ಹೊಸಬರ “ವೃಷಂಗ’ ಚಿತ್ರಕ್ಕೆ ಚಾಲನೆ
Team Udayavani, Nov 26, 2019, 6:00 AM IST
ಬಹುತೇಕ ಹೊಸಪ್ರತಿಭೆಗಳು ಸೇರಿ ನಿರ್ಮಿಸುತ್ತಿರುವ “ವೃಷಂಗ’ ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಗವಿಪುರದ ಬಂಡೆಮಹಾಕಾಳಿ ದೇವಸ್ಥಾನದಲ್ಲಿ ನಡೆಯಿತು. ಹೆಣ್ಣಿನ ಶೋಷಣೆಯ ಬಗ್ಗೆಗಿನ ಕಥಾ ಹಂದರ ಹೊಂದಿರುವ ಈ ಚಿತ್ರದ ನಾಯಕರಾಗಿ ಹೇಮಂತ್ ಶೆಟ್ಟಿ ಅಭಿನಯಿಸುತ್ತಿದ್ದಾರೆ. ಉಳಿದಂತೆ ಮಾನಸ, ಪೂಜಾ, ಚೇತನ್, ಆನಂದ್ ಮುಂತಾದವರು ಈ ಚಿತ್ರದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸುತ್ತಿದ್ದಾರೆ.
“ಫ್ರೆಂಡ್ಸ್ ಪಿಕ್ಚರ್ಸ್ ಕ್ರಿಯೇಷನ್ಸ್’ ಲಾಂಛನದಲ್ಲಿ ಶ್ರೀಮತಿ ವಿಜಯಲಕ್ಷ್ಮೀ ರಾಮೇಗೌಡ ಮತ್ತು ಕುಮಾರಿ ಸಂಗೀತ ಎಸ್.ಆರ್ ಅವರು ನಿರ್ಮಿಸುತ್ತಿರುವ “ವೃಷಂಗ” ಚಿತ್ರಕ್ಕೆ “ರಮಣ ರಮಣಿ’ ಚಿತ್ರಕ್ಕೆ ಸಹ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿ ಅನುಭವವಿರುವ ನಿರಂಜನ್ ರಂಗನಾಥ್ ಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ಮುತ್ತು ರಾಜ್ ಈ ಚಿತ್ರಕ್ಕೆ ಚಿತ್ರಕಥೆ, ಸಂಭಾಷಣೆ ಬರೆದು, ಗೀತರಚನೆ ಮಾಡಿ ಪ್ರಧಾನ ನಿರ್ದೇಶನದ ಹೊಣೆ ಹೊತ್ತಿದ್ದಾರೆ.
ಚಿತ್ರದ ಮುಹೂರ್ತ ಸಮಾರಂಭದಲ್ಲಿ ಚಿತ್ರದ ಪ್ರಥಮ ಸನ್ನಿವೇಶಕ್ಕೆ ಶ್ರೀಮತಿ ವಿಜಯಲಕ್ಷ್ಮೀ ರಾಮೇಗೌಡ ಆರಂಭ ಫಲಕ ತೋರಿಸಿದರೆ, ರಂಗನಾಥ್ ಎಸ್.ಆರ್ ಕ್ಯಾಮೆರಾ ಸ್ವಿಚ್ ಆನ್ ಮಾಡುವ ಮೂಲಕ ಚಿತ್ರೀಕರಣಕ್ಕೆ ಚಾಲನೆ ನೀಡಿದರು. ಆರು ಹಾಡುಗಳಿರುವ ಈ ಚಿತ್ರಕ್ಕೆ ಸರ್ವೆಶ್ ಜೈನ್ ಸಂಗೀತ ನೀಡುತ್ತಿದ್ದಾರೆ. ನಾಲ್ಕು ಸಾಹಸ ಸನ್ನಿವೇಶಗಳಿದ್ದು, ವೈಲೆಂಟ್ ವೇಲು ಸಾಹಸ ನಿರ್ದೇಶನ ಮಾಡಲಿದ್ದಾರೆ. ಯೇಸುದಾಸ್ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಚಿಕ್ಕಮಗಳೂರು ಸುತ್ತಮುತ್ತ ಚಿತ್ರೀಕರಣ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.