ಡಾಕ್ಟರ್ ಬಂದ್ರು..: ರೋಡ್ ಕಿಂಗ್ ನಲ್ಲಿ ಮಿಂಚಿದ ಲೀಲಾ ಮೋಹನ್
Team Udayavani, Jun 23, 2023, 4:06 PM IST
ಕನ್ನಡ ಚಿತ್ರರಂಗದಲ್ಲಿ ಈಗಾಗಲೇ ಅನೇಕ ಡಾಕ್ಟರ್ಗಳಿದ್ದಾರೆ. ನಟನೆ, ನಿರ್ದೇಶನ, ನಿರ್ಮಾಣ ಸೇರಿದಂತೆ ಬೇರೆ ಬೇರೆ ವಿಭಾಗಗಳಲ್ಲಿ ತೊಡಗಿಸಿಕೊಂಡಿದ್ದಾರೆ. ಈಗ ಈ ಸಾಲಿಗೆ ಹೊಸ ಸೇರ್ಪಡೆ ಡಾ.ಪಿ.ವಿ.ಆರ್.ಲೀಲಾ ಮೋಹನ್.
ವೃತ್ತಿಯಲ್ಲಿ ವೈದ್ಯರಾಗಿರುವ ಲೀಲಾ ಮೋಹನ್ ಅವರು ನಟನೆಯ ಆಸಕ್ತಿಯಿಂದ ಈಗ ಸಿನಿಮಾ ಕ್ಷೇತ್ರದಲ್ಲಿ ಗುರುತಿಸಿಕೊಳ್ಳುತ್ತಿದ್ದಾರೆ. ಜನರಲ್ ಫಿಶಿಯನ್ ಹಾಗೂ ಡಯಾಬಿಟಿಸ್ ಸ್ಪೆಷಲಿಸ್ಟ್ ಆಗಿರುವ ಲೀಲಾ ಮೋಹನ್ ಅವರು ಈ ವಾರ ತೆರೆಕಾಣುತ್ತಿರುವ “ರೋಡ್ ಕಿಂಗ್’ ಸಿನಿಮಾದಲ್ಲಿ ಪ್ರಮುಖ ಪಾತ್ರ ಮಾಡಿದ್ದಾರೆ.
“ರೋಡ್ ಕಿಂಗ್’ ಲೀಲಾ ಮೋಹನ್ ಅವರ ಮೊದಲ ಚಿತ್ರವೇನಲ್ಲ. ಕೆಲವು ವರ್ಷಗಳ ಹಿಂದೆ ಬಿಡುಗಡೆಯಾದ “ಗಡಿಯಾರ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಅವರು, ಪ್ರಿಯಾಂಕಾ ಉಪೇಂದ್ರ ಅಭಿನಯದ “ಉಗ್ರಾವತಾರ’ ಚಿತ್ರದಲ್ಲಿ ಸೈಕೋ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. “ನಾಯಿ ಇದೆ ಎಚ್ಚರಿಕೆ’, “ಪುಟಾಣಿ ಪಂಟರ್ ಗಳು’ ಚಿತ್ರಗಳಲ್ಲಿ ನಾಯಕನಾಗಿ ಅಭಿನಯಿಸಿದ್ದಾರೆ. ಕನ್ನಡವಲ್ಲದೆ ತೆಲುಗಿನ “ಕಲ್ಯಾಣಮಸ್ತು’ ಚಿತ್ರದಲ್ಲೂ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.
“ಚಿಕ್ಕಂದಿನಿಂದ ನಟಿಸುವ ಆಸಕ್ತಿ ಇತ್ತು. “ಬದುಕು’ ಧಾರಾವಾಹಿಯಲ್ಲಿ ನಟಿಸಿದ್ದೆ. ಆಮೇಲೆ ವೈದ್ಯಕೀಯ ಕ್ಷೇತ್ರದಲ್ಲಿ ಉನ್ನತ ವ್ಯಾಸಂಗದಲ್ಲಿ ತೊಡಗಿಸಿ ಕೊಂಡಿದ್ದರಿಂದ ನಟನೆಯಿಂದ ದೂರ ಉಳಿಯಬೇಕಾಯಿತು. ಆ ನಂತರ ನಮ್ಮದೇ ನಿರ್ಮಾಣ ಸಂಸ್ಥೆ ಪ್ರಾರಂಭಿಸಿ ಕಿರುಚಿತ್ರಗಳಲ್ಲಿ ನಟಿಸಿದ್ದೆ. ಕೆಲವು ಮ್ಯೂಸಿಕ್ ಆಲ್ಬಂ ನಿರ್ಮಾಣದಲ್ಲೂ ತೊಡಗಿಸಿಕೊಂಡೆ. ಕಳೆದ ಕೆಲವು ವರ್ಷಗಳಿಂದ ಪುನಃ ಅಭಿನಯದಲ್ಲಿ ತೊಡಗಿಸಿಕೊಂಡಿದ್ದೇನೆ’ ಎನ್ನುವುದು ಲೀಲಾ ಮೋಹನ್ ಮಾತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು
Drone Prathap: ಸಿನಿಮಾರಂಗಕ್ಕೆ ಡ್ರೋನ್ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.