Kannada Cinema: ಕ್ಲೈಮ್ಯಾಕ್ಸ್ ನತ್ತ ʼಕುಲದಲ್ಲಿ ಕೀಳ್ಯಾವುದೋʼ
Team Udayavani, Nov 28, 2024, 4:18 PM IST
“ಕುಲದಲ್ಲಿ ಕೀಳ್ಯಾವುದೋ’ ಹೀಗೊಂದು ಸಿನಿಮಾ ಬಗ್ಗೆ ನೀವು ಕೇಳಿರಬಹುದು. ಯೋಗರಾಜ್ ಸಿನಿಮಾಸ್ ಹಾಗೂ ಪರ್ಲ್ ಸಿನಿ ಕ್ರಿಯೆಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ.ಕೆ. ಹಾಗೂ ವಿದ್ಯಾ ಅವರು ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.
ಕೆ. ರಾಮ್‌ನಾರಾಯಣ ಈ ಚಿತ್ರದ ನಿರ್ದೇಶಕರು. ಸದ್ಯ ಈ ಚಿತ್ರದ ಕ್ಲೈಮ್ಯಾಕ್ಸ್ ಭಾಗದ ಸಾಹಸ ಸನ್ನಿವೇಶಗಳ ಚಿತ್ರೀಕರಣ ರಾಮನಗರ ಸಮೀಪದಲ್ಲಿ ಪೂರ್ಣಗೊಂಡಿದೆ. ಈ ಸಂದರ್ಭದಲ್ಲಿ ಚಿತ್ರದ ಬಗ್ಗೆ ಮಾಹಿತಿ ಹಂಚಿಕೊಳ್ಳಲು ಚಿತ್ರತಂಡ ಮಾಧ್ಯಮದೆದುರು ಬಂದಿತ್ತು.
ಚಿತ್ರದ ನಿರ್ದೇಶಕ ರಾಮನಾರಾಯಣ್ ಮಾತನಾಡುತ್ತ, “ಹೆಸರೇ ಹೇಳುವಂತೆ, ಇದು ವಿಭಿನ್ನ ಕಥಾಹಂದರದ ಸಿನಿಮಾ. ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದೆ. ಎರಡು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ’ ಎಂದು ಮಾಹಿತಿ ನೀಡಿದರು.
“ಯೋಗರಾಜ್ ಭಟ್ ಚಿತ್ರಕ್ಕೆ ಬೆನ್ನೆಲು ಬಾಗಿ ನಿಂತಿದ್ದಾರೆ. ಎಲ್ಲ ಕಲಾವಿದರ ಅಭಿನಯ ಚೆನ್ನಾಗಿ ಮೂಡಿ ಬಂದಿದೆ. ಎಲ್ಲವೂ ಅಂದುಕೊಂಡಂತೆ ಆದರೆ, ಫೆಬ್ರವರಿಯಲ್ಲಿ ಚಿತ್ರ ತೆರೆಗೆ ಬರಲಿದೆ’ ಎಂದರು ನಿರ್ಮಾಪಕ ಸಂತೋಷ್ ಕುಮಾರ್.
ನಟ ಮಡೆನೂರ್ ಮನು ಹಾಗೂ ನಟಿ ಮೌನ ಗುಡ್ಡೆಮನೆ ಈ ಚಿತ್ರದ ನಾಯಕ, ನಾಯಕಿಯಾಗಿದ್ದಾರೆ. ಮೌನಗೆ ಬೆಳ್ಳಿ ತೆರೆಯಲ್ಲಿ ಇದು ಚೊಚ್ಚಲ ಚಿತ್ರ. ಉಳಿದಂತೆ ಶರತ್ ಲೋಹಿತಾಶ್ವ, ಹರೀಶ್ ರಾಜ್, ತಬಲಾ ನಾಣಿ, ಕರಿಸುಬ್ಬು ಮುಂತಾದವರಿದ್ದಾರೆ. ನಟಿ ಸೋನಲ್ ಮೊಂತೆರೋ ವಿಶೇಷ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
KTR ಫಾರ್ಮುಲಾ ರೇಸ್ ಕೇಸ್ ರದ್ದು: ತೀರ್ಪು ಕಾಯ್ದಿರಿಸಿದ ಹೈಕೋರ್ಟ್
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.