Saroja Sanjeev: ಕಿಚ್ಚನಿಗೆ ಮಾತೃ ವಿಯೋಗ; ಸುದೀಪ್ ತಾಯಿ ಸರೋಜಾ ಸಂಜೀವ್ ಇನ್ನಿಲ್ಲ
Team Udayavani, Oct 20, 2024, 10:14 AM IST
ಬೆಂಗಳೂರು: ನಟ, ನಿರೂಪಕ ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಸಂಜೀವ್ ಅವರು ಅಸುನೀಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ಸರೋಜಾ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ರವಿವಾರ (ಅ.20) ನಿಧನರಾಗಿದ್ದಾರೆ.
ಕಿಚ್ಚ ಸುದೀಪ್ ಅವರ ತಾಯಿ ಸರೋಜಾ ಸಂಜೀವ್ ಅವರು ಬೆಳಗ್ಗೆ 7 ಗಂಟೆ ಸುಮಾರಿಗೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಕೆಲವು ಸಮಯದಿಂದ ಸರೋಜಾ ಅವರು ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಹೀಗಾಗಿ ಅವರನ್ನು ಜಯನಗರದ ಅಪೋಲೊ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಸರೋಜಾ ಸಂಜೀವ್ ಅವರು ಕೊನೆಯುಸಿರೆಳೆದಿದ್ದಾರೆ.
ಕಿಚ್ಚ ಸುದೀಪ್ ತಾಯಿಯ ಬಗ್ಗೆ ಆಗಾಗ ವೇದಿಕೆ ಮೇಲೆ ಹೇಳಿಕೊಂಡಿದ್ದರು. ಇತ್ತೀಚೆಗಷ್ಟೆ ಬಿಗ್ಬಾಸ್ ವೇದಿಕೆ ಮೇಲೆ ಸುದೀಪ್ ಅವರು ಅವರ ತಾಯಿಯನ್ನು ನೆನಪಿಸಿಕೊಂಡಿದ್ದರು. ಕಿಚ್ಚ ಸುದೀಪ್ ಕುಟುಂಬದಲ್ಲಿ ಶೋಕ ಮನೆ ಮಾಡಿದೆ.
ಸರೋಜಾ ಮೃತದೇಹವನ್ನು ಮಧ್ಯಾಹ್ನ 12 ಗಂಟೆಗೆ ಸುದೀಪ್ರ ಜೆಪಿ ನಗರ ನಿವಾಸಕ್ಕೆ ತರಲಾಗುವುದು, ಜೆಪಿ ನಗರ ನಿವಾಸದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಲಿದೆ.
ಸರೋಜಾ ಅವರು ಮಂಗಳೂರು ಮೂಲದವರು. ವಿಕ್ರಾಂತ್ ರೋಣ ಸಿನಿಮಾ ಸಮಯದಲ್ಲಿ ಈ ಬಗ್ಗೆ ಮಾತನಾಡಿದ್ದ ಸುದೀಪ್, ‘ನನ್ನ ತಾಯಿ ಮಂಗಳೂರು ಮೂಲದವರು, ಅವರ ಮಾತೃಭಾಷೆ ತುಳು. ನನಗೆ ಆ ಭಾಷೆ ಬಹಳ ಇಷ್ಟ. ನಾನು ಸಾಕಷ್ಟು ಕೇಳಿಸಿಕೊಂಡಿದ್ದೇನೆ ಆದರೆ ನನಗೆ ಮಾತನಾಡಲು ಬರುವುದಿಲ್ಲ ಎಂದಿದ್ದರು’.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು
Drone Prathap: ಸಿನಿಮಾರಂಗಕ್ಕೆ ಡ್ರೋನ್ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.