Krishnam Pranaya Sakhi ಮತ್ತೊಮ್ಮೆ ಗಣೇಶ್ ಕೃಷ್ಣಾವತಾರ
Team Udayavani, Dec 7, 2023, 11:59 AM IST
ನಟ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ಅಭಿನಯಿಸುತ್ತಿರುವ “ಕೃಷ್ಣಂ ಪ್ರಣಯ ಸಖೀ’ ಸಿನಿಮಾದ ಚಿತ್ರೀಕರಣ ಇತ್ತೀಚೆಗೆ ಮುಕ್ತಾಯವಾಗಿದೆ. ಬೆಂಗಳೂರು, ಇಟಲಿ, ಮಾಲ್ಟಾ ಮುಂತಾದ ಕಡೆಗಳಲ್ಲಿ “ಕೃಷ್ಣಂ ಪ್ರಣಯ ಸಖೀ’ ಸಿನಿಮಾದ ಬಹುತೇಕ ಚಿತ್ರೀಕರಣ ನಡೆಸಲಾಗಿದೆ.
ಸದ್ಯ “ಕೃಷ್ಣಂ ಪ್ರಣಯ ಸಖೀ’ ಸಿನಿಮಾದ ಚಿತ್ರೀಕರಣವನ್ನು ಯಶಸ್ವಿಯಾಗಿ ಮುಗಿಸಿರುವ ಚಿತ್ರತಂಡ, ಇದೀಗ ಸಿನಿಮಾದ ಪೋಸ್ಟ್ ಪ್ರೊಡಕ್ಷನ್ ಕೆಲಸಗಳಿಗೆ ಚಾಲನೆ ನೀಡಿದೆ. ಸದ್ಯ ಸಿನಿಮಾದ ಡಬ್ಬಿಂಗ್ ಕಾರ್ಯಗಳು ಭರದಿಂದ ನಡೆಯುತ್ತಿದ್ದು, ಹೊಸ ವರ್ಷದಲ್ಲಿ “ಕೃಷ್ಣಂ ಪ್ರಣಯ ಸಖೀ’ ಸಿನಿಮಾವನ್ನು ತೆರೆಗೆ ತರುವ ಯೋಚನೆಯಲ್ಲಿದೆ ಚಿತ್ರತಂಡ.
“ಕೃಷ್ಣಂ ಪ್ರಣಯ ಸಖೀ’ ನಟ ಗಣೇಶ್ ಅಭಿನಯದ 41 ನೇ ಸಿನಿಮಾವಾಗಿದ್ದು, ಸಿನಿಮಾದಲ್ಲಿ ಗಣೇಶ್ ಅವರಿಗೆ ನಾಯಕಿಯಾಗಿ ಮಾಳವಿಕಾ ನಾಯರ್ ನಟಿಸಿದ್ದಾರೆ. ಉಳಿದಂತೆ ಶರಣ್ಯಾ ಶೆಟ್ಟಿ, ಶ್ರೀನಿವಾಸಮೂರ್ತಿ, ಸಾಧುಕೋಕಿಲ, ರಂಗಾಯಣ ರಘು, ಶಶಿಕುಮಾರ್, ಶ್ರುತಿ, ಭಾವನಾ, ಅಶೋಕ್, ರಾಮಕೃಷ್ಣ, ಶಿವಧ್ವಜ್, ರಘುರಾಮ್, ಮಾನಸಿ ಸುಧೀರ್, ಅಂಬುಜಾ, ಗಿರಿ ಶಿವಣ್ಣ ಮುಂತಾದ ಕಲಾವಿದರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಕನ್ನಡದಲ್ಲಿ ಹಲವು ಯಶಸ್ವಿ ಚಿತ್ರಗಳನ್ನು ನಿರ್ದೇಶಿಸಿರುವ ಶ್ರೀನಿವಾಸರಾಜು “ಕೃಷ್ಣಂ ಪ್ರಣಯ ಸಖೀ’ ಸಿನಿಮಾಕ್ಕೆ ಆ್ಯಕ್ಷನ್-ಕಟ್ ಹೇಳಿದ್ದಾರೆ. ಸಿನಿಮಾದ ಐದು ಹಾಡುಗಳಿಗೆ ಅರ್ಜುನ್ ಜನ್ಯ ಸಂಗೀತ ಸಂಯೋಜಿಸಿದ್ದಾರೆ. ಸಿನಿಮಾಕ್ಕೆ ವೆಂಕಟ್ ಪ್ರಸಾದ್ ಛಾಯಾಗ್ರಹಣ ಹಾಗೂ ಕೆ. ಎಂ. ಪ್ರಕಾಶ್ ಸಂಕಲನವಿದೆ.
ಅಪ್ಪಟ ರೊಮ್ಯಾಂಟಿಕ್ ಲವ್‌ಸ್ಟೋರಿಯ “ಕೃಷ್ಣಂ ಪ್ರಣಯ ಸಖೀ’ ಸಿನಿಮಾವನ್ನು “ತ್ರಿಶೂಲ್ ಎಂಟರ್‌ಟೈನ್ಮೆಂಟ್’ ಬ್ಯಾನರ್‌ನಲ್ಲಿ ಪ್ರಶಾಂತ್ ಜಿ. ರುದ್ರಪ್ಪ ನಿರ್ಮಾಣ ಮಾಡುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಟಾಸ್ಕ್ ವಿಚಾರದಲ್ಲಿ ಫೈಯರ್ ಚೈತ್ರಾ ಠುಸ್.. ಮನೆಮಂದಿ ಸುಸ್ತು
BBK11: ಮತ್ತೆ ಬಿಗ್ ಬಾಸ್ ಮನೆಗೆ ಗೋಲ್ಡ್ ಸುರೇಶ್..? ವಿಡಿಯೋದಲ್ಲಿ ಸುಳಿವು
Sandalwood: ಕಣ್ಣಾ ಮುಚ್ಚೆ ಕಾಡೇ ಗೂಡೇ ತೆರೆಗೆ ಸಿದ್ಧ
Adhipatra Movie: ರೂಪೇಶ್ ಅಧಿಪತ್ರ ಫೆ.7ಕ್ಕೆ ಬಿಡುಗಡೆ
ShivaRajkumar: ಅಮೆರಿಕಾಕ್ಕೆ ತೆರಳುವ ಮುನ್ನ ಶಿವಣ್ಣನ ಮನೆಯಲ್ಲಿ ವಿಶೇಷ ಪೂಜೆ; ಕಿಚ್ಚ ಭಾಗಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.