Kiran Raj; ಆ.30ಕ್ಕೆ ತೆರೆಗೆ ಬರುತ್ತಿಲ್ಲ ʼರಾನಿʼ; ಹೊಸ ರಿಲೀಸ್ ದಿನ ಘೋಷಣೆ
Team Udayavani, Aug 26, 2024, 1:24 PM IST
ಎಲ್ಲವೂ ಅಂದುಕೊಂಡಂತೆ ಆಗಿದ್ದರೆ ಕಿರಣ್ ರಾಜ್ (Kiran Raj) ಅಭಿನಯದ “ರಾನಿ’ (Ronny) ಚಿತ್ರ ಆ.30ರಂದು ತೆರೆಕಾಣಬೇಕಿತ್ತು. ಆದರೆ, ಈಗ ಚಿತ್ರ ಬಿಡುಗಡೆ ಮುಂದಕ್ಕೆ ಹೋಗಿದೆ. ಆ.30ರ ಬದಲು ಸೆಪ್ಟೆಂಬರ್ 12ರಂದು ಬಿಡುಗಡೆಯಾಗುತ್ತಿದೆ.
ಪ್ರಸ್ತುತ ಬಿಡುಗಡೆಯಾಗಿರುವ ಕನ್ನಡ ಚಿತ್ರಗಳು ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಹಾಗಾಗಿ ಚಿತ್ರಮಂದಿರಗಳ ಸಮಸ್ಯೆ ಎದುರಾಗಬಾರದೆಂದು ಈ ನಿರ್ಧಾರ ತೆಗದುಕೊಂಡಿದ್ದೇವೆ ಎನ್ನುವುದು ತಂಡದ ಮಾತು.
“ಆಗಸ್ಟ್ 20ರಂದು ನಮ್ಮ ಚಿತ್ರದ ಟ್ರೇಲರ್ ಬರಬೇಕಿತ್ತು. ಚಿತ್ರ ಆ.30ರಂದು ಬಿಡುಗಡೆ ಆಗಬೇಕಿತ್ತು. ಭೀಮ ಹಾಗೂ ಕೃಷ್ಣಂ ಪ್ರಣಯ ಸಖೀ ಚಿತ್ರಗಳು ಯಶಸ್ವಿ ಪ್ರದರ್ಶನ ಕಾಣುತ್ತಿರುವುದರಿಂದ, ನಮಗೆ ಚಿತ್ರಮಂದಿರಗಳ ಸಮಸ್ಯೆ ಆಗಬಹುದು ಎಂದು ವಿತರಕರು ಹೇಳಿದರು. ನಾವು ಬಿಡುಗಡೆ ಮಾಡುವ ಹೊತ್ತಿಗೆ ಎಷ್ಟು ಚಿತ್ರಮಂದಿರಗಳು ಸಿಗುತ್ತದೆ ಗೊತ್ತಿಲ್ಲ. ಚೆನ್ನಾಗಿ ಶೇರ್ ಸಿಕ್ಕರೆ, ಚಿತ್ರಮಂದಿರ ತೆಗೆಯುವುದು ಸರಿಯಲ್ಲ. ಹಾಗಾಗಿ ಮುಂದೆ ಹೋಗುತ್ತಿದ್ದೇವೆ. ಮುಂದೆ ಹೋಗುತ್ತಿರುವುದಕ್ಕೆ ಬೇಸರವಿಲ್ಲ. ಖುಷಿಯಿದೆ. ಏಕೆಂದರೆ, ಜನ ಈಗ ಚಿತ್ರಮಂದಿರದತ್ತ ಬರುತ್ತಿದ್ದಾರೆ. ಸೆಪ್ಟೆಂಬರ್ 12ರಂದು ಬಿಡುಗಡೆ ಮಾಡುತ್ತಿದ್ದೇವೆ. ನಮ್ಮದು ದೊಡ್ಡ ಬಜೆಟ್ ಸಿನಿಮಾ. ಹಾಗಾಗಿ ಸ್ವಲ್ಪ ತಡೆದು ದೊಡ್ಡಮಟ್ಟದಲ್ಲೇ ರಿಲೀಸ್ ಮಾಡಬೇಕು. ಹಾಗಾಗಿ ಬಿಡುಗಡೆ ದಿನಾಂಕ ಮುಂದೆ ಹೋಗಿದೆ’ ಎನ್ನುವುದು ನಿರ್ದೇಶಕ ಗುರುತೇಜ್ ಶೆಟ್ಟಿ ಮಾತು.
ನಿಮ್ಮ ನಿರೀಕ್ಷೆಗೆ ತಕ್ಕ ಹಾಗೆ ಚಿತ್ರ ಇದೆ. ಈ ಚಿತ್ರದಲ್ಲಿ ನನ್ನ ಪಾತ್ರ ವಿಭಿನ್ನವಾಗಿದೆ. ಎಂಟು ವರ್ಷಗಳ ಅಂತರದಲ್ಲಿ ಕಥೆ ನಡೆಯುತ್ತದೆ. ಎರಡು ಗೆಟಪ ಗಳಲ್ಲಿ ಕಾಣಿಸಿಕೊಂಡಿದ್ದೇನೆ. ಈ ಚಿತ ನನ್ನ ಪಾಲಿಗೆ ಬಹಳ ಮಹತ್ವದ್ದು . ಈ ಗೆಲುವು ನನಗೆ ಬಹಳ ಮುಖ್ಯ. ಏನೇ ಕನಸು ಮತ್ತು ಗುರಿ ಇದ್ದರೂ, ಒಂದು ಶಕ್ತಿ ಬಹಳ ಮುಖ್ಯವಾಗುತ್ತದೆ. ಆ ಶಕ್ತಿ ಬರಬೇಕು ಎಂದರೆ ನಮ್ಮ ಮೇಲೆ ನಂಬಿಕೆ ಇರಬೇಕು. ಆ ನಂಬಿಕೆ ಬರಬೇಕು ಎಂದರೆ ಈ ಚಿತ್ರ ಗೆಲ್ಲಲೇಬೇಕು. ಇಲ್ಲವಾದರೆ, ನಾನು ಪುನಃ ಮೊದ ಲಿನಿಂದ ಶುರು ಮಾಡಬೇಕು’ ಎಂದರು ನಾಯಕ ಕಿರಣ್ ರಾಜ್.
ಈ ಚಿತ್ರವನ್ನು ಚಂದ್ರಕಾಂತ್ ಪೂಜಾರಿ ಮತ್ತು ಉಮೇಶ್ ಹೆಗಡೆ ನಿರ್ಮಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
New Delhi: 5ಜಿ ಸೇವೆಗಾಗಿ ಬಿಎಸ್‌ಎನ್ಎಲ್‌ನಿಂದ ಟೆಂಡರ್ ಆಹ್ವಾನ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
J&K: ವಾಜಪೇಯಿ ಬದುಕಿದ್ದರೆ ಜಮ್ಮು ಕಾಶ್ಮೀರ ಕೇಂದ್ರಾಡಳಿತ ಪ್ರದೇಶವಾಗುತ್ತಿರಲಿಲ್ಲ: ಒಮರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.