ಕೋಟೆ ನಾಡಲ್ಲಿ “ಮಳೆಬಿಲ್ಲು’ ಹಾಡು

ಕರಿಯಪ್ಪನ ಸೊಸೆಯ ಮೊದಲ ಚಿತ್ರ ರೆಡಿ

Team Udayavani, Jul 4, 2019, 3:00 AM IST

Malebillu

ಕನ್ನಡದಲ್ಲೀಗ ಸದ್ಯಕ್ಕೆ ಸಕ್ಸಸ್‌ಫ‌ುಲ್‌ ನಟಿಯಾಗಿ ಸ್ಟಾರ್‌ ಚಿತ್ರಗಳಲ್ಲಿ ಬ್ಯುಜಿ ಎನಿಸಿಕೊಂಡಿರುವ ಸಂಜನಾ ಆನಂದ್‌, ಈಗ ಸಂತಸದಲ್ಲಿದ್ದಾರೆ. ಅದಕ್ಕೆ ಕಾರಣ, ಅವರ ಅಭಿನಯದ ಮೊದಲ ಚಿತ್ರ “ಮಳೆಬಿಲ್ಲು’ ಈಗ ಬಿಡುಗಡೆಗೆ ಸಜ್ಜಾಗಿದೆ. ಹೌದು, ಹೊಸ ಪ್ರತಿಭೆಗಳೇ ಸೇರಿ ಮಾಡಿರುವ “ಮಳೆಬಿಲ್ಲು’ ಪ್ರೇಕ್ಷಕರ ಮುಂದೆ ಏಳು ಬಣ್ಣಗಳ ಅಂದವನ್ನು ಚೆಲ್ಲಲಿದೆ.

ಶೀರ್ಷಿಕೆ ಹೇಳುವಂತೆ, ಏಳು ಬಣ್ಣಗಳ ಸಮಾಗಮವನ್ನು ವ್ಯಕ್ತಿಯ ಬದುಕಿಗೆ ಹೋಲಿಸಿ ಹೆಣೆದಿರುವ ಕಥೆ ಈ ಚಿತ್ರದಲ್ಲಿದೆ. ಇನ್ನು, ಈ ಚಿತ್ರದ ಮೂಲಕ ನಾಗರಾಜ್‌ ಹಿರಿಯೂರು ನಿರ್ದೇಶಕರಾಗುತ್ತಿದ್ದಾರೆ. ಈಗ ಸ್ಟಾರ್‌ ಚಿತ್ರಗಳಲ್ಲಿ ನಟಿಸುತ್ತಿರುವ ಸಂಜನಾ ಆನಂದ್‌ ಅವರಿಗೆ ಇದು ಮೊದಲ ಚಿತ್ರ ಎಂಬುದು ವಿಶೇಷ.

ಅಂದಹಾಗೆ, ಇತ್ತೀಚೆಗೆ ಚಿತ್ರದ ಟ್ರೇಲರ್‌ ಬಿಡುಗಡೆಯಾಗಿದ್ದು, ಎಲ್ಲೆಡೆಯಿಂದ ಮೆಚ್ಚುಗೆ ಪಡೆದುಕೊಂಡಿದೆ. ಇದೇ ಖುಷಿಯಲ್ಲಿ ಚಿತ್ರದುರ್ಗದಲ್ಲಿ ಈ ವಾರ ಅದ್ಧೂರಿಯಾಗಿ