ನೈಜ ಘಟನೆ ಸುತ್ತ ‘ಕುಂತಿ ಪುತ್ರ’
Team Udayavani, Sep 17, 2021, 4:58 PM IST
“ಕುಂತಿ ಪುತ್ರ’- ಇದು ಹೊಸಬರ ಸಿನಿಮಾ ವೊಂದರ ಟೈಟಲ್. ಸದ್ದಿಲ್ಲದೇ ಚಿತ್ರೀಕರಣ ಮುಗಿಸಿರುವ ಈ ಹೊಸಬರ ತಂಡ ಈಗ ಬಿಡುಗಡೆಯ ಹಂತಕ್ಕೆ ಬಂದಿದೆ. ರಾಜು ಬೋನಗಾನಿ ಈ ಚಿತ್ರದ ನಿರ್ದೇಶಕರು.
ಶಶಾಂಕೌ ಗೌಡ ಅವರ ನಿರ್ಮಾಣದಲ್ಲಿ “ಕುಂತಿ ಪುತ್ರ’ ತಯಾರಾಗಿದೆ. ಚಿತ್ರದಲ್ಲಿ ಗೋಪಿಕೃಷ್ಣ ನಾಯಕ. ಇವರಿಗೆ ಪ್ರಿಯಾಂಕ ಚೌಧರಿ ನಾಯಕಿ. ಇದು1990ರಲ್ಲಿ ನಡೆದ ನೈಜ ಘಟನೆ ಯೊಂದನ್ನು ಆಧರಿಸಿ ತಯಾರಾದ ಚಿತ್ರ ಎಂಬುದು ಚಿತ್ರತಂಡದ ಮಾತು.
ಚಿತ್ರದ ಬಗ್ಗೆ ಮಾತನಾಡುವ ಚಿತ್ರತಂಡ, “ನೇರ ನುಡಿಯ ನಾಯಕ, ಅನ್ಯಾಯವನ್ನು ಖಂಡಿಸುತ್ತಾ ಬರುತ್ತಾನೆ. ಆದರೆ, ಘಟನೆಯೊಂದರಲ್ಲಿ ಹಳ್ಳಿ ಜನ ಆತನನ್ನು ತಪ್ಪು ತಿಳಿದುಕೊಳ್ಳುತ್ತಾರೆ. ಇದು ಮುಂದೆ ದೊಡ್ಡ ಅವಾಂತರಕ್ಕೆ ಕಾರಣವಾಗುತ್ತದೆ. ಮುಂದೆ ಇದರಿಂದ ಏನೇನಾಗುತ್ತದೆ ಎಂಬುದು ಚಿತ್ರದ ಕಥೆ’ ಎಂಬುದು ಚಿತ್ರತಂಡದ ಮಾತು.
ಚಿತ್ರದ ನಿರ್ಮಾಪಕ, ನಿರ್ದೇಶಕ ಚಿತ್ರೀಕರಣದ ಅನುಭವವನ್ನು ಹಂಚಿಕೊಂಡರು. ನಾಯಕ ಗೋಪಿಕೃಷ್ಣ ಹೇಳುವಂತೆ, “ಇದು ಪಕ್ಕಾ ಕಮರ್ಷಿಯಲ್ ಸಿನಿಮಾವಾಗಿದ್ದು, ಇಂದಿನ ಟ್ರೆಂಡ್ ಗೆ ಬೇಕಾದ ಎಲ್ಲಾ ಅಂಶಗಳು ಈ ಚಿತ್ರದಲ್ಲಿವೆ. ಹಾಗಾಗಿ, ಪ್ರೇಕ್ಷಕರಿಗೆ ಇಷ್ಟವಾಗುತ್ತದೆ’ ಎಂಬುದು ಅವರ ಮಾತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
GST: ಪರೀಕ್ಷಾ ಫಾರಂ ಮೇಲೆ ಜಿಎಸ್‌ಟಿ: ಸರಕಾರ ವಿರುದ್ಧ ಪ್ರಿಯಾಂಕಾ ವಾಗ್ಧಾಳಿ
JPC: ಒಂದು ರಾಷ್ಟ್ರ ಒಂದು ಚುನಾವಣೆ: ಜ.8ಕ್ಕೆ ಮೊದಲ ಜೆಪಿಸಿ ಸಭೆ
Udupi; ಗೀತಾರ್ಥ ಚಿಂತನೆ 134: ಮನುಷ್ಯ ದೇಹದೊಳಗೆ ಯಾವ ಜೀವವೂ ಇರಬಹುದು
Nitish Kumar ನೇತೃತ್ವದಲ್ಲೇ ಬಿಹಾರ ಚುನಾವಣೆಗೆ ಎನ್‌ಡಿಎ ಸ್ಪರ್ಧೆ: ಬಿಜೆಪಿ
Hindu Temple: ಸಂಭಲ್ ಬಳಿಕ ಬುಲಂದ್‌ಶಹರ್‌ನಲ್ಲಿ ಮತ್ತೊಂದು ಹಳೇ ದೇವಾಲಯ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.