ಧೂಳೆಬ್ಬಿಸಿದ “ಕೋಟಿಗೊಬ್ಬ 3” ಟ್ರೈಲರ್
Team Udayavani, Oct 7, 2021, 6:16 PM IST
ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಕೋಟಿಗೊಬ್ಬ 3 ಚಿತ್ರದ ಟ್ರೈಲರ್ ಇಂದು ಸಂಜೆ ಬಿಡುಗಡೆಯಾಗಿದ್ದು, ಅಭಿಮಾನಿಗಳಿಂದ ಭರ್ಜರಿ ಪ್ರತಿಕ್ರಿಯೆ ಪಡೆದುಕೊಂಡಿದೆ.
‘ಕೋಟಿಗೊಬ್ಬ 3’ ಟ್ರೇಲರ್ನಲ್ಲಿ ಆ್ಯಕ್ಷನ್, ಸ್ಟಂಟ್ಸ್ ಹಾಗೂ ಅದ್ದೂರಿತನ ಹೈಲೈಟ್ ಆಗಿದೆ. ಸಿನಿಮಾದ ಬಹುತೇಕ ಕಥೆ ವಿದೇಶದಲ್ಲಿ ನಡೆಯಲಿದೆ. ‘ಕೋಟಿಗೊಬ್ಬ 2’ ಸಿನಿಮಾದಲ್ಲಿ ಸುದೀಪ್ ಎರಡು ಶೇಡ್ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದರು. ಇದು ಸಿನಿಮಾದ ಹೈಲೈಟ್ ಕೂಡ ಆಗಿತ್ತು. ‘ಕೋಟಿಗೊಬ್ಬ 3’ ಸಿನಿಮಾದಲ್ಲೂ ಇದು ಮುಂದುವರಿದಿರುವುದು ಟ್ರೈಲರ್ ನಲ್ಲಿ ತಿಳಿದು ಬಂದಿದೆ.
ಇನ್ನು ಕೋಟಿಗೊಬ್ಬ 3’ ಸಿನಿಮಾದಲ್ಲಿ ಆಶಿಕಾ ರಂಗನಾಥ್ ವಿಶೇಷ ಹಾಡಿಗೆ ಡ್ಯಾನ್ಸ್ ಮಾಡಿದ್ದಾರೆ. ಅದರ ಒಂದು ತುಣುಕನ್ನು ಟ್ರೇಲರ್ನಲ್ಲಿ ತೋರಿಸಲಾಗಿದೆ. ಮಡೋನಾ ಸಬಾಸ್ಟಿಯನ್ ಸಖತ್ ಗ್ಲಾಮರ್ ಆಗಿ ಕಾಣಿಸಿಕೊಂಡಿದ್ದಾರೆ.
Really Happy to see all Star fans supporting and joining their Hands for #Kotigobba3Trailer
Sandalwood Industry going to peaks ?https://t.co/PQai1kHy0J— aanandaaudio (@aanandaaudio) October 7, 2021
ಇನ್ನು ಸುದೀಪ್ ಅಭಿನಯದ ‘ಕೋಟಿಗೊಬ್ಬ 3’ ಚಿತ್ರವನ್ನು ಸೂರಪ್ಪಬಾಬು ನಿರ್ಮಾಣ ಮಾಡಿದ್ದಾರೆ. ಶ್ರದ್ಧಾ ದಾಸ್, ರವಿಶಂಕರ್, ಅಭಿರಾಮಿ ಮುಂತಾದ ಕಲಾವಿದರು ‘ಕೋಟಿಗೊಬ್ಬ 3’ ಸಿನಿಮಾದಲ್ಲಿ ನಟಿಸಿದ್ದಾರೆ. ಶಿವಕಾರ್ತಿಕ್ ಈ ಚಿತ್ರದ ನಿರ್ದೇಶಕರು. ಇದೆ ಅಕ್ಟೋಬರ್ 14 ರಂದು ರಾಜ್ಯಾದ್ಯಂತ ಈ ಸಿನಿಮಾ ಬಿಡುಗಡೆಯಾಗುತ್ತಿದೆ. ಮತ್ತೊಂದು ಗಮನಾರ್ಹ ಅಂಶ ಏನೆಂದರೆ ಅದೇ ದಿನದಂದು ಕನ್ನಡದ ಮತ್ತೊಂದು ಸಿನಿಮಾ ಸಲಗ ಸಹ ರಿಲೀಸ್ ಆಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.