ಕೋಟಿಗೊಬ್ಬನ ಎದುರು “ಮಡ್ಡೋನ’


Team Udayavani, Jun 4, 2018, 10:00 PM IST

madonna-sebastian-2.jpg

ಸುದೀಪ್‌ ಅಭಿನಯದ “ಕೋಟಿಗೊಬ್ಬ 3′ ಚಿತ್ರದ ಮುಹೂರ್ತವಾಗಿ, ಇದೀಗ ಚಿತ್ರೀಕರಣ ಪ್ರಾರಂಭವಾಗುವುದಕ್ಕೆ ದಿನಗಣನೆ ಪ್ರಾರಂಭವಾಗಿದೆ. ಈ ಮಧ್ಯೆ ಚಿತ್ರದ ನಾಯಕಿ ಆಯ್ಕೆಯಾಗಿದ್ದು, ಸುದೀಪ್‌ ಎದುರು ಮಲಯಾಳಂ ನಟಿ ಮಡ್ಡೋನ ಸೆಬಾಸ್ಟಿಯನ್‌ ನಟಿಸುವುದು ಪಕ್ಕಾ ಆಗಿದೆ. ಹೌದು, “ಕೋಟಿಗೊಬ್ಬ 3′ ಚಿತ್ರದಲ್ಲಿ ಮಡ್ಡೋನ ಸೆಬಾಸ್ಟಿಯನ್‌ ನಾಯಕಿಯಾಗಿ ನಟಿಸುತ್ತಿದ್ದು, ಇದು ಅವರ ಮೊದಲ ಚಿತ್ರವಾಗಿದೆ.

ಇದಕ್ಕೂ ಮುನ್ನ ಮಲಯಾಳಂನ “ಪ್ರೇಮಂ’ ಚಿತ್ರದ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಅವರು, “ಕಿಂಗ್‌ ಲಯರ್‌’ನಲ್ಲೂ ನಟಿಸಿದ್ದಾರೆ. ತಮಿಳಿನಲ್ಲಿ “ಕಾದಲುಂ ಕದಂದು ಪೋಗುಂ’, “ಕವನ್‌’, “ಪವರ್‌ ಪಾಂಡಿ’ ಮುಂತಾದ ಚಿತ್ರಗಳಲ್ಲಿ ನಟಿಸಿರುವ ಅವರು, ಗಾಯಕಿಯಾಗಿಯೂ ಗುರುತಿಸಿಕೊಂಡಿದ್ದಾರೆ. ಈಗ ಇದೇ ಮೊದಲ ಬಾರಿಗೆ ಅವರು “ಕೋಟಿಗೊಬ್ಬ 3′ ಚಿತ್ರದ ಮೂಲಕ ಕನ್ನಡಕ್ಕೆ ಎಂಟ್ರಿ ಕೊಡುತ್ತಿದ್ದಾರೆ.

ಅಷ್ಟೇ ಅಲ್ಲ, “ಕೋಟಿಗೊಬ್ಬ 3′ ಚಿತ್ರದ ಇನ್ನೊಂದು ಹೈಲೈಟ್‌ ಎಂದರೆ, ಬಾಲಿವುಡ್‌ ನಟ ಅಫ್ತಾಬ್‌ ಶಿವದಾಸಾನಿ ನಟಿಸುತ್ತಿರುವುದು. ಈ ಚಿತ್ರದಲ್ಲಿ ಇಂಟರ್‌ಪೋಲ್‌ ಅಧಿಕಾರಿಯಾಗಿ ಕಾಣಿಸಿಕೊಳ್ಳುತ್ತಿರುವ ಅವರಿಗಿದು ಮೊದಲ ಕನ್ನಡ ಚಿತ್ರ. ಬಾಲಿವುಡ್‌ನ‌ಲ್ಲಿ “ಮಿಸ್ಟರ್‌ ಇಂಡಿಯಾ’, “ಶೆಹನ್‌ಷಾ’, “ಚಾಲ್‌ಬಾಝ್’ ಮುಂತಾದ ಚಿತ್ರಗಳಲ್ಲಿ ಬಾಲನಟನಾಗಿ ಕಾಣಿಸಿಕೊಂಡಿದ್ದ ಅಫ್ತಾಬ್‌, ರಾಮ್‌ ಗೋಪಾಲ್‌ ವರ್ಮ ನಿರ್ದೇಶನದ “ಮಸ್ತ್’ ಚಿತ್ರದ ಮೂಲಕ ನಾಯಕರಾದರು.

ಆ ನಂತರ “ಆವಾರ ಪಾಗಲ್‌ ದಿವಾನಾ’, “ಲವ್‌ ಕೆಲಿಯೇ ಕುಛ… ಭೀ ಕರೇಗಾ’, “ಮಸ್ತಿ’ “ದೇ ಥಾಲಿ’ ಮುಂತಾದ ಹಲವು ಚಿತ್ರಗಳಲ್ಲಿ ನಾಯಕನಾಗಿ ಕಾಣಿಸಿಕೊಂಡಿದ್ದರು. ಈಗ ಅವರು “ಕೋಟಿಗೊಬ್ಬ 3′ ಚಿತ್ರದಲ್ಲೊಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿರುವುದು ವಿಶೇಷ. ಇನ್ನು ಈ ಚಿತ್ರದ ಚಿತ್ರೀಕರಣ ಇದೇ ತಿಂಗಳ 16ರಿಂದ ಪ್ರಾರಂಭವಾಗುವ ಸಾಧ್ಯತೆ ಇದೆ.

ಚಿತ್ರದ ಚಿತ್ರೀಕರಣ ಯೂರೋಪ್‌ನ ಸರ್ಬಿಯಾದಲ್ಲಿ ನಡೆಯಲಿದ್ದು, ಅಲ್ಲಿ ಚಿತ್ರೀಕರಣವಾಗುತ್ತಿರುವ ಮೊದಲ ಕನ್ನಡ ಚಿತ್ರ ಇದಾಗಲಿದೆ. ನಿರ್ದೇಶಕ ಶಿವ ಕಾರ್ತಿಕ್‌ ಮತ್ತು ನಿರ್ದೇಶನದ ತಂಡದವರು ಜೂನ್‌ 10ಕ್ಕೆ ಹೋಗಿ ಅಲ್ಲಿ ಒಂದಿಷ್ಟು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದಂತೆ. ಸುದೀಪ್‌, ರವಿಶಂಕರ್‌, ಅಫ್ತಾಬ್‌ ಸೇರಿದಂತೆ ಸುಮಾರು 40 ಜನರ ತಂಡ ಜೂನ್‌ 15ಕ್ಕೆ ಅಲ್ಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ನಂತರ 16ರಿಂದ ಸುಮಾರು 40 ದಿನಗಳ ಕಾಲ ಸರ್ಬಿಯಾದ ಸುಂದರ ಪ್ರಾಂತ್ಯಗಳಲ್ಲಿ ಚಿತ್ರೀಕರಣ ನಡೆಯಲಿದೆ. ಈಗಾಗಲೇ “ಪೈಲ್ವಾನ್‌’ ಚಿತ್ರದ ಮೊದಲ ಹಂತದ ಚಿತ್ರೀಕರಣವನ್ನು ಚೆನ್ನೈನಲ್ಲಿ ಮುಗಿಸಿಬಂದಿರುವ ಸುದೀಪ್‌, “ಅಂಬಿ ನಿಂಗೆ ವಯಸ್ಸಾಯ್ತೋ’ ಚಿತ್ರದ ಉಳಿದ ಭಾಗದ ಚಿತ್ರೀಕರಣ ಮುಗಿಸಿ, ಸರ್ಬಿಯಾಗೆ ಹಾರಲಿದ್ದಾರೆ. “ಕೋಟಿಗೊಬ್ಬ 3′ ಚಿತ್ರವನ್ನು ಸೂರಪ್ಪ ಬಾಬು ನಿರ್ಮಿಸುತ್ತಿದ್ದು, ಈ ಹಿಂದೆ “ಕೋಟಿಗೊಬ್ಬ 2′ ಚಿತ್ರವನ್ನೂ ಅವರೇ ನಿರ್ಮಿಸುತ್ತಿದ್ದಾರೆ.

ಅಷ್ಟೇ ಅಲ್ಲ, ವಿಷ್ಣುವರ್ಧನ್‌ ಅಭಿನಯದ “ಕೋಟಿಗೊಬ್ಬ’ ಚಿತ್ರವನ್ನೂ ಅವರೇ ನಿರ್ಮಿಸಿದ್ದರು. ಒಂದೇ ಹೆಸರಿನ ಅಥವಾ ಫ್ರಾಂಚೈಸಿಯ ಮೂರು ಚಿತ್ರಗಳನ್ನು ಬಾಬು ನಿರ್ಮಿಸುತಿದ್ದು, ಕನ್ನಡ ಚಿತ್ರರಂಗದಲ್ಲಿ ಇದೊಂದು ವಿಶೇಷ ಎಂದರೆ ತಪ್ಪಿಲ್ಲ. ಈ ಚಿತ್ರವನ್ನು ಹೊಸ ನಿರ್ದೇಶಕ ಶಿವ ಕಾರ್ತಿಕ್‌ ನಿರ್ದೇಶಿಸಿದರೆ, ಅರ್ಜುನ್‌ ಜನ್ಯ ಸಂಗೀತ ಸಂಯೋಜಿಸುತ್ತಿದ್ದಾರೆ. ಇನ್ನು ಶೇಖರ್‌ ಚಂದ್ರ ಅವರ ಛಾಯಾಗ್ರಹಣವಿದೆ. ಚಿತ್ರದಲ್ಲಿ ಸುದೀಪ್‌, ಮಡ್ಡೋನ, ಅಫ್ತಾಬ್‌ ಜೊತೆಗೆ ನವಾಬ್‌ ಷಾ, ಶ್ರದ್ಧಾ ಷಾ, ರವಿಶಂಕರ್‌, ರಂಗಾಯಣ ರಘು ಮುಂತಾದವರು ನಟಿಸುತ್ತಿದ್ದಾರೆ.

ಟಾಪ್ ನ್ಯೂಸ್

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Sagara: ದನ ಕಳವು ಪ್ರಕರಣ; ಇಬ್ಬರು ಆರೋಪಿಗಳ ಬಂಧನ

Women-Mesure

Proposes: ಪುರುಷ ಟೈಲರ್‌ ಮಹಿಳೆಯರ ಬಟ್ಟೆ ಅಳತೆ ತೆಗೆದುಕೊಳ್ಳುವಂತಿಲ್ಲ: ಮಹಿಳಾ ಆಯೋಗ

1-qweeqw

Lucky car; ಅದೃಷ್ಟ ತಂದ ಕಾರಿನ ಸಮಾಧಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ 1,500 ಜನರು!!

1-qweewqe

TV Actor; 35 ನೇ ವಯಸ್ಸಿನಲ್ಲೆ ಜನಪ್ರಿಯ ಕಿರುತೆರೆ ನಟ ನಿತಿನ್ ಚೌಹಾಣ್ ನಿಧ*ನ

1-ewewqe

Deve Gowda; ನನಗೀಗ ವಯಸ್ಸು 92.. ಮೊಮ್ಮಗ ಗೆದ್ದ ನಂತರ ಮನೆಯಲ್ಲಿ ಮಲಗುವುದಿಲ್ಲ..

KL Rahul and Athiya Shetty to welcome their first child in 2025

Our beautiful blessing..; ಚೊಚ್ಚಲ ಮಗುವಿನ ಖುಷಿ ಹಂಚಿಕೊಂಡ ರಾಹುಲ್‌ – ಅಥಿಯಾ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rakesh Adiga in Maryade Prashne movie

Rakesh Adiga: ನಾನು ಮಿಡಲ್‌ ಕ್ಲಾಸ್‌ ಹುಡುಗ ಮರ್ಯಾದೆ ಉಳಿಸಿ!

ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

Bagheera: ಮುರಳಿಗೆ ಮತ್ತೆ ಗೆಲುವಾಗಿದೆ..: ಗೆದ್ದು ನಕ್ಕ ʼಬಘೀರʼ

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Sandalwood: ಫ್ಯಾಮಿಲಿ ಡ್ರಾಮಾದಲ್ಲಿ ಸಂತೋಷ ಸಂಗೀತ

Sandalwood: ಫ್ಯಾಮಿಲಿ ಡ್ರಾಮಾದಲ್ಲಿ ಸಂತೋಷ ಸಂಗೀತ

BBK11: ಎದ್ದು ಬಿದ್ದು ಟಾಸ್ಕ್ ಸೋತ ಹನುಮಂತು: ರಿಯಲ್ ಹುಲಿ ನೀವೇ ಎಂದ ಸಹಸ್ಪರ್ಧಿ

BBK11: ಎದ್ದು ಬಿದ್ದು ಟಾಸ್ಕ್ ಸೋತ ಹನುಮಂತು: ರಿಯಲ್ ಹುಲಿ ನೀವೇ ಎಂದ ಸಹಸ್ಪರ್ಧಿ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ

Moodbidri: ಆಳ್ವಾಸ್‌ನಲ್ಲಿ ದೀಪಾವಳಿ ಸಂಭ್ರಮ; ಸಂಪ್ರದಾಯ , ಸಂಸ್ಕೃತಿಯ ಅನಾವರಣ

POlice

Kasaragod: ರೈಲುಗಾಡಿಗೆ ಕಲ್ಲು ತೂರಾಟ; ಪ್ರಯಾಣಿಕನಿಗೆ ಗಾಯ

Stock-market-Exchange

NSE, BSE; ಷೇರು ಮಾರುಕಟ್ಟೆಗೆ ನವೆಂಬರ್‌ 20 ರಂದು ರಜೆ ಘೋಷಣೆ

de

Malpe ಸೀವಾಕ್‌ ಸಮುದ್ರತೀರದಲ್ಲಿ ಮೃತದೇಹ ಪತ್ತೆ

sand

Bramavara: ಬೆಣ್ಣೆಕುದ್ರು; ಮರಳು ಅಕ್ರಮ ಸಾಗಾಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.