Sandalwood; ‘ಮಾರ್’ ಮುಹೂರ್ತಕ್ಕೂ ಮೊದಲೇ ಹಾಡು ಬಿಡುಗಡೆ
Team Udayavani, Oct 1, 2023, 9:11 AM IST
ಸಾಮಾನ್ಯವಾಗಿ ಬಹುತೇಕ ಚಿತ್ರತಂಡದವರು ಮೊದಲು ತಮ್ಮ ಸಿನಿಮಾದ ಮುಹೂರ್ತ ಮಾಡಿಕೊಂಡು ನಂತರ ಚಿತ್ರೀಕರಣದ ಅಖಾಡಕ್ಕೆ ಇಳಿಯುತ್ತದೆ. ಆದರೆ ಇಲ್ಲೊಂದು ಚಿತ್ರತಂಡ ಮೊದಲು ತಮ್ಮ ಸಿನಿಮಾದ ಹೀರೋ ಇಂಟ್ರೊಡಕ್ಷನ್ ಹಾಡನ್ನು ಚಿತ್ರೀಕರಿಸಿಕೊಂಡು, ಹೀರೋ ತೆರೆಮೇಲೆ ಹೇಗೆ ಕಾಣಿಸುತ್ತಾರೆ ಹಾಗೂ ಹೀರೋ ಕಾನ್ಫಿಡೆನ್ಸ್ ಹೇಗಿದೆ ಎಂಬುದನ್ನು ಸ್ಯಾಂಪಲ್ ಚೆಕ್ ಮಾಡಿಕೊಂಡು ನಂತರ ಮುಹೂರ್ತವನ್ನು ಮಾಡಿ, ಚಿತ್ರೀಕರಣಕ್ಕೆ ಮುಂದಾಗುತ್ತಿದೆ. ಅಂದಹಾಗೆ, ಆ ಸಿನಿಮಾದ ಹೆಸರು “ಮಾರ್’.
ಹೌದು, ಕನ್ನಡ ಚಿತ್ರರಂಗದಲ್ಲಿ ನಾಯಕ ನಟನಾಗಿ ಮಿಂಚಬೇಕು ಎನ್ನುವ ಆಸೆ ಇಟ್ಟುಕೊಂಡಿರುವ, ಈಗಾಗಲೇ ಒಂದಷ್ಟು ಸಿನಿಮಾಗಳಲ್ಲಿ ಸಣ್ಣಪುಟ್ಟ ಪಾತ್ರಗಳಲ್ಲಿ ಅಭಿನಯಿಸಿದ ಅನುಭವವಿರುವ ವಿಜಯ್ ವೆಂಕಟೇಶ್ ಮೊದಲ ಬಾರಿಗೆ “ಮಾರ್’ ಸಿನಿಮಾದ ಮೂಲಕ ಹೀರೋ ಆಗಿ ಸ್ಯಾಂಡಲ್ವುಡ್ಗೆ ಪರಿಚಯವಾಗುತ್ತಿದ್ದಾರೆ. “ಮಾರ್’ ಚಿತ್ರಕ್ಕೆ ಅನಿಲ್ ವೆಂಕಟರಾಜು ನಿರ್ದೇಶನ ಮಾಡುತ್ತಿದ್ದಾರೆ.
ಇತ್ತೀಚೆಗೆ ನಾಯಕ ನಟ ವಿಜಯ್ ವೆಂಕಟೇಶ್ ಜನ್ಮದಿನದ ಸಂಭ್ರಮದಲ್ಲಿ “ಮಾರ್’ ಸಿನಿಮಾದ ಹೀರೋ ಇಂಟ್ರೊಡಕ್ಷನ್ ಸಾಂಗ್ ಬಿಡುಗಡೆಯಾಯಿತು. ನಟ ಶ್ರೇಯಸ್ ಮಂಜು ಈ ಮೊದಲ ಹಾಡನ್ನು ರಿಲೀಸ್ ಮಾಡಿ ಚಿತ್ರತಂಡಕ್ಕೆ ಶುಭ ಹಾರೈಸಿದರು.
ಕೃಷ್ಣ ಸುಮೈರಾ ಸಂಗೀತ ಸಂಯೋಜನೆಯಲ್ಲಿ “ಮಾರ್’ ಸಿನಿಮಾದ ಹೀರೋ ಇಂಟ್ರೊಡಕ್ಷನ್ ಹಾಡು ಮೂಡಿಬಂದಿದ್ದು ನಿರ್ದೇಶಕ ಅನಿಲ್ ಸಾಹಿತ್ಯ ರಚಿಸಿದ್ದಾರೆ. ಈ ಹಾಡಿಗೆ ಸುಹಾಸ್ ಛಾಯಾಗ್ರಹಣ, ಪ್ರವೀಣ್ ಕೊರಿಯೋಗ್ರಫಿ ಇದೆ. ಇದೇ ವೇಳೆ ನಟ ವಿಜಯ್ ವೆಂಕಟೇಶ್ ಹೀರೊ ಆಗಿ ಎಂಟ್ರಿಕೊಡುವ ಜೊತೆಗೆ “ಹಾರಿಕಾ ಪ್ರೊಡಕ್ಷನ್’ ಹೌಸ್ ಕೂಡ ಲಾಂಚ್ ಮಾಡಿದ್ದಾರೆ. ನಟನೆ ಜೊತೆಗೆ ನಿರ್ಮಾಪಕ ನಾಗಿಯೂ ವಿಜಯ್ ಮೊದಲ ಹೆಜ್ಜೆ ಇಡುತ್ತಿದ್ದಾರೆ. ತಮ್ಮ ನಿರ್ಮಾಣ ಸಂಸ್ಥೆ ಮೂಲಕ ಅನೇಕ ಯುವ ಪ್ರತಿಭೆಗಳಿಗೆ ಅವಕಾಶಕೊಡುವ ಪ್ಲಾನ್ ಇಟ್ಟುಕೊಂಡಿದ್ದಾರೆ ವಿಜಯ್. ಇದೇ ಬ್ಯಾನರ್ನಲ್ಲಿ “ಮಾರ್’ ಸಿನಿಮಾ ನಿರ್ಮಾಣವಾಗುತ್ತಿದೆ.
ಕನ್ನಡ ಹಾಗೂ ತೆಲುಗು ಎರಡು ಭಾಷೆಯಲ್ಲಿ ಬಿಡುಗಡೆ ಆಗುತ್ತಿದ್ದು ಸದ್ಯ ರಿಲೀಸ್ ಆಗಿರುವ ಈ ಹಾಡು ಕೂಡ ಕನ್ನಡದ ಜೊತೆಗೆ ತೆಲುಗಿನಲ್ಲೂ ಬಿಡುಗಡೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gurunandan: ಡಿ.27ಕ್ಕೆ ತೆರೆಗೆ ಬರುತ್ತಿಲ್ಲ ʼರಾಜು ಜೇಮ್ಸ್ ಬಾಂಡ್’ ಚಿತ್ರ
Nodidavaru Enanthare Movie: ನವೀನ್ ಶಂಕರ್ ಚಿತ್ರದ ಟೀಸರ್ ಬಂತು
BBK11: ಸತತ ಮೂರನೇ ವಾರವೂ ಕಳಪೆ ಪಟ್ಟಿ: ಖುಷಿಯಿಂದಲೇ ಜೈಲು ಸೇರಿದ ಚೈತ್ರಾ
Dhruva-Prem: ಡಿ.24ಕ್ಕೆ ʼಕೆಡಿʼ ಶಿವ ಶಿವ ಹಾಡು ರಿಲೀಸ್
Dhruva Sarja: ಪ್ರತಿ ಸಿನಿಮಾವೂ ನನಗೆ ಹೊಸ ಪಾಠ…: ಧ್ರುವ ಹೇಳಿದ್ದೇನು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.