ಲವ್ವಿಗೆ ಶುಕ್ರದೆಸೆ, ರಾಜಕೀಯಕ್ಕೆ ವಕ್ರದೆಸೆ
Team Udayavani, Jan 10, 2017, 11:09 AM IST
ಹೊಸಬರಿಗೆ ಶುಕ್ರದೆಸೆ ಶುರುವಾಗಿದೆ. ಹೊಸಬರ ಹೊಸ ಕಾನ್ಸೆಪ್ಟ್ನ ಸಿನಿಮಾಗಳು ಚಿತ್ರಮಂದಿರಗಳಲ್ಲಿ ಗಟ್ಟಿಯಾಗಿ ನಿಲ್ಲುತ್ತಿವೆ, ಗೆಲ್ಲುತ್ತಿವೆ. ಹಾಗಾಗಿ, ಶುಕ್ರದೆಸೆ ಸ್ಟಾರ್ಟ್ ಎನ್ನಬಹುದು. ಈಗ ಈ ಶುಕ್ರದೆಸೆಯೇ ಸಿನಿಮಾವೊಂದರ ಟೈಟಲ್ ಆಗಿದೆ. ಅದು “ಶುಕ್ರದೆಸೆ ಸ್ಟಾರ್ಟ್’. ಹೌದು, “ಶುಕ್ರದೆಸೆ ಸ್ಟಾರ್ಟ್’ ಎನ್ನುವ ಸಿನಿಮಾವೊಂದು ಆರಂಭವಾಗುತ್ತಿದೆ. ಜೋಸೆಫ್ ನೀನಾಸಂ ಎನ್ನುವವರು ಈ ಸಿನಿಮಾ ಮೂಲಕ ನಿರ್ದೇಶಕರಾಗುತ್ತಿದ್ದಾರೆ.
ಇವರಿಗೆ ನಿರ್ದೇಶನ ಹೊಸದು. ಆದರೆ, ರಂಗಭೂಮಿ ಹೊಸದಲ್ಲ. ಅನೇಕ ವರ್ಷಗಳಿಂದ ರಂಗಭೂಮಿಯಲ್ಲಿ ತೊಡಗಿಸಿಕೊಂಡಿರುವ ಜೋಸೆಫ್ ಅನೇಕ ನಾಟಕಗಳನ್ನು ನಿರ್ದೇಶಿಸಿದ್ದಾರೆ. ಕನ್ನಡ, ಮಲಯಾಳಂ, ಹಿಂದಿ, ಇಂಡೋ ಯುರೋಪಿಯನ್ ಮುಂತಾದ ಹಲವು ಸಿನಿಮಾ ಕ್ಷೇತ್ರಗಳಲ್ಲಿ ಜೋಸೆಫ್ ಗುರುತಿಸಿಕೊಂಡಿದ್ದಾರೆ. ಅಲ್ಲದೇ, ಇಂದು ಕನ್ನಡ ಚಿತ್ರರಂಗದಲ್ಲಿ ಬಿಝಿ ನಟರಾಗಿರುವ ಅನೇಕರಿಗೆ ನಟನೆಯ ತಗರಬೇತಿ ನೀಡಿದ್ದಾರೆ.
ಇಂತಿಪ್ಪ ಜೋಸೆಫ್ ಈಗ “ಶುಕ್ರದೆಸೆ ಸ್ಟಾರ್ಟ್’ ಸಿನಿಮಾ ಮೂಲಕ ನಿರ್ದೇಶಕರಾಗುತ್ತಿದ್ದಾರೆ. ಹೋಬಳಿಯೊಂದರಲ್ಲಿ ನಡೆಯುವ ಘಟನೆಗಳನ್ನಿಟ್ಟುಕೊಂಡು ಕಥೆ ಹೆಣೆದಿದ್ದು, ರಾಜಕೀಯ ಹಿನ್ನೆಲೆಯಲ್ಲಿ ಸಾಗುವ ಲವ್‌ಸ್ಟೋರಿಯೊಂದನ್ನು ಹೇಳಲು ಹೊರಟಿದ್ದಾರೆ. ಸಣ್ಣ ಊರಿನಲ್ಲಿ ನಡೆಯುವ ರಾಜಕೀಯ ಸಂಘರ್ಷದಲ್ಲಿ ಅಮಾಯಕರ ಜೀವನ ಹೇಗೆ ಹಾಳಾಗುತ್ತದೆ. ಆ ರಾಜಕೀಯ ಕಿಚ್ಚಿಗೆ ಹೇಗೆ ಅವರು ತಮ್ಮ ಜೀವನ ಕಳೆದುಕೊಳ್ಳುತ್ತಾರೆಂಬ ಅಂಶದ ಜೊತೆಗೆ ಅಮಾಯಕರ ರಿವೆಂಜ್‌ಸ್ಟೋರಿಯನ್ನು ಇಲ್ಲಿ ಹೇಳಲಾಗಿದೆಯಂತೆ.
