“ಕೋಟಿಗೊಬ್ಬ 3” ಬಿಡುಗಡೆಯ ಹೊಸ ದಿನಾಂಕ ಘೋಷಿಸಿದ ಸುದೀಪ್
Team Udayavani, Oct 14, 2021, 3:58 PM IST
ಬೆಂಗಳೂರು: ಇಂದು ತೆರೆ ಕಾಣಬೇಕಾಗಿದ್ದ ಕೋಟಿಗೊಬ್ಬ 3 ಸಿನಿಮಾ ಕಾರಣಾಂತರಗಳಿಂದ ಪ್ರದರ್ಶನ ಕಾಣಲಿಲ್ಲ. ಇದೀಗ ಚಿತ್ರದ ನಾಯಕ ಸುದೀಪ್ ಅವರು ಹೊಸ ದಿನಾಂಕವನ್ನು ಘೋಷಣೆ ಮಾಡಿದ್ದಾರೆ.
ಲ್ಯಾಬ್, ವಿತರಕರು ಹಾಗೂ ನಿರ್ಮಾಪಕರ ನಡುವಿನ ಹಣಕಾಸಿನ ಸಮಸ್ಯೆಯಿಂದಾಗಿ ಸಿನಿಮಾ ಪ್ರದರ್ಶನ ಮಾಡಲು ಅಗತ್ಯವಿದ್ದ ಅನುಮತಿ ಸಿಕ್ಕಿಲ್ಲ. ಇದರಿಂದಾಗಿ ಚಿತ್ರತಂಡ ವಿತರಕರನ್ನು ಬದಲಾಯಿಸಿದೆ. ಜೊತೆಗೆ ನಾಳೆ (ಅಕ್ಟೋಬರ್ 15 ) ಬಿಡುಗಡೆಯಾಗುತ್ತಿದೆ.
ಸಿನಿಮಾ ಪ್ರದರ್ಶನ ಅಚಾನಕ್ಕಾಗಿ ರದ್ದಾದ ಕಾರಣದಿಂದ ಚಿತ್ರಮಂದಿರದವರು ಹಾಗೂ ಸಿನಿಪ್ರಿಯರು ಬೇಸರಗೊಂಡಿದ್ದಾರೆ. ಅದಕ್ಕಾಗಿಯೇ ಕಿಚ್ಚ ಸುದೀಪ್ ಅವರು ಚಿತ್ರತಂಡದ ಪರವಾಗಿ ಅಭಿಮಾನಿಗಳಲ್ಲಿ ಕ್ಷಮೆ ಯಾಚಿಸಿದ್ದಾರೆ.
ಸಿನಿಮಾ ರಿಲೀಸ್ ಮಾಡಲು ನಾನು ಕಾತರನಾಗಿದ್ದೇನೆ. ಆದರೆ, ಈಗ ಆಗಿರುವ ಸಮಸ್ಯೆಯಿಂದಾಗಿ ಚಿತ್ರದ ಪ್ರದರ್ಶನ ರದ್ದಾಗಿದೆ. ಅದಕ್ಕೆ ವಿಷಾದಿಸುತ್ತೇನೆ. ಇನ್ನು ಮುಂದಿನ ರಿಲೀಸ್ ದಿನಾಂಕ ಪ್ರಕಟವಾಗುವರೆಗೆ ತಾಳ್ಮೆ ಇರಲಿ ಎಂದು ಮನವಿ ಮಾಡಿದ್ದ ಕಿಚ್ಚ ಸುದೀಪ್ ಈಗ ಹೊಸ ದಿನಾಂಕದೊಂದಿಗೆ ಪೋಸ್ಟರ್ ರಿಲೀಸ್ ಮಾಡಿದ್ದಾರೆ.
Change in Distributors…
Welcome on board
BKT;MMCH;Chitradurga;Bellary- BK Gangadhar & Jack Manju.
Multiplexes of BKT -SyedSalaam#Kotigobba3inTheatersFromTomorrow https://t.co/rItjZqJIf6 https://t.co/biNQCdiCRt pic.twitter.com/D72J6frwOj— Kichcha Sudeepa (@KicchaSudeep) October 14, 2021
ಮೊದಲ ದಿನವೇ ಸುದೀಪ್ ಅಭಿನಯದ ಕೋಟಿಗೊಬ್ಬ 3 ಸಿನಿಮಾಗೆ ದೊಡ್ಡ ಸಮಸ್ಯೆ ಎದುರಾಗಿದೆ. ಸಿನಿಮಾದ ನಿರ್ಮಾಪಕರು, ವಿತರಕರು ಹಾಗೂ ಲ್ಯಾಬ್ ನಡುವಿನ ಹಣಕಾಸಿನ ಸಮಸ್ಯೆಯಿಂದಾಗಿ ರಾಜ್ಯದಾದ್ಯಂತ ಕೋಟಿಗೊಬ್ಬ 3 ಸಿನಿಮಾ ಪ್ರದರ್ಶನ ರದ್ದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.