![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Nov 30, 2021, 12:03 PM IST
ಶರಣ್ ಅಭಿನಯದ “ಅವತಾರ್ ಪುರುಷ’ ಚಿತ್ರ ತೆರೆಗೆ ಬರೋದಕ್ಕೆ ಕೌಂಡ್‌ಡೌನ್ ಶುರುವಾಗಿದೆ. ಚಿತ್ರ ಇದೇ ಡಿ. 10ಕ್ಕೆ ಬಿಡುಗಡೆಯಾಗುತ್ತಿದ್ದು, ಸದ್ಯ ಭರದಿಂದ ಪ್ರಚಾರ ಕಾರ್ಯಗಳಲ್ಲಿ ನಿರತವಾಗಿರುವ ಚಿತ್ರತಂಡ, “ಅವತಾರ್ ಪುರುಷ’ನನ್ನು ಪ್ರೇಕ್ಷಕರಿಗೆ ತಲುಪಿಸುವ ಅಂತಿಮ ಹಂತದ ಕಸರತ್ತಿನಲ್ಲಿ ಬಿಝಿಯಾಗಿದೆ.
ಚಿತ್ರದ ಪ್ರಚಾರ ಭಾಗವಾಗಿ ಇದೀಗ, “ಅವತಾರ್ ಪುರುಷ’ನ ಮತ್ತೂಂದು ಹಾಡು ಬಿಡುಗಡೆಯಾಗಿದ್ದು, ಈ ಹಾಡು ಇದೀಗ ಸೋಶಿಯಲ್ ಮೀಡಿಯಾದಲ್ಲಿ ಸಿನಿಮಂದಿಯ ಗಮನ ಸೆಳೆಯುತ್ತಿದೆ.
“ಲಡ್ಡು ಬಂದು ಬಾಯಿಗೆ ಬಿತ್ತಾ …’ ಎಂಬ ಸಾಲಿನಿಂದ ಶುರುವಾಗುವ “ಅವತಾರ್ ಪುರುಷ’ ಚಿತ್ರದ ಈ ಹಾಡಿನಲ್ಲಿ, ಭಾರತದ ಜನಪ್ರಿಯ ಉತ್ಪನ್ನಗಳ ಜಾಹೀರಾತುಗಳ ಸಾಲುಗಳನ್ನು ಬಳಸಿಕೊಂಡು ನಿರ್ಮಿಸಲಾಗಿದೆ. ಸಿಂಪಲ್ ಸುನಿ ಸಾಹಿತ್ಯವಿರುವ ಈ ಹಾಡಿಗೆ ನಿಹಾಲ್ ಥರೋ ಧ್ವನಿಯಾಗಿದ್ದು, ಅರ್ಜುನ್ ಜನ್ಯಾ ಸಂಗೀತ ಸಂಯೋಜಿಸಿದ್ದಾರೆ.
ಇದನ್ನೂ ಓದಿ:ರೂಪಾಂತರಿ ವೈರಸ್ ಗೆ ಆಹ್ವಾನ! ದಕ್ಷಿಣ ಆಫ್ರಿಕಾದಿಂದ 1 ಸಾವಿರ ಪ್ರಯಾಣಿಕರು ಮುಂಬಯಿಗೆ ಆಗಮನ?
ಹಾಡಿನಲ್ಲಿ ಶರಣ್ ಮತ್ತು ಆಶಿಕಾ ರಂಗನಾಥ್ ಜೋಡಿಯಾಗಿ ಕಾಣಿಸಿಕೊಂಡಿದ್ದು, ಭೂಷಣ್ ನೃತ್ಯ ಸಂಯೋಜನೆ ಮಾಡಿದ್ದಾರೆ. ಸದ್ಯ “ಲಡ್ಡು ಬಂದು ಬಾಯಿಗೆ ಬಿತ್ತಾ …’ ಹಾಡಿಗೆ ಸೋಶಿಯಲ್ ಮೀಡಿಯಾದಲ್ಲಿ ಬಿಗ್ ರೆಸ್ಪಾನ್ಸ್ ಸಿಗುತ್ತಿದ್ದು, ಇದೇ ಖುಷಿಯಲ್ಲಿರುವ ಚಿತ್ರತಂಡ, ಇದರ ಬೆನ್ನಲ್ಲೇ “ಚುಟುಚುಟು …’ ತರಹದ ಇನ್ನೊಂದು ಜವಾರಿ ಶೈಲಿಯ ಹಾಡು ಬಿಡುಗಡೆ ಮಾಡುವ ಯೋಚನೆಯಲ್ಲಿದೆ. ಡಿ. 6ಕ್ಕೆ “ಅವತಾರ್ ಪುರುಷ’ನ ಟ್ರೇಲರ್ ಬಿಡುಗಡೆಯಾಗಲಿದ್ದು, ಡಿ. 10ಕ್ಕೆ ಚಿತ್ರ ತೆರೆ ಕಾಣಲಿದೆ.
ಇನ್ನು “ಅವತಾರ್ ಪುರುಷ’ ಚಿತ್ರವನ್ನು ಕರ್ನಾಟಕ ಮಾತ್ರವಲ್ಲದೆ ಚೆನ್ನೈ, ಕೊಚ್ಚಿ, ಹೈದರಾಬಾದ್, ಮುಂಬೈ, ಕೊಲ್ಕತ್ತಾ ಮುಂತಾದ ನಗರಗಳಲ್ಲೂ ಡುಗಡೆಯಾಗುತ್ತಿದೆ. ಇದಲ್ಲದೆ ಇಂಗ್ಲೀಷ್ ಸಬ್‌ಟೈಟಲ್ ಗಳೊಂದಿಗೆ ಅಮೆರಿಕಾ, ಇಂಗ್ಲೆಂಡ್ ಸೇರಿದಂತೆ ವಿದೇಶಗಳಲ್ಲೂ ಚಿತ್ರದ ಬಿಡುಗಡೆಗೆ ಚಿತ್ರತಂಡ ಪ್ಲಾನ್ ಹಾಕಿಕೊಂಡಿದೆ. ಒಟ್ಟಾರೆ ತೆರೆಗೆ ಬರೋದಕ್ಕೂ ಮೊದಲೇ ತನ್ನ ಟೀಸರ್ ಮತ್ತು ಹಾಡುಗಳ ಮೂಲಕ ಸಿನಿಮಂದಿಯ ಗಮನ ಸೆಳೆಯುತ್ತಿರುವ “ಅವತಾರ್ ಪುರುಷ’ ಕಾಮಿಡಿ ಕಮಾಲ್ ಥಿಯೇಟರ್‌ನಲ್ಲಿ ಎಷ್ಟರ ಮಟ್ಟಿಗೆ ಪ್ರೇಕ್ಷಕ ಪ್ರಭುಗಳಿಗೆ ಇಷ್ಟವಾಗಲಿದ್ದಾನೆ ಅನ್ನೋದು ಡಿಸೆಂಬರ್ ಎರಡನೇ ವಾರದ ವೇಳೆಗೆ ಗೊತ್ತಾಗಲಿದೆ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
You seem to have an Ad Blocker on.
To continue reading, please turn it off or whitelist Udayavani.