“ಚಿತ್ರದಲ್ಲಿ ಕಥೆಯೇ ಹೀರೋ. ಹೊಸ ಬಗೆಯ ನಿರೂಪಣೆಯೊಂದಿಗೆ ಈ ಸಿನಿಮಾವನ್ನು ಕಟ್ಟಿಕೊಡಲಿದ್ದೇನೆ. ಅದಕ್ಕಾಗಿ ಸಾಕಷ್ಟು ಪೂರ್ವತಯಾರಿ ಕೂಡಾ ನಡೆಯುತ್ತಿದೆ’ ಎನ್ನುತ್ತಾರೆ ಜೋಸೆಫ್. ಅನಿಲ್ ನಾಯಕರಾಗಿ ನಟಿಸುತ್ತಿದ್ದಾರೆ. ಇವರಿಗೆ ಕನ್ನಡದಲ್ಲಿ ಇದು ಮೊದಲ ಸಿನಿಮಾ.
ಮುಂಬೈನ ಅನುಪಮ್ ಖೇರ್ ಸಂಸ್ಥೆಯಲ್ಲಿ ನಟನಾ ತರಬೇತಿ ಪಡೆದಿರುವ ಅನಿಲ್ ಈಗಾಗಲೇ ತಮಿಳು ಸಿನಿಮಾವೊಂದರಲ್ಲಿ ನಟಿಸಿದ್ದಾರೆ. ಅಮೃತಾ ಈ ಚಿತ್ರದ ನಾಯಕಿ. ಕನ್ನಡ ಮೂಲದ ಮುಂಬೈ ಬೆಡಗಿ ಅಮೃತಾಗೂ ಇಲ್ಲಿ ಒಳ್ಳೆಯ ಪಾತ್ರವಿದೆಯಂತೆ. ಚಿತ್ರವನ್ನು ವಿಮಲ್ ಜೈನ್ ಹಾಗೂ ಅರ್ಜುನ್ ಗೌಡ ನಿರ್ಮಿಸುತ್ತಿದ್ದು, ಬಿಜಿ ಬಾಳ್ ಅವರ ಸಂಗೀತ ಚಿತ್ರಕ್ಕಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
TAMATE MOVIE: ಟೀಸರ್‌ನಲ್ಲಿ ತಮಟೆ ಸದ್ದು
Rishab Shetty: ʼಜೈ ಹನುಮಾನ್ʼ ಬಳಿಕ ಮತ್ತೊಂದು ತೆಲುಗು ಸಿನಿಮಾದಲ್ಲಿ ರಿಷಬ್ ಶೆಟ್ಟಿ?
Max Movie: ಅಂತೂ ಬಂದೇ ಬಿಡ್ತು ʼಮ್ಯಾಕ್ಸ್ʼ ರಿಲೀಸ್ ಡೇಟ್.. ಫ್ಯಾನ್ಸ್ ಖುಷ್
BBK11: ನಿಮ್ಮನ್ನು ಆಚೆ ಕಳ್ಸಿಯೇ ನಾನು ಹೋಗೋದು ಚೈತ್ರಾ ವಿರುದ್ಧ ಗುಡುಗಿದ ರಜತ್
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Ranchi: ಪ್ರೇಯಸಿಯನ್ನು ಕೊಂದು 40ರಿಂದ 50 ತುಂಡು ಮಾಡಿದ ಕಟುಕ!
Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.