Kantara -1: ರಿಷಬ್ ಶೆಟ್ಟಿ ʼಕಾಂತಾರ-1ʼ ಗೆ ಖ್ಯಾತ ಮಾಲಿವುಡ್ ನಟ ಜಯರಾಂ ಎಂಟ್ರಿ?
Team Udayavani, May 30, 2024, 4:11 PM IST
ಬೆಂಗಳೂರು: ರಿಷಬ್ ಶೆಟ್ಟಿ ಅವರ ʼಕಾಂತಾರ ಪ್ರೀಕ್ವೆಲ್ʼ ಅಪ್ಡೇಟ್ ಗಾಗಿ ಪ್ರೇಕ್ಷಕರು ಕಾಯುತ್ತಿದ್ದಾರೆ. ಪ್ಯಾನ್ ಇಂಡಿಯಾದಲ್ಲಿ ಮೋಡಿ ಮಾಡಿ, ಪರಭಾಷೆಗೆ ಡಬ್ ಆಗಿ ಬಾಕ್ಸ್ ಆಫೀಸ್‌ನಲ್ಲಿ ʼಕಾಂತಾರʼ ಮ್ಯಾಜಿಕ್ ಮಾಡಿತ್ತು.
20 ಕೋಟಿಯಲ್ಲಿ ನಿರ್ಮಾಣವಾಗಿದ್ದ ʼಕಾಂತಾರʼ 400 ಕೋಟಿ ಗಳಿಕೆ ಕಂಡಿತ್ತು. ಈ ಸಿನಿಮಾದ ಪ್ರೀಕ್ವೆಲ್ ಗೆ ಆನೆಗುಡ್ಡೆ ವಿನಾಯಕ ದೇವಸ್ಥಾನದಲ್ಲಿ ಮುಹೂರ್ತ ನೆರವೇರಿತ್ತು. ಬಹಳ ದೊಡ್ಡಮಟ್ಟದಲ್ಲಿ ʼಕಾಂತಾರ -1ʼ ಮೂಡಿ ಬರಲಿದೆ ಎನ್ನುವ ಮಾತಿಗೆ ತಕ್ಕಂತೆ ಸಿನಿಮಾ ತಂಡ ಚಿತ್ರೀಕರಣಕ್ಕಾಗಿ ಭರ್ಜರಿ ತಯಾರಿ ನಡೆಸುತ್ತಿದೆ.
ಇದಕ್ಕಾಗಿ ರಿಷಬ್ ತಮ್ಮ ಹುಟ್ಟೂರಿನಲ್ಲೇ ದೊಡ್ಡಮಟ್ಟದ ಸೆಟ್ ಗಳನ್ನು ಹಾಕಿದ್ದಾರೆ ಎನ್ನಲಾಗಿದೆ. ಟೀಸರ್ ತುಣುಕಿನಿಂದ ಗಮನ ಸೆಳೆದಿರುವ ʼಕಾಂತಾರ-1ʼ ನಲ್ಲಿ ರಿಷಬ್ ಹೊರತು ಪಡಿಸಿ ಯಾರೆಲ್ಲ ನಟಿಸಲಿದ್ದಾರೆ ಎನ್ನುವ ಬಗ್ಗೆ ಇದುವರೆಗೆ ಚಿತ್ರತಂಡದಿಂದ ಯಾವ ಅಪ್ಡೇಟ್ ಕೂಡ ಸಿಕ್ಕಿಲ್ಲ.
ಇದನ್ನೂ ಓದಿ: ನಟ ʼಪ್ರಜ್ವಲ್ ದೇವರಾಜ್ ಇನ್ನಿಲ್ಲʼ ಎನ್ನುವ ಪೋಸ್ಟರ್ ವೈರಲ್: ನಿಜಕ್ಕೂ ಆಗಿದ್ದೇನು?
ಕರಾವಳಿ ಭಾಗದ ಕಲಾವಿದರೇ ಹೆಚ್ಚಾಗಿ ಸಿನಿಮಾದಲ್ಲಿರಲಿದ್ದಾರೆ ಎಂದು ರಿಷಬ್ ಈ ಹಿಂದೆ ಹೇಳಿದ್ದು ಬಿಟ್ಟರೆ ಯಾರೆಲ್ಲಾ ಎನ್ನುವುದನ್ನು ಮಾತ್ರ ಗೌಪ್ಯವಾಗಿ ಇಟ್ಟಿದ್ದಾರೆ.
ಇದೀಗ ಲೇಟೆಸ್ಟ್ ಅಪ್ಡೇಟ್ ವೊಂದು ಸ್ಯಾಂಡಲ್ ವುಡ್ ವಲಯದಲ್ಲಿ ಹರಿದಾಡಿದೆ. ʼಕಾಂತಾರ-1ʼ ಖ್ಯಾತ ಬಹುಭಾಷಾ ನಟ ಜಯರಾಂ ನಟಿಸಲಿದ್ದಾರೆ ಎನ್ನುವ ಸುದ್ದಿಯೊಂದು ಹೊರಬಿದ್ದಿದೆ.
ಈಗಾಗಲೇ ಶಿವರಾಜ್ ಕುಮಾರ್ ಅವರ ʼಘೋಸ್ಟ್ʼ ಸಿನಿಮಾದಲ್ಲಿ ಖಡಕ್ ಪೊಲೀಸ್ ಅವತಾರದಲ್ಲಿ ಕಾಣಿಸಿಕೊಂಡಿದ್ದ ಜಯರಾಂ ಈಗ ಕರಾವಳಿ ದೈವದ ಕಥೆವುಳ್ಳ ʼಕಾಂತಾರ-1ʼ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.
ಆದರೆ ಇದುವರೆಗೆ ಈ ಬಗ್ಗೆ ರಿಷಬ್ ಆಗಲಿ ಅಥವಾ ನಿರ್ಮಾಣ ಸಂಸ್ಥೆ ಹೊಂಬಾಳೆ ಆಗಲಿ ಅಧಿಕೃತವಾಗಿ ಯಾವ ಮಾಹಿತಿಯನ್ನು ನೀಡಿಲ್ಲ.
ಈಗಾಗಲೇ ʼಕಾಂತಾರ-1ʼ ಸಿನಿಮಾದ ಓಟಿಟಿ ರೈಟ್ಸ್ ಅಮೇಜಾನ್ ಪ್ರೈಮ್ ಗೆ 120 ಕೋಟಿ ರೂ.ಗೆ ಸೇಲ್ ಆಗಿದೆ. ಮುಂದಿನ ವರ್ಷದ ಸಿನಿಮಾ ರಿಲೀಸ್ ಆಗುವ ಸಾಧ್ಯತೆಯಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sandalwood: ಯಾರೋ ನಾ ಕಾಣೆ, ಚಂದಾಗೌಳೆ ಶಾಣೆ..: ಕಟ್ಲೆ ಹಾಡು ಬಂತು
Viral Photo: ಬಾಲಿವುಡ್ ನಟ ಆಮಿರ್ ಖಾನ್ ಭೇಟಿಯಾದ ಕಿಚ್ಚ ಸುದೀಪ್; ಫ್ಯಾನ್ಸ್ ಥ್ರಿಲ್
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
ZEBRA Movie: ಜೀಬ್ರಾ ಮೇಲೆ ಡಾಲಿ ಕಣ್ಣು
Drone Prathap: ಸಿನಿಮಾರಂಗಕ್ಕೆ ಡ್ರೋನ್ ಪ್ರತಾಪ್ ಎಂಟ್ರಿ; ಮೊದಲ ಚಿತ್ರದಲ್ಲೇ ಹೀರೋ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
IFFI Goa: ಸಿನಿಮಾ ಸಾಯುವುದಿಲ್ಲ, ಕಲೆಯೂ ಅಷ್ಟೇ,…ಆದರೆ ನಾವು ಉಳಿಸಿಕೊಳ್ಳಬೇಕಷ್ಟೇ !
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.