ಟೈಟಲ್ ಟ್ರ್ಯಾಕ್ನಲ್ಲಿ ರಚ್ಚು ಮೆಚ್ಚು
Team Udayavani, Dec 4, 2021, 8:35 AM IST
ಕೃಷ್ಣ ಅಜೇಯ್ ರಾವ್ ಮತ್ತು ರಚಿತಾ ರಾಮ್ ಮುಖ್ಯ ಭೂಮಿಕೆಯಲ್ಲಿ ಅಭಿನಯಿಸಿರುವ “ಲವ್ ಯು ರಚ್ಚು’ ಚಿತ್ರದ ಎರಡು ಹಾಡುಗಳು ಸೋಶಿಯಲ್ ಮೀಡಿಯಾದಲ್ಲಿ ಜೋರಾಗಿ ಸದ್ದು ಮಾಡುತ್ತಿರುವಂತೆಯೇ, ಈಗ ಚಿತ್ರತಂಡ ಚಿತ್ರದ ಟೈಟಲ್ ಟ್ರ್ಯಾಕ್ ವಿಡಿಯೋವನ್ನು ಬಿಡುಗಡೆಗೊಳಿಸಿದೆ. ಬಹದ್ಧೂರ್ ಚೇತನ್ ಕುಮಾರ್ ಬರೆದಿರುವ “ಓಯ್ ಡಿಂಪಲ್ ಡಿಂಪಲ್ ಹುಡುಗಿ… ನಿನ್ನ ಡಾರ್ಲಿಂಗ್ ಅನ್ಬೋದಾ…’ ಎಂಬ ಈ ಹಾಡಿಗೆ ನವೀನ್ ಸಜ್ಜು ಧ್ವನಿಯಾಗಿದ್ದು, ಮಣಿಕಾಂತ್ ಕದ್ರಿ ಸಂಗೀತ ಸಂಯೋಜನೆಯಲ್ಲಿ ಹಾಡು ಮೂಡಿಬಂದಿದೆ. ಡಿ. 1ರಂದು “ಲವ್ ಯು ರಚ್ಚು…’ ಚಿತ್ರದ ಈ ಟೈಟಲ್ ಟ್ರ್ಯಾಕ್ ಲಿರಿಕಲ್ ವಿಡಿಯೋ “ಆನಂದ ಆಡಿಯೋ’ ಯು-ಟ್ಯೂಬ್ ಚಾನೆಲ್ನಲ್ಲಿ ಬಿಡುಗಡೆಯಾಗಿದೆ.
ಇನ್ನು “ಲವ್ ಯು ರಚ್ಚು’ ಟೈಟಲ್ ಟ್ರ್ಯಾಕ್ ವಿಡಿಯೋ ಹಾಡಿಗೆ ಸಾಮಾಜಿಕ ಜಾಲತಾಣಗಳಲ್ಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದ್ದು, ಹಾಡು ಬಿಡುಗಡೆಯಾದ ಎರಡೇ ದಿನದಲ್ಲಿ 6 ಲಕ್ಷಕ್ಕೂ ಹೆಚ್ಚು ವೀಕ್ಷಣೆ ಕಂಡಿದೆ. ಕೆಲ ದಿನಗಳ ಹಿಂದಷ್ಟೇ “ಲವ್ ಯು ರಚ್ಚು’ ಚಿತ್ರದ ಸಿದ್ಧ್ ಶ್ರೀರಾಮ್ ಧ್ವನಿಯಲ್ಲಿ “ಮುದ್ದು ನೀನು… ಮುದ್ದು ನೀನು…’ ಮತ್ತು ಸಂಚಿತ್ ಹೆಗ್ಡೆ ಧ್ವನಿಯಲ್ಲಿ “ನೋಡುತಾ ನನ್ನನೇ…’ ಎಂಬ ಎರಡು ಹಾಡುಗಳು ಬಿಡುಗಡೆಯಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಹಾಡುಗಳು ಸೂಪರ್ ಹಿಟ್ ಆಗಿವೆ. ಇದರ ಬೆನ್ನಲ್ಲೇ ಚಿತ್ರತಂಡ ಟೈಟಲ್ ಟ್ರ್ಯಾಕ್ ಅನ್ನು ಬಿಡುಗಡೆ ಮಾಡಿದೆ.
ಸದ್ಯ ಚಿತ್ರದ ಹಾಡುಗಳಿಗೆ ಸಿಗುತ್ತಿರುವ ಪ್ರತಿಕ್ರಿಯೆ ಬಗ್ಗೆ ಮಾತನಾಡುವ ಚಿತ್ರತಂಡ, ಇಂದಿನ ಜನರೇಶನ್ ಸ್ಟೋರಿ ಸಿನಿಮಾದಲ್ಲಿರುವುದರಿಂದ, ಇಂದಿನ ಪ್ರೇಕ್ಷಕರ ಅಭಿರುಚಿಗೆ ತಕ್ಕಂತೆ “ಲವ್ ಯು ರಚ್ಚು’ ಹಾಡುಗಳು ಕೂಡ ಮೂಡಿಬಂದಿವೆ. ಹಾಡುಗಳು ಸಿನಿಮಾದ ಕಥೆಗೆ ಹಾಸುಹೊಕ್ಕಾಗಿವೆ. ಈಗಾಗಲೇ ಬಿಡುಗಡೆಯಾಗಿರುವ ಎಲ್ಲ ಹಾಡುಗಳಿಗೂ ಸಿನಿಪ್ರಿಯರ ಗಮನ ಸೆಳೆಯುತ್ತಿವೆ. ಹಾಡುಗಳಂತೆ ಸಿನಿಮಾ ಕೂಡ ಪ್ರೇಕ್ಷಕರಿಗೆ ಇಷ್ಟವಾಗುತ್ತದೆ ಎಂಬ ಭರವಸೆಯ ಮಾತುಗಳನ್ನಾಡುತ್ತದೆ.
ಸದ್ಯ ಚಿತ್ರದ ಪ್ರಚಾರ ಕಾರ್ಯದಲ್ಲಿ ನಿರತವಾಗಿರುವ ಚಿತ್ರತಂಡ ಡಿಸೆಂಬರ್ ಅಂತ್ಯದಲ್ಲಿ ಚಿತ್ರವನ್ನು ಪ್ರೇಕ್ಷಕರ ಮುಂದೆ ತರುವ ಯೋಚನೆಯಲ್ಲಿದೆ. ಶಂಕರ್ ಎಸ್ ರಾಜ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ “ಲವ್ ಯು ರಚ್ಚು’ ಚಿತ್ರವನ್ನು “ಜಿ ಸಿನಿಮಾಸ್’ ಬ್ಯಾನರ್ನಲ್ಲಿ ಗುರು ದೇಶಪಾಂಡೆ ನಿರ್ಮಿಸುತ್ತಿದ್ದಾರೆ. ಚಿತ್ರಕ್ಕೆ ಶ್ರೀ ಕ್ರೇಜಿಮೈಂಡ್ಸ್ ಛಾಯಾಗ್ರಹಣ ಮತ್ತು ಸಂಕಲನವಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.