ಅಣ್ಣ ಚಿರು ಅಭಿನಯದ `ಕ್ಷತ್ರಿಯ’ನಿಗೆ ತಮ್ಮ ಧೃವ ಸರ್ಜಾ ಚಾಲನೆ
Team Udayavani, May 29, 2019, 3:18 PM IST
ಚಿರಂಜೀವಿ ಸರ್ಜಾ ನಟನೆಯಲ್ಲಿ ಮೂಡಿಬರುತ್ತಿರುವ `ಕ್ಷತ್ರಿಯ’ ಚಿತ್ರದ ಮುಹೂರ್ತ ಸಮಾರಂಭ ಮಲ್ಲೇಶ್ವರದ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ಅಣ್ಣ ಚಿರಂಜೀವಿ ಸರ್ಜಾ ನಾಯಕನಾಗಿ ಅಭಿನಯಿಸುತ್ತಿರುವ ಈ ಚಿತ್ರದ ಮೊದಲ ದೃಶ್ಯಕ್ಕೆ ಸಹೋದರ ಧುವ ಸರ್ಜಾ ಕ್ಲಾಪ್ ಮಾಡಿದರರೆ, ನಿರ್ದೇಶಕ ಸಂತೋಷ್ ಆನಂದರಾಮ್ ಕ್ಯಾಮರಾ ಚಾಲನೆ ಮಾಡಿದರು. ಸಮಾಜದ ಒಳಿತಿಗಾಗಿ ಹೋರಾಡುವ ಒಬ್ಬ ಆಧುನಿಕ ಕ್ಷತ್ರಿಯನ ಪಾತ್ರದಲ್ಲಿ ಚಿರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.
“ನಿರ್ದೇಶಕ ಅನಿಲ್ ಮಂಡ್ಯ ಒಂದು ಲೈನ್ ಹೇಳುತ್ತಿದ್ದಂತೇ ತಕ್ಷಣ ಅವರನ್ನು ಕರೆಸಿಕೊಂಡು ಪೂರ್ತಿ ಕತೆ ಕೇಳಿದೆ. ಅದ್ಭುತವಾದ ಕಥೆ ಇರುವ ಕಾರಣಕ್ಕೆ ತಕ್ಷಣ ಈ ಸಿನಿಮಾದಲ್ಲಿ ನಟಿಸಲೇ ಬೇಕು ಎಂದು ಒಪ್ಪಿಕೊಂಡೆ. ಈ ಸಿನಿಮಾಗಾಗಿ ಅನಿಲ್ ಮಾಡಿಕೊಂಡಿರುವ ತಯ್ಯಾರಿ ಕೂಡಾ ಅಷ್ಟೇ ಅಚ್ಚುಕಟ್ಟಾಗಿದೆ. ಈಗಾಗಲೇ ಹಲವಾರು ನಿರ್ದೇಶಕರ ಬಳಿ ಕೆಲಸ ಮಾಡಿ ಅನುಭವ ಪಡೆದಿರುವ ಅನಿಲ್ ಚಿತ್ರಕತೆಯನ್ನು ಕೂಡಾ ತೀರಾ ವಿಶೇಷವೆನ್ನುವಂತೆ ಮಾಡಿಕೊಂಡಿದ್ದಾರೆ. ಈ ಸಿನಿಮಾಗೆ ಭರ್ಜರಿ ಚೇತನ್ ಅವರು ಸಂಭಾಷಣೆ ರಚಿಸುತ್ತಿದ್ದಾರೆ. ನಾನು ಈಗಾಗಲೇ ಹಲವಾರು ಸಿನಿಮಾಗಳಲ್ಲಿ ನಟಿಸುತ್ತಿದ್ದರೂ ಕ್ಷತ್ರಿಯ ಸಿನಿಮಾ ಬೇರೆಯದ್ದೇ ರೀತಿಯಲ್ಲಿ ಬೂಡಿಬರಲಿದೆ ಎನ್ನುವ ವಿಶ್ವಾಸ ನನಗಿದೆ. ಮತ್ತೊಂದು ವಿಶೇಷವೆಂದರೆ ಈ ನಿರ್ಮಾಪಕರು ನನಗೆ ಬಹಳ ಆತ್ಮೀಯವಾಗಿರುವವರು. ಈಗಾಗಲೇ ಇದೇ ಬ್ಯಾನರಿನಲ್ಲಿ ನಾನು ಸಂಹಾರ ಸಿನಿಮಾದಲ್ಲಿ ಅಭಿನಯಿಸಿದ್ದೇನೆ. ನನಗೆ ಇದು ಒಂಥರಾ ಹೋಂ ಬ್ಯಾನರ್ ಇದ್ದಂತೆ. ಅಕ್ಕ ತಮ್ಮನ ನಡುವಿನ ಬಾಂಧವ್ಯದ ಕತೆ ಕೂಡಾ ಇದರಲ್ಲಿ ಸಮ್ಮಿಳಿತಗೊಂಡಿದೆ. ಪ್ರತಿಯೊಬ್ಬರ ಮನೆಯಲ್ಲಿ ನಡೆಯುವ ಕಥಾವಸ್ತು ಈ ಚಿತ್ರದಲ್ಲಿರುವುದರಿಂದ ಪ್ರೇಕ್ಷಕರು ಕೂಡಾ ಇಲ್ಲಿನ ಪಾತ್ರಗಳೊಂದಿಗೆ ಕನೆಕ್ಟ್ ಆಗಿಬಿಡುತ್ತಾರೆ. ತೀರಾ ಜವಾಬ್ದಾರಿಯುತ ಅಕ್ಕನಿಗೆ ಒಬ್ಬ ತರ್ಲೆ ತಮ್ಮ ಇದ್ದರೆ ಹೇಗಿರುತ್ತದೆ, ನಂತರ ಆತ ಸಮಾಜದ ಒಳಿತಿಗಾಗಿ ಶ್ರಮಿಸುವಂತವನಾದರೆ ಹೇಗಿರುತ್ತದೆ ಅನ್ನೋದರ ಎಳೆ ಈ ಸಿನಿಮಾದಲ್ಲಿದೆ” ಎಂದು ನಾಯಕನಟ ಚಿರಂಜೀವಿ ಸರ್ಜಾ ಹೇಳಿದರು.
ಕನ್ನಡ ಚಿತ್ರರಂಗದ ಸಾಕಷ್ಟು ಸ್ಟಾರ್ ಡೈರೆಕ್ಟರುಗಳ ಜೊತೆಗೆ ಸಹಾಯಕ ಹಾಗೂ ಸಹ ನಿರ್ದೇಶಕರಾಗಿ ಕೆಲಸ ಮಾಡಿರುವ ಅನಿಲ್ ಮಂಡ್ಯ ಕ್ಷತ್ರಿಯ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಪಿ.ವಾಸು, ದಿನಕರ್ ತೂಗುದೀಪ, ತರುಣ್ ಸುಧೀರ್, ಮುಂಗಾರುಮಳೆ ಕೃಷ್ಣ ಮತ್ತು ಸಂತೋಷ್ ಅನಂದರಾಮ್ ಅವರ ಮಿಸ್ಟರ್ ಅಂಡ್ ಮಿಸಸ್ ರಾಮಾಚಾರಿ ಮತ್ತು ರಾಜಕುಮಾರ ಸಿನಿಮಾಗಳಿಗೆ ಕೋ ಡೈರೆಕ್ಟರ್ ಆಗಿದ್ದ ಅನಿಲ್ ಮಂಡ್ಯ ಕಳೆದ ಎರಡು ದಶಕಗಳಲ್ಲಿ ಸಾಕಷ್ಟು ಸ್ಟಾರ್ ನಟರ ಸಿನಿಮಾಗಳಲ್ಲಿ ಕೆಲಸ ಮಾಡಿ ಅನುಭವ ಹೊಂದಿರುವರು. ಈಗ ಚಿರು ಹೀರೋ ಆಗಿರುವ ಕ್ಷತ್ರಿಯ ಮೂಲಕ ಸ್ವತಂತ್ರ ನಿದರ್ೇಶಕರಾಗಿ ಬಡ್ತಿ ಪಡೆಯುತ್ತಿದ್ದಾರೆ. “ನಾಯಕನಟನನ್ನು ಕೇಂದ್ರೀಕರಿಸಿಕೊಂಡು ಬರೆದಿರುವ ಈ ಕಥೆಯ ಮೊದಲಾರ್ಧದಲ್ಲಿ ಸೆಂಟಿಮೆಂಟ್ ಕಥಾವಸ್ತುವಿದ್ದರೆ, ದ್ವಿತೀಯಾರ್ಧದಲ್ಲಿ ಪಕ್ಕಾ ಕಮರ್ಷಿಯಲ್ ಅಂಶಗಳಿಂದ ಒಳಗೊಂಡಿದೆ. ಬೆಂಗಳೂರು, ಮೈಸೂರು, ಬಾಂಬೆ ಸೇರಿದಂತೆ ಹಲವು ಲೊಕೇಶನ್ನುಗಳಲ್ಲಿ ಸರರಿಸುಮಾರು ಐವತ್ತೈದು ದಿನಗಳ ಶೂಟಿಂಗ್ ಪ್ಲಾನ್ ಹಾಕಿಕೊಂಡಿದ್ದೇವೆ. ನಾಯಕಿಯ ಪಾತ್ರಕ್ಕಾಗಿ ಮಾತುಕತೆ ನಡೆಯುತ್ತಿದ್ದು ಇನ್ನೂ ಅಂತಿಮವಾಗಿಲ್ಲ. ದೇವರಾಜ್, ಸುಧಾರಾಣಿ, ಸಾಧುಕೋಕಿಲಾ ಸೇರಿದಂತೆ ಹಲವಾರು ನಟರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ. ಇದಲ್ಲದೇ ಈವರೆಗೂ ಕನ್ನಡಕ್ಕೆ ಬಂದಿರದ ಬಾಂಬೆಯ ಹೆಸರಾಂತ ವಿಲನ್ ಒಬ್ಬರು ಕೂಡಾ `ಕ್ಷತ್ರಿಯ’ ಮೂಲಕ ಕನ್ನಡಕ್ಕೆ ಎಂಟ್ರಿ ಕೊಡಲಿದ್ದಾರೆ. ನನ್ನ ಹೆಸರಲ್ಲೇ ಮಂಡ್ಯದ ಹೆಸರಿದೆ. ಇಂದು ಮಂಡ್ಯದ ಗಂಡು ರೆಬೆಲ್ ಸ್ಟಾರ್ ಅಂಬರೀಶ್ ಅವರ ಹುಟ್ಟುಹಬ್ಬದ ದಿನದಂದೇ ನನ್ನ ನಿರ್ದೇಶನದ ಮೊದಲ ಚಿತ್ರ ಮುಹೂರ್ತ ಆಚರಿಸಿಕೊಂಡಿರುವುದು ನನ್ನ ಪಾಲಿನ ಅದೃಷ್ಟ ಎಂದೇ ಭಾವಿಸಿದ್ದೇನೆ” ಎಂದು ನಿದರ್ೇಶಕ ಅನಿಲ್ ಮಂಡ್ಯ ತಿಳಿಸಿದರು.
“ಅನಿಲ್ ಸಿದ್ಧಪಡಿಸಿಕೊಂಡಿದ್ದ ಸಬ್ಜೆಕ್ಟಿಗೆ ಹೊಂದುವ ಶೀರ್ಷಿಕೆಗಾಗಿ ಸಾಕಷ್ಟು ಹುಡುಕಾಟ ನಡೆಸಲಾಗಿತ್ತು. ಕ್ಷತ್ರಿಯ ಎನ್ನುವ ಟೈಟಲ್ ಚಿತ್ರಕ್ಕೆ ಹೇಳಿಮಾಡಿಸಿದಂತಿದ್ದರೂ ಅದು ಮತ್ತೊಬ್ಬ ನಿರ್ಮಾಪಕ ಕೆ.ಪಿ. ಶ್ರೀಕಾಂತ್ ಅವರ ಬಳಿ ಇತ್ತು. ನಿರ್ಮಾಪಕ ಜಯಣ್ಣ ಅನಿಲ್ ಅವರಿಗೆ ಆತ್ಮೀಯರಾಗಿದ್ದು ಕ್ಷತ್ರಿಯ ಟೈಟಲ್ ಬೇಕು ಎಂದು ವಿನಂತಿಸಿದ್ದರು. ಜಯಣ್ಣ ಒಂದು ಮಾತು ಕೇಳುತ್ತಿದ್ದಂತೇ ಕೆ.ಪಿ. ಶ್ರೀಕಾಂತ್ ಪ್ರೀತಿಯಿಂದಲೇ ಶೀರ್ಷಿಕೆ ನೀಡಿದ್ದಾರೆ. ನಮಗಾಗಿ ತಮ್ಮ ಬ್ಯಾನರಿನಲ್ಲಿದ್ದ ಶೀರ್ಷಿಕೆಯನ್ನು ಬಿಟ್ಟುಕೊಟ್ಟಿರುವ ಶ್ರೀಕಾಂತ್ ಅವರ ಸಿನಿಮಾ ಪ್ರೀತಿ ಮತ್ತು ಜಯಣ್ಣ ಅವರ ಮಾತಿನ ಮೇಲೆ ಅವರಿಟ್ಟಿರುವ ಗೌರವ ನಿಜಕ್ಕೂ ದೊಡ್ಡದು.” ಎನ್ನುವುದು ನಿಮರ್ಾಪಕ ಎ.ವೆಂಕಟೇಶ್ ಅವರ ಮಾತಾಗಿತ್ತು.
ಅಂದಹಾಗೆ ಕ್ಷತ್ರಿಯ ಸಿನಿಮಾವನ್ನು ಈ ಹಿಂದೆ ಇದೇ ಚಿರು ನಟನೆಯ ಸಂಹಾರ ಚಿತ್ರವನ್ನು ನಿಮರ್ಿಸಿದ್ದ ವೈಷ್ಣವಿ ಮನು ಕ್ರಿಯೇಷನ್ಸ್ ಬ್ಯಾನರ್ ಅಡಿಯಲ್ಲಿ ಎ.ವೆಂಕಟೇಶ್, ಕಿಶೋರ್ ಮಂಗಳವಾರಪೇಟೆ, ಎಂ.ವಿ.ಮನೀಶ್ ಮತ್ತು ಎಂ.ಜೆ. ವಿಷ್ಣುವರ್ಧನ್ ಸೇರಿ ನಿರ್ಮಿಸುತ್ತಿದ್ದಾರೆ. ಧರ್ಮವಿಶ್ ಸಂಗೀತಲ್ಲಿ ಐದು ಹಾಡುಗಳು ಮೂಡಿಬರುತ್ತಿದ್ದು ಯೋಗರಾಜ್ ಭಟ್, ಡಾ. ವಿ ನಾಗೇಂದ್ರ ಪ್ರಸಾದ್ ಮುಂತಾದವರು ಸಾಹಿತ್ಯ ರಚಿಸುತ್ತಿದ್ದಾರೆ. ಡಾ. ಕೆ. ರವಿವರ್ಮ ಸಾಹಸವಿರುವ ಈ ಚಿತ್ರಕ್ಕೆ ಬಹದ್ದೂರ್ ಚೇತನ್ ಕುಮಾರ್ ಸಂಭಾಷಣೆ ರಚಿಸುತ್ತಿದ್ದಾರೆ. ರವಿ.ವಿ ಅವರ ಛಾಯಾಗ್ರಹಣ, ಕೆ.ಎಂ. ಪ್ರಕಾಶ್ ಸಂಕಲನ ಈ ಚಿತ್ರಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.