ಸುದೀಪ್ ಆರೋಗ್ಯದಲ್ಲಿ ಚೇತರಿಕೆ : ವೈದ್ಯರಿಗೆ-ಅಭಿಮಾನಿಗಳಿಗೆ ಕಿಚ್ಚನ ಧನ್ಯವಾದ
Team Udayavani, Apr 29, 2021, 12:29 PM IST
ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು ಚೇತರಿಸಿಕೊಂಡಿದ್ದಾರೆ. ತಾವು ಗುಣಮುಖರಾಗಿರುವುದನ್ನು ಇಂದು ( ಗುರುವಾರ) ಟ್ವಿಟ್ ಮಾಡಿ ತಿಳಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ಕಿಚ್ಚ ಸುದೀಪ್ ಅವರ ಆರೋಗ್ಯದಲ್ಲಿ ವ್ಯತ್ಯಯ ಆಗಿತ್ತು. ಶೂಟಿಂಗ್ ಚಟುವಟಿಕೆಗಳಿಗೆ ಸಂಪೂರ್ಣ ಬ್ರೇಕ್ ಹಾಕಿ ಅವರು ವಿಶ್ರಾಂತಿ ಪಡೆಯುತ್ತಿದ್ದರು. ಕಿಚ್ಚನ ಆರೋಗ್ಯಕ್ಕಾಗಿ ಲಕ್ಷಾಂತರ ಅಭಿಮಾನಿಗಳು ಪ್ರಾರ್ಥಿಸುತ್ತಿದ್ದರು. ದೇವಸ್ಥಾನಗಳಿಗೆ ತೆರಳಿ ವಿಶೇಷ ಪೂಜೆ ಮಾಡಿಸಿದ್ದರು. ಇದೀಗ ಅಭಿಮಾನಿಗಳ ಪ್ರಾರ್ಥನೆ ಫಲಿಸಿದ್ದು, ಕರುನಾಡ ಬಾದ್ ಷಾ ಅವರು ಆರೋಗ್ಯವಾಗಿದ್ದಾರೆ.
ತಮ್ಮ ಆರೋಗ್ಯದ ಬಗ್ಗೆ ಮಾಹಿತಿ ನೀಡಿರುವ ಸುದೀಪ್, ತಮಗಾಗಿ ಪ್ರಾರ್ಥಿಸಿ, ಹಾರೈಸಿದ ಎಲ್ಲರಿಗೂ ಧನ್ಯವಾದ ಹೇಳಿದ್ದಾರೆ. ತಮ್ಮ ಆರೋಗ್ಯ ಸುಧಾರಿಸಿದೆ. ಮುಂದಿನ ವಾರದ ಬಿಗ್‍ಬಾಸ್ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ತಿಳಿಸಿದ್ದಾರೆ.
ತಮ್ಮ ಆರೋಗ್ಯದ ಕಾಳಜಿ ವಹಿಸಿದ ಡಾ.ವೆಂಕಟೇಶ್, ಡಾ.ವಿನಯ್ ಅವರಿಗೂ ಸುದೀಪ್ ಧನ್ಯವಾದ ಹೇಳಿದ್ದು, ತಮ್ಮ ಆರೋಗ್ಯ ಸುಧಾರಣೆಗಾಗಿ ಪ್ರಾರ್ಥಿಸಿದ, ಹಾರೈಸಿದ ಹಲವಾರು ವಿಡಿಯೋ ತುಣುಕುಗಳು, ಸಂದೇಶಗಳನ್ನು ನಾನು ನೋಡಿದ್ದೇನೆ. ಎಲ್ಲರಿಗೂ ಧನ್ಯವಾದಗಳು, ಐ ಲವ್ ಯು ಆಲ್ ಎಂದಷ್ಟೇ ಹೇಳಬಲ್ಲೆ ಎಂದು ಸುದೀಪ್ ಟ್ವಿಟ್ ಮಾಡಿದ್ದಾರೆ.
ಇದ್ದಕ್ಕಿದ್ದಂತೆ ಅನಾರೋಗ್ಯಕ್ಕೀಡಾದ ಸುದೀಪ್ ಬಿಗ್ ಬಾಗ್ ವಾರಾಂತ್ಯದ ಸರಣಿ ಕಾರ್ಯಕ್ರಮದಿಂದ ದೂರ ಉಳಿದಿದ್ದರು. ಸುದೀಪ್ ಆರೋಗ್ಯಕ್ಕೆ ಏನಾಗಿದೆ ಎಂದು ತಿಳಿಯದೆ ಗೊಂದಲವಾಗಿತ್ತು. ಸುದೀಪ್ ಅವರ ಪತ್ನಿ ಹೇಳಿಕೆಯೊಂದನ್ನು ನೀಡಿ, ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ ಎಂದು ತಿಳಿಸಿದ್ದರು. ಅದರ ಹೊರತಾಗಿ ಏನಾಗಿದೆ, ಹೇಗಿದ್ದಾರೆ ಎಂಬ ಮಾಹಿತಿಯನ್ನು ಗೌಪ್ಯವಾಗಿಡಲಾಗಿತ್ತು.
Thanks for the prayers and wshs,,I’m better now n looking forward to attend BB this week. Many thanks to Dr.Venkatesh n Dr.Vinay for having taken so mch care.
Received many videos frm temples where prayers were being offered fo my health. I can only say “luv you all”
??????— Kichcha Sudeepa (@KicchaSudeep) April 29, 2021
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಡುವ ಸ್ಥಿತಿ ಬರಲಿದೆ: ಈರಣ್ಣ ಕಡಾಡಿ
Anandapura: ಸಾಲದ ಬಾಧೆ ತಾಳಲಾರದೆ ರೈತ ಆತ್ಮಹ*ತ್ಯೆ
Shimoga; ಕಾಂಗ್ರೆಸ್-ಮುಸ್ಲಿಮರ ವಿರುದ್ದ ಹೇಳಿಕೆ: ಈಶ್ವರಪ್ಪ ವಿರುದ್ದ ಸುಮೋಟೋ ಪ್ರಕರಣ
Thirthahalli: ಶಾಸಕ ಸ್ಥಾನವನ್ನು ಗಿರವಿ ಇಟ್ಟರಾ ಆರಗ ಜ್ಞಾನೇಂದ್ರ ?
Bengaluru: ಮುನಿರತ್ನ ವಿರುದ್ಧ ಹನಿಟ್ರ್ಯಾಪ್ ಕೇಸ್: ಪಿಐ ಸೆರೆ
MUST WATCH
ಹೊಸ ಸೇರ್ಪಡೆ
Kollegala: ಎತ್ತಿನಗಾಡಿಗೆ ಸಾಮ್ರಾಟ್ ಟರ್ಬೇ ವಾಹನ ಡಿಕ್ಕಿ; ಎತ್ತು ಸಾವು
Udupi: ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್; ಉಡುಪಿ ಮಹಿಳಾ ವಿಭಾಗ ಆರಂಭ
ಕನಕಗಿರಿ:ಮಂಗಳೂರು ಮೂಲದ ಕುಟುಂಬ-ಸೌಹಾರ್ದತೆಗೆ ಸಾಕ್ಷಿ 4 ದಶಕದ ಸಕ್ಕರೆ ಗೊಂಬೆ ತಯಾರಿಕೆ!
Davanagere: ಕಾಂತರಾಜ್ ವರದಿ ಸ್ವೀಕರಿಸಿ ಬಹಿರಂಗಪಡಿಸಿ: ಸಿಎಂಗೆ ಆಂಜನೇಯ ಮನವಿ
ಬೆಳಗಾವಿ: ಮಾನವ ಕಳ್ಳ ಸಾಗಾಣಿಕೆ-ಜೀತ ಪದ್ಧತಿ ದೊಡ್ಡ ಸಮಸ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.