ಸಿಎಂ ಭೇಟಿಯಾದ ಸುದೀಪ್ : ಚಿತ್ರರಂಗದ ಸಮಸ್ಯೆಗಳ ಕುರಿತು ಚರ್ಚೆ
Team Udayavani, Aug 31, 2021, 5:49 PM IST
ಬೆಂಗಳೂರು: ಕನ್ನಡ ಚಿತ್ರರಂಗದ ಸೂಪರ್ ಸ್ಟಾರ್ ಕಿಚ್ಚ ಸುದೀಪ್ ಅವರಿಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದಾರೆ.
ಮಂಗಳವಾರ ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಕೆಲ ಸಮಯ ಸೌಹಾರ್ದಯುತ ಮಾತುಕತೆ ನಡೆಸಿದ್ದಾರೆ. ಬಸವರಾಜ ಬೊಮ್ಮಾಯಿ ಸಿಎಂ ಆಗುವುದಕ್ಕಿಂತಲೂ ಮುನ್ನವೇ ಸುದೀಪ್ ಕುಟುಂಬದ ಜೊತೆ ಉತ್ತಮ ಒಡನಾಟ ಹೊಂದಿದ್ದರು. ಅಷ್ಟೇ ಅಲ್ಲ, ಸುದೀಪ್ ವೃತ್ತಿಜೀವನದ ಆರಂಭದ ದಿನಗಳಲ್ಲಿ ಬಸವರಾಜ ಬೊಮ್ಮಾಯಿ ಬೆಂಬಲವಾಗಿ ನಿಂತಿದ್ದರು. ಆ ಬಗ್ಗೆ ಸುದೀಪ್ ಇತ್ತೀಚೆಗೆ ಟ್ವೀಟ್ ಮಾಡಿದ್ದರು.
ಸುದೀಪ್ ಅವರು ಭೇಟಿಯಾಗಿರುವ ವಿಚಾರವನ್ನು ಟ್ವೀಟ್ ಮಾಡಿ ತಿಳಿಸಿರುವ ಮುಖ್ಯಮಂತ್ರಿಗಳು, ಕನ್ನಡ ಚಿತ್ರರಂಗದ ಹಲವು ಸಮಸ್ಯೆಗಳ ಕುರಿತು ಚರ್ಚಿಸಿದೆವು. ಸುದೀಪ್ ಅವರ ಜೊತೆಗಿನ ಮಾತುಕತೆ ಮದುರವಾಗಿತ್ತು. ನಿಮ್ಮ ಮುಂದಿನ ಯೋಜನೆಗಳಿಗೆ ಶುಭವಾಗಲಿ ಎಂದು ಹಾರೈಸಿದ್ದಾರೆ.
Thank you @CMofKarnataka @BSBommai mama,,, for having me over.
Best wishes always ??? https://t.co/03LjZEzBms— Kichcha Sudeepa (@KicchaSudeep) August 31, 2021
ಇನ್ನು ಅಭಿನಯ ಚಕ್ರವರ್ತಿ ಸುದೀಪ್ ನಟಿಸಿರುವ ಬಹುನೀರಿಕ್ಷಿತ ಸಿನಿಮಾ ವಿಕ್ರಾಂತ್ ರೋಣಾ ಬಿಡುಗಡೆಗೆ ಸಿದ್ಧವಾಗಿದೆ. ದಿನಕ್ಕೊಂದು ಕ್ಯೂರಾಸಿಟಿ ಹುಟ್ಟಿಸುವ ರೀತಿ ಸಿನಿಮಾದ ಪಾತ್ರ ಪರಿಚಯ, ಪೋಸ್ಟರ್ ಬಿಡುಗಡೆ ಮಾಡುತ್ತಾ ಅಭಿಮಾನಿಗಳಲ್ಲಿ ಇನ್ನಷ್ಟು ನೀರಿಕ್ಷೆಯನ್ನು ಹೆಚ್ಚು ಮಾಡಿದೆ. ವಿಕ್ರಾಂತ್ ರೋಣ ಸಿನಿಮಾದ ಆಡಿಯೋ ಹಕ್ಕನ್ನು ಲಹರಿ ಮ್ಯೂಸಿಕ್ ಸಂಸ್ಥೆ ಭಾರೀ ಮೊತ್ತಕ್ಕೆ ಖರೀದಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Prashanth Neel: ಸಲಾರ್‌ಗೆ ನಾನು ಇನ್ನಷ್ಟು ಶ್ರಮ ಹಾಕಬೇಕಿತ್ತು; ಪ್ರಶಾಂತ್ ನೀಲ್
UI Movie: ಉಪ್ಪಿ ಯುಐ ಮೆಚ್ಚಿದ ಯಶ್
Shivaraj Kumar: ಶಿವರಾಜ್ ಕುಮಾರ್ ಅವರ ಆಪರೇಷನ್ ಯಶಸ್ವಿಯಾಗಿದೆ – ಪತ್ನಿ ಗೀತಾ ಮಾಹಿತಿ
Max: ಇಂದು ಸುದೀಪ್ ಮ್ಯಾಕ್ಸ್ ತೆರೆಗೆ; ಆ್ಯಕ್ಷನ್ ಅಡ್ಡದಲ್ಲಿ ಕಿಚ್ಚ ಮಿಂಚು
OTT Release Date: ಸೂಪರ್ ಹಿಟ್ ʼಭೈರತಿ ರಣಗಲ್ʼ ಓಟಿಟಿ ರಿಲೀಸ್‌ಗೆ ಡೇಟ್ ಫಿಕ್ಸ್
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.