ಸಂಕ್ರಾಂತಿಗೆ “ಕೋಟಿಗೊಬ್ಬ 3′ ಮೋಶನ್ ಪೋಸ್ಟರ್
ಕಿಚ್ಚನ ನ್ಯೂ ಲುಕ್ ಎಂಟ್ರಿಗೆ ದಿನಗಣನೆ
Team Udayavani, Jan 11, 2020, 7:04 AM IST
ಕಿಚ್ಚ ಸುದೀಪ್ ಅಭಿನಯದ “ದಬಾಂಗ್-3′ ಚಿತ್ರದ ಸದ್ದು ಸ್ವಲ್ಪ ಕಡಿಮೆಯಾಗುತ್ತಿದ್ದಂತೆ, ಸುದೀಪ್ ಅಭಿನಯದ ಮುಂಬರುವ ಚಿತ್ರಗಳತ್ತ ಅಭಿಮಾನಿಗಳ ಚಿತ್ತ ನೆಟ್ಟಿದೆ. ಸದ್ಯ ಸುದೀಪ್ ಅಭಿನಯದ “ಕೋಟಿಗೊಬ್ಬ-3′ ಚಿತ್ರದ ಪೋಸ್ಟ್ ಪ್ರೊಡಕ್ಷನ್‌ನ ಕೆಲಸಗಳು ಅಂತಿಮ ಹಂತದಲ್ಲಿದ್ದು, ಇದರ ನಡುವೆಯೇ ಚಿತ್ರತಂಡ “ಕೋಟಿಗೊಬ್ಬ-3′ ಮೋಶನ್ ಪೋಸ್ಟರ್ ಬಿಡುಗಡೆಗೆ ತಯಾರಿ ಮಾಡಿಕೊಳ್ಳುತ್ತಿದೆ.
ಹೌದು, ಜನವರಿ 14ರ ಸಂಜೆ 6 ಗಂಟೆಗೆ “ಕೋಟಿಗೊಬ್ಬ-3′ ಚಿತ್ರದ ಮೋಶನ್ ಪೋಸ್ಟರ್ ರಿಲೀಸ್ ಆಗಲಿದೆ. ಈ ಮೂಲಕ ಸಂಕ್ರಾಂತಿ ಹಬ್ಬದ ಸಂಭ್ರಮದಲ್ಲಿರುವ ತಮ್ಮ ಅಭಿಮಾನಿಗಳ ಮುಂದೆ ಸುದೀಪ್ “ಕೋಟಿಗೊಬ್ಬ-3′ ಮೋಶನ್ ಪೋಸ್ಟರ್‌ನ ವಿಶೇಷ ಗೆಟಪ್‌ನಲ್ಲಿ ದರ್ಶನ ಕೊಡಲಿದ್ದಾರೆ. ಸೂರಪ್ಪ ಬಾಬು ನಿರ್ಮಾಣದಲ್ಲಿ ಮೂಡಿಬರುತ್ತಿರುವ “ಕೋಟಿಗೊಬ್ಬ-3′ ಚಿತ್ರಕ್ಕೆ ಶಿವ ಕಾರ್ತಿಕ್ ನಿರ್ದೇಶನ ಮಾಡಿದ್ದಾರೆ.
14th Jan ….6pm….#K3MotionPoster pic.twitter.com/ZnVQkqQ8Q1
— Kichcha Sudeepa (@KicchaSudeep) January 10, 2020
ಚಿತ್ರದ ಹಾಡುಗಳಿಗೆ ಅರ್ಜುನ್ ಜನ್ಯಾ ಅವರ ಸಂಗೀತ ಸಂಯೋಜನೆಯಿದೆ. ಒಟ್ಟಾರೆ ಸಂಕ್ರಾಂತಿಯ ಸಂದರ್ಭದಲ್ಲಿ ಮೋಶನ್ ಪೋಸ್ಟರ್ ಬಿಡುಗಡೆಯ ಮೂಲಕ “ಕೋಟಿಗೊಬ್ಬ-3′ ಚಿತ್ರದ ಪ್ರಮೋಶನ್ ಕೆಲಸಗಳಿಗೆ ಚಾಲನೆ ನೀಡಲು ಚಿತ್ರತಂಡ ಪ್ಲಾನ್ ಹಾಕಿಕೊಂಡಿದ್ದು, ಮಾರ್ಚ್ ಅಥವಾ ಏಪ್ರಿಲ್ ವೇಳೆಗೆ “ಕೋಟಿಗೊಬ್ಬ-3′ ತೆರೆಗೆ ಬರುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Rain Alert: ರಾಜ್ಯದಲ್ಲಿ ಕನಿಷ್ಠ ತಾಪಮಾನ 4 ಡಿ.ಸೆ ಏರಿಕೆ; ಹಲವೆಡೆ 24ರಂದು ಮಳೆ ಸಾಧ್ಯತೆ
Karnataka; ರಾಜ್ಯದ ಕಾಡಿಗೆ ಕೊಡಲಿ! ಮಾನವ-ವನ್ಯಜೀವಿ ಸಂಘರ್ಷ ಹೆಚ್ಚಳ?
Puri; ವರ್ಷಾರಂಭದೊಂದಿಗೆ ಜಗನ್ನಾಥ ದೇಗುಲದಲ್ಲಿ ಹೊಸ ದರ್ಶನ ವ್ಯವಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.