ನಾಣ್ಯಗಳ ಸುತ್ತ ಖೊಟ್ಟಿ ಪೈಸಾ…
Team Udayavani, Oct 4, 2018, 5:12 PM IST
ಉತ್ತರ ಕರ್ನಾಟಕದ ಸೊಗಡಿರುವ ಅನೇಕ ಸಿನಿಮಾಗಳು ಕನ್ನಡದಲ್ಲಿ ಬರುತ್ತಲೇ ಇವೆ. ಈ ಸಾಲಿಗೆ ಹೊಸ ಸೇರ್ಪಡೆ “ಖೊಟ್ಟಿ ಪೈಸೆ’. ಈ ಚಿತ್ರ ಸದ್ದಿಲ್ಲದೇ ಚಿತ್ರೀಕರಣ ಮುಗಿಸಿದ್ದು, ನಾಳೆ ಬಿಡುಗಡೆಯಾಗುತ್ತಿದೆ. ಕಿರಣ್ ಕೆ.ಆರ್. ಈ ಚಿತ್ರದ ನಿರ್ದೇಶಕರು. ವೀರಪ್ಪ ಶಿರಗಣ್ಣ ಈ ಚಿತ್ರದ ನಿರ್ಮಾಪಕರು. ನಾಣ್ಯಕ್ಕೂ, ಮನುಷ್ಯನಿಗೂ ಇರುವಂತಹ ಸಂಬಂಧವನ್ನು ಈ ಚಿತ್ರದ ಮೂಲಕ ಹೇಳಲು ಹೊರಟಿದ್ದಾರೆ.
ಚಿತ್ರದ ಬಗ್ಗೆ ಮಾತನಾಡುವ ಕಿರಣ್, “1998 ರಲ್ಲಿ 5, 10 ಹಾಗೂ 20 ಪೈಸೆ ನಾಣ್ಯಗಳನ್ನು ರದ್ದುಪಡಿಸಲಾಯಿತು. ಉತ್ತರ ಕರ್ನಾಟಕದ ಒಂದು ಕುಟುಂಬದ ಕಥೆಯನ್ನು ಈ ನಾಣ್ಯಗಳು ರದ್ದಾದ ಹಿನ್ನೆಲೆಯಲ್ಲಿ ಹೇಳಿದ್ದೇನೆ. ಚಿತ್ರದಲ್ಲಿ ಕಮರ್ಷಿಯಲ್ ಅಂಶಗಳಿಗಿಂತ ಕಥೆಗೆ ಹೆಚ್ಚು ಒತ್ತು ಕೊಟ್ಟಿದ್ದೇನೆ. ಚಿತ್ರದಲ್ಲಿ ಆಗಿನ ಕಾಲದ ಭಾಷೆಯನ್ನೇ ಬಳಿಸಿದ್ದು, ಬಾಗಲಕೋಟೆ ಜಿಲ್ಲೆಯಲ್ಲಿ ಬಹುತೇಕ ಚಿತ್ರೀಕರಣ ನಡೆದಿದೆ’ ಎಂದು ಚಿತ್ರದ ಬಗ್ಗೆ ವಿವರ ನೀಡಿದರು. ಚಿತ್ರದ ಬಗ್ಗೆ ಮಾತನಾಡುವ ನಿರ್ಮಾಪಕ ವೀರಪ್ಪ, ನಿರ್ದೇಶಕರು ಹೇಳಿದ ಬಜೆಟ್‌ನಲ್ಲೇ ಸಿನಿಮಾ ಮಾಡಿ ಮುಗಿಸಿದ್ದಾರೆ. ಉತ್ತರ ಕರ್ನಾಟಕ ಕಥೆಯಾಗಿರುವುದರಿಂದ ಚಿತ್ರ ಜನಕ್ಕೆ ಇಷ್ಟವಾಗುತ್ತದೆ ಎಂಬ ವಿಶ್ವಾಸವಿದೆ ಎಂದರು. ಚಿತ್ರದಲ್ಲಿ ರಾಮ್ ಚೇತನ್ ಹಾಗು ಸಹನ ನಾಯಕ-ನಾಯಕಿ. ಉಳಿದಂತೆ ವೈಜನಾಥ್ ಬಿರಾದರ್ ಪ್ರಮುಖ ಪಾತ್ರ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gundlupete: ವಿದ್ಯುತ್ ಕಂಬಕ್ಕೆ ಗುದ್ದಿದ್ದ ಕಾರು: ಸ್ಥಳದಲ್ಲೇ ಇಬ್ಬರು ಸಾವು
Lucknow; ಯುವಕನಿಂದ ತಾಯಿ ಮತ್ತು ನಾಲ್ವರು ಸಹೋದರಿಯರ ಬರ್ಬರ ಹ*ತ್ಯೆ!
Aranthodu;ಅರಣ್ಯದಲ್ಲಿ ಹೊಸ ವರ್ಷ ಪಾರ್ಟಿ: 40 ಮಂದಿ ಅರಣ್ಯ ಇಲಾಖೆಯ ವಶಕ್ಕೆ!
BJP ತಪ್ಪುಗಳನ್ನು ಆರ್‌ಎಸ್‌ಎಸ್ ಬೆಂಬಲಿಸುತ್ತದೆಯೇ? ಭಾಗವತ್ ರನ್ನು ಪ್ರಶ್ನಿಸಿದ ಕೇಜ್ರಿವಾಲ್
2025ಕ್ಕೆ 25 ಆಪ್ತ ಸಲಹೆಗಳು: ಸಣ್ಣ ಪುಟ್ಟ ಸಂಗತಿಗಳನ್ನು ಆಸ್ವಾದಿಸೋಣ…
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.