ರಗಡ್ ಲುಕ್‍ನಲ್ಲಿ ಕಿಚ್ಚನ ಮಿಂಚು: Watch
Team Udayavani, Jan 15, 2019, 11:53 AM IST
ಈಗಾಗಲೇ ವಿಭಿನ್ನ ಲುಕ್ಗಳ ಮೂಲಕ ಸಿನಿಪ್ರಿಯರಿಗೆ ಸಿಕ್ಕಾಪಟ್ಟೆ ಕ್ಯೂರಿಯಾಸಿಟಿ ಹುಟ್ಟಿಸಿರುವ, ಸ್ಯಾಂಡಲ್‍ವುಡ್‍ನ ಆರಡಿ ಕಟೌಟ್, ಬಾದ್‍ಷಾ, ಕಿಚ್ಚ ಸುದೀಪ್ ಅಭಿನಯದ ಬಹು ನಿರೀಕ್ಷಿತ “ಪೈಲ್ವಾನ್’ ಚಿತ್ರದ ಟೀಸರ್ ಬಿಡುಗಡೆಯಾಗಿದ್ದು, ಈ ಮೂಲಕ ಸಂಕ್ರಾಂತಿ ಹಬ್ಬಕ್ಕೆ ಅಭಿಮಾನಿಗಳಿಗೆ ಟೀಸರನ್ನು ಚಿತ್ರತಂಡ ಉಡುಗೊರೆಯಾಗಿ ನೀಡಿದೆ.
ಟೀಸರ್ನಲ್ಲಿ ಕಿಚ್ಚ ಸುದೀಪ್ ಪಕ್ಕಾ “ಪೈಲ್ವಾನ್’ ಗೆಟಪ್ನಲ್ಲಿ ದರ್ಶನ ಕೊಟ್ಟಿದ್ದು, ಪೊಗರ್ದಸ್ತ್ ಲುಕ್‍ನಲ್ಲಿ ಬಾದ್‍ಷಾ ಮಿಂಚಿದ್ದಾರೆ. ಜೊತೆಗೆ ಮೇಕಿಂಗ್ ಸ್ಟೈಲ್ ಶಿಳ್ಳೆ, ಚಪ್ಪಾಳೆ ಗಿಟ್ಟಿಸುವಂತಿದ್ದು, ಚಿತ್ರದ ಮೇಲೆ ಸಿನಿಪ್ರಿಯರ ನಿರೀಕ್ಷೆ ಇನ್ನಷ್ಟು ಹೆಚ್ಚಾಗಿದೆ.
“ಪೈಲ್ವಾನ್’ ಚಿತ್ರ ಕನ್ನಡ ಸೇರಿದಂತೆ ಹಿಂದಿ, ತಮಿಳು, ತೆಲುಗು, ಮಲಯಾಳಂ, ಮರಾಠಿ, ಪಂಜಾಬಿ, ಭೋಜ್ಪುರಿ ಹಾಗೂ ಬಂಗಾಳಿ ಭಾಷೆಗಳಲ್ಲಿ ಬಿಡುಗಡೆಯಾಗಲಿದ್ದು, ಸದ್ಯ ಚಿತ್ರದ ಡಬ್ಬಿಂಗ್ ಹಕ್ಕು ಖರೀದಿಗೂ ಸಿಕ್ಕಾಪಟ್ಟೆ ಡಿಮ್ಯಾಂಡ್ ಇದೆಯಂತೆ. ಇನ್ನು “ಪೈಲ್ವಾನ್’ ಚಿತ್ರವು ಬಾಕ್ಸಿಂಗ್ ಮತ್ತು ಕುಸ್ತಿ ಕುರಿತಾದ ಚಿತ್ರವಾಗಿದ್ದು, ಈ ಹಿಂದೆ ಚಿತ್ರದ ಮೊದಲ ಲುಕ್ ಸಖತ್ ವೈರಲ್ ಆಗಿತ್ತು.
ಚಿತ್ರದಲ್ಲಿ ಬಾಲಿವುಡ್ ನಟ ಸುನೀಲ್ ಶೆಟ್ಟಿ ಅವರು ನಟಿಸುತ್ತಿದ್ದು, ಸುದೀಪ್ ಎದುರಿಗೆ ನಾಯಕಿಯಾಗಿ ಮುಂಬೈ ಮೂಲದ ಆಕಾಂಕ್ಷಾ ಸಿಂಗ್ ತೆರೆ ಹಂಚಿಕೊಳ್ಳುತ್ತಿದ್ದು, ಕಬೀರ್ ಸಿಂಗ್ ದುಹಾನ್ ಪ್ರಮುಖ ಪಾತ್ರ ಮಾಡಿದ್ದಾರೆ. ಅಲ್ಲದೇ ಆರ್.ಆರ್.ಆರ್. ಮೋಷನ್ ಪಿಕ್ಚರ್ ಬ್ಯಾನರ್‌ನಡಿ ಸ್ವಪ್ನ ಕೃಷ್ಣ ಮತ್ತು ಕೃಷ್ಣ ಚಿತ್ರವನ್ನು ನಿರ್ಮಿಸಿದ್ದಾರೆ.
ನಿರ್ದೇಶನದ ಜೊತೆಗೆ ಕಥೆ ಹಾಗೂ ಚಿತ್ರಕಥೆಯನ್ನು ಕೃಷ್ಣ ಅವರೇ ರಚಿಸಿದ್ದಾರೆ. ಚಿತ್ರಕ್ಕೆ ಅರ್ಜುನ್ ಜನ್ಯ ಸಂಗೀತ ನಿರ್ದೇಶನ ಮಾಡಿದರೆ, ಕರುಣಾಕರನ್ ಅವರು ಛಾಯಾಗ್ರಹಣ ಮಾಡಿದ್ದಾರೆ. ಉಳಿದಂತೆ ಶರತ್ ಲೋಹಿತಾಶ್ವ, ಸಾಧುಕೋಕಿಲ, ಚಿಕ್ಕಣ್ಣ ಸೇರಿದಂತೆ ಅನೇಕರ ತಾರಾಬಳಗವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Upendra: ʼಯುಐʼಗೆ ಸ್ಯಾಂಡಲ್ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Shiva Rajkumar: ಚಿಕಿತ್ಸೆಗಾಗಿ ಅಮೆರಿಕದತ್ತ ಶಿವಣ್ಣ; ಚಿತ್ರರಂಗದ ಶುಭ ಹಾರೈಕೆ
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.