ಕಪಿಲ್ ಶರ್ಮಾ ಶೋನಲ್ಲಿ “ಕಿಚ್ಚ ಕಮಾಲ್’
Team Udayavani, Feb 5, 2019, 5:33 AM IST
ಹಿಂದಿ ಕಿರುತೆರೆಯ ಅತ್ಯಂತ ಜನಪ್ರಿಯ ಕಾರ್ಯಕ್ರಮ “ಕಪಿಲ್ ಶರ್ಮಾ ಶೋ’ದಲ್ಲಿ ಮೊದಲ ಬಾರಿಗೆ ಕನ್ನಡದ ನಟ ಸುದೀಪ್ ಕಾಣಿಸಿಕೊಳ್ಳುತ್ತಿದ್ದಾರೆ. ಪ್ರತಿ ಸಂಚಿಕೆಯಲ್ಲೂ ಚಿತ್ರತಾರೆಯರು, ರಾಜಕಾರಣಿಗಳು, ಕ್ರೀಡಾಪಟುಗಳು, ಸಾಮಾಜಿಕ ಹೋರಾಟಗಾರರು, ಸಮಾಜದ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸುವ “ಕಪಿಲ್ ಶರ್ಮಾ ಶೋ’ದಲ್ಲಿ ಈ ಬಾರಿ ಸುದೀಪ್ ಅತಿಥಿಯಾಗಿ ಭಾಗವಹಿಸಿದ್ದಾರೆ.
ಇನ್ನು ಈ ಕಾರ್ಯಕ್ರಮದ ಕುರಿತು ಸಂತಸ ವ್ಯಕ್ತಪಡಿಸಿ ಟ್ವೀಟ್ ಮಾಡಿರುವ ಸುದೀಪ್, “ಕಪಿಲ್ ಅವರ ಶೋನಲ್ಲಿ ನಗು ಸಮೃದ್ಧವಾಗಿದ್ದು, ಅಪರೂಪ ಸಂದರ್ಭ ಎಂಬಂತೆ ಹೆಚ್ಚು ನಕ್ಕಿದ್ದೇನೆ’ ಎಂದು ಕಾರ್ಯಕ್ರಮದಲ್ಲಿ ಭಾಗವಹಿಸಿ ಎಲ್ಲರಿಗೂ ಧನ್ಯವಾದ ತಿಳಿಸಿದ್ದಾರೆ. ಅಲ್ಲದೆ ಕಾರ್ಯಕ್ರಮದಲ್ಲಿ ಕಪಿಲ್ ಶರ್ಮಾ, ನವಜೋತ್ ಸಿಂಗ್ ಸಿಧು, ಸುನಿಲ್ ಶೆಟ್ಟಿ ಜೊತೆಯಲ್ಲಿ ಕ್ಲಿಕ್ಕಿಸಿಕೊಂಡಿರುವ ಫೋಟೋಗಳನ್ನು ಕೂಡ ಸುದೀಪ್ ಶೇರ್ ಮಾಡಿದ್ದಾರೆ.
ಸಾಮಾನ್ಯವಾಗಿ ಬಾಲಿವುಡ್ ಕಲಾವಿದರು ತಮ್ಮ ಸಿನಿಮಾ ಪ್ರಚಾರಕ್ಕಾಗಿ ಈ ಶೋವನ್ನು ಬಳಸಿಕೊಳ್ಳುತ್ತಾರೆ. ಇನ್ನು ಕೆಲವೊಮ್ಮೆ ವಾಹಿನಿ ಮತ್ತು ಆಯೋಜಕರು ಕೂಡ ವಿಶೇಷ ವ್ಯಕ್ತಿಗಳನ್ನು ಕಾರ್ಯಕ್ರಮಕ್ಕೆ ಕರೆಸಿಕೊಳ್ಳುತ್ತಾರೆ. ಸದ್ಯ ಸುದೀಪ್ ಕೂಡ ದೇಶದ ಕಿರುತೆರೆಯ ಅತ್ಯಂತ ಜನಪ್ರಿಯ ಶೋದಲ್ಲಿ ಮೊದಲ ಬಾರಿಗೆ ತಮ್ಮ “ಪೈಲ್ವಾನ್’ ಚಿತ್ರದ ಪ್ರಚಾರ ಮಾಡಿದ್ದಾರೆ ಎನ್ನಲಾಗುತ್ತಿದ್ದು, “ಪೈಲ್ವಾನ್’ನ ಬಗ್ಗೆ ಕಿಚ್ಚನ ಪ್ರಚಾರ ಹೇಗಿರಲಿದೆ ಅನ್ನೋದು ಕಾರ್ಯಕ್ರಮ ಪ್ರಸಾರವಾದ ಮೇಲಷ್ಟೇ ಗೊತ್ತಾಗಲಿದೆ.
ಇನ್ನೊಂದು ವಿಷಯವೆಂದರೆ, ತಮ್ಮ ಮದುವೆ ಬಳಿಕ ಕಪಿಲ್ ಶರ್ಮಾ ನಡೆಸಿಕೊಡುತ್ತಿರುವ ಎರಡನೇ ಸೀಸನ್ ಇದಾಗಿದ್ದು, ಕನ್ನಡದ ಖ್ಯಾತ ನಾಯಕ ನಟರೊಬ್ಬರು ಈ ಶೋನಲ್ಲಿ ಭಾಗವಹಿಸಿ ತಮ್ಮ ಚಿತ್ರದ ಬಗ್ಗೆ ಪ್ರಚಾರ ಮಾಡುತ್ತಿರುವುದು ಇದೇ ಮೊದಲು. ಇತ್ತೀಚೆಗೆ ಈ ಸಂಚಿಕೆಯ ಚಿತ್ರೀಕರಣ ಮುಕ್ತಾಯವಾಗಿದ್ದು, ಸುದೀಪ್ ಸಂಚಿಕೆ ಯಾವಾಗ ಪ್ರಸಾರವಾಗಲಿದೆ ಎಂಬುದನ್ನು ಇನ್ನೂ ವಾಹಿನಿಯ ಮೂಲಗಳು ಖಚಿತಪಡಿಸಿಲ್ಲ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Aaram Aravinda Swamy: ಸ್ವಾಮಿ ನಂಬಿ ಬಂದ ಅನೀಶ್; ಪ್ರೇಕ್ಷಕ ಕೈ ಹಿಡಿಯೋ ನಿರೀಕ್ಷೆ
Sandalwood: ಮಾಸ್ ಸಿನಿಮಾಗಳಿಗೆ ಜೈ ಎಂದ ಪ್ರೇಕ್ಷಕ
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
MUST WATCH
ಹೊಸ ಸೇರ್ಪಡೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Maryade Prashne: ಮಧ್ಯಮ ವರ್ಗದ ಸುತ್ತ ಹೀಗೊಂದು ಚಿತ್ರ
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.