹಾಸ ಸಂಭ್ರಮಿಸುವ ಕಾರ್ಯಕ್ರಮ: ಡಿಕೆಶಿ

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

Bengaluru: ಅನುಮತಿ ಇಲ್ಲದೇ ಅಲೋಪತಿ ಚಿಕಿತ್ಸೆ; 3 ಕ್ಲಿನಿಕ್‌ಗಳ ವಿರುದ್ಧ ಕೇಸ್‌

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

ವಿಚಾರಣೆ ದಿನ ಗೈರಾದ ವಕೀಲ… ಸಿಟ್ಟಿಗೆದ್ದು ನ್ಯಾಯಾಧೀಶರ ಮೇಲೆ ಚಪ್ಪಲಿ ಎಸೆದ ಆರೋಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.