Kiccha Sudeep: ಶೀಘ್ರದಲ್ಲಿ ʼMaxʼ ಮೆಗಾ ಅಪ್ಡೇಟ್.. ಆ.15ಕ್ಕೆ ರಿಲೀಸ್ ಆಗೋದು ಪಕ್ಕಾ?
Team Udayavani, Jul 2, 2024, 12:33 PM IST
ಬೆಂಗಳೂರು: ಸ್ಯಾಂಡಲ್ ವುಡ್ ಪ್ರಿಯರು ದೊಡ್ಡ ಸಿನಿಮಾಗಳ ರಿಲೀಸ್ ಗಾಗಿ ಎದುರು ನೋಡುತ್ತಿದ್ದಾರೆ. ಈ ಸಾಲಿನಲ್ಲಿ ಕಿಚ್ಚ ಸುದೀಪ್ ಅವರ ʼಮ್ಯಾಕ್ಸ್ʼ ಸಿನಿಮಾದ ಹೆಸರು ಕೂಡ ಕೇಳಿ ಬರುತ್ತಿದೆ.
ʼವಿಕ್ರಾಂತ್ ರೋಣʼ ಬಳಿಕ ಕಿಚ್ಚನನ್ನು ಮತ್ತೊಮ್ಮೆ ಬಿಗ್ ಸ್ಕ್ರೀನ್ ನಲ್ಲಿ ನೋಡಲು ಅವರ ಅಭಿಮಾನಿಗಳು ಬಹಳ ಸಮಯದಿಂದ ಕಾಯುತ್ತಿದ್ದಾರೆ. ʼಮ್ಯಾಕ್ಸ್ʼ ಸಿನಿಮಾ ಅನೌನ್ಸ್ ಆಗಿ ಅದರ ಟೀಸರ್ ನೋಡಿದ ಬಳಿಕ ಅಂತೂ ತುದಿಗಾಲಲ್ಲಿ ಚಿತ್ರದ ಅಪ್ಡೇಡ್ ಗಾಗಿ ಕಾಯುತ್ತಿದ್ದಾರೆ.
ಈಗಾಗಲೇ ಶೂಟಿಂಗ್ ಮುಗಿಸಿರುವ ಚಿತ್ರತಂಡ ರಿಲೀಸ್ ಡೇಟ್ ಬಗ್ಗೆ ಪ್ಲ್ಯಾನ್ ಹಾಕಿಕೊಳ್ಳುತ್ತಿದೆ. ಶೀಘ್ರದಲ್ಲಿ ಚಿತ್ರದ ಬಗ್ಗೆ ಬಿಗ್ ಅಪ್ಡೇಟ್ ಹೊರಬೀಳಲಿದೆ ಎಂದು ಚಿತ್ರತಂಡ ಸೋಮವಾರವಷ್ಟೇ ಹೇಳಿದೆ. ಆ ಮೂಲಕ ಅಭಿಮಾನಿಗಳ ನಿರೀಕ್ಷೆಯನ್ನು ಹೆಚ್ಚಾಗಿಸಿದೆ.
ಇದೇ ವರ್ಷ ʼಮ್ಯಾಕ್ಸ್ʼ ರಿಲೀಸ್ ಆಗಲಿದೆ ಎನ್ನಲಾಗುತ್ತಿದೆ. ಬರುವ ತಿಂಗಳು ಅಂದರೆ ಆಗಸ್ಟ್ ನಲ್ಲಿ ಸಿನಿಮಾ ರಿಲೀಸ್ ಆಗಲಿದೆ. ಆಗಸ್ಟ್ 15ರಂದು, ಸ್ವಾತಂತ್ರ್ಯ ದಿನದಂದು ʼಮ್ಯಾಕ್ಸ್ʼ ಥಿಯೇಟರ್ ಗೆ ಎಂಟ್ರಿ ಕೊಡಲಿದೆ ಎನ್ನಲಾಗುತ್ತಿದೆ. ಸರ್ಕಾರಿ ರಜೆ ಹಾಗೂ ವೀಕೆಂಡ್ ಹಾಲಿಡೇ ಇರುವುದರಿಂದ ಅದೇ ಸಮಯದಲ್ಲಿ ಸಿನಿಮಾ ರಿಲೀಸ್ ಆಗಲಿದೆ ಎನ್ನುವ ಮಾತುಗಳು ಸಿನಿವಲಯದಲ್ಲಿ ಹರಿದಾಡಿದೆ.
ತಪ್ಪಿದ್ರೆ ಕಿಚ್ಚನ ಹುಟ್ಟುಹಬ್ಬದ ಸಂದರ್ಭದಲ್ಲಿ(ಸೆಪ್ಪೆಂಬರ್ ತಿಂಗಳಿನಲ್ಲಿ) ತೆರೆ ಕಾಣಬಹುದು ಎನ್ನುವ ಮಾತುಗಳೂ ಕೇಳಿ ಬರುತ್ತಿದೆ. ಅಧಿಕೃತವಾಗಿ ಇನ್ನಷ್ಟೇ ರಿಲೀಸ್ ಡೇಟ್ ಅನೌನ್ಸ್ ಆಗಲಿದೆ.
ಕಾಲಿವುಡ್ ನ ವಿಜಯ್ ಕಾರ್ತಿಕೇಯನ್ ಸಿನಿಮಾವನ್ನು ನಿರ್ದೇಶನ ಮಾಡಿದ್ದು, ವಿ ಕ್ರಿಯೇಷನ್ಸ್ ಅಡಿಯಲ್ಲಿ ಖ್ಯಾತ ನಿರ್ಮಾಪಕ ಕಲೈಪುಲಿ ಎಸ್. ಥಾನು ಅವರು ಸಿನಿಮಾಕ್ಕೆ ಬಂಡವಾಳ ಹಾಕಿದ್ದಾರೆ. ಅಜನೀಶ್ ಅವರ ಸಂಗೀತ ಚಿತ್ರಕ್ಕಿದೆ.
ಚಿತ್ರದಲ್ಲಿ ಕಿಚ್ಚ ಅರ್ಜುನ್ ಮಹಾಕ್ಷಯ್ ಎನ್ನುವ ಖಡಕ್ ಪೊಲೀಸ್ ಆಫೀಸರ್ ಆಗಿ ಸುದೀಪ್ ಬಣ್ಣ ಹಚ್ಚಿದ್ದಾರೆ.
ಕಿಚ್ಚನ ಜೊತೆ ಸಂಯುಕ್ತ ಹೊರ್ನಾಡ್, ಸುಕೃತಾ ವಾಗ್ಲೆ ಮತ್ತು ಅನಿರುದ್ಧ ಭಟ್ ಮುಂತಾದ ಕಲಾವಿದರು ನಟಿಸಿದ್ದಾರೆ.
ಅಂದಹಾಗೆ, “ಮ್ಯಾಕ್ಸ್ʼ ಪ್ಯಾನ್ ಇಂಡಿಯಾ ಚಿತ್ರವಾಗಿದ್ದು, ಕನ್ನಡ, ತೆಲುಗು, ತಮಿಳು, ಹಿಂದಿ ಹಾಗೂ ಮಲಯಾಳಂನಲ್ಲಿ ಬಿಡುಗಡೆಯಾಗಲಿದೆ.
ಕನ್ನಡದಲ್ಲಿ ಆ.15 ರಂದು ಗಣೇಶ್ ಅವರ ʼ ಕೃಷ್ಣಂ ಪ್ರಣಯ ಸಖಿʼ, ದಿಗಂತ್ ಅವರʼ ಪೌಡರ್ʼ, ಹಾಗೂ ಇಂದ್ರಜಿತ್ ಲಂಕೇಶ್ ಅವರ ʼಗೌರಿʼ ಸಿನಿಮಾ ರಿಲೀಸ್ ಆಗಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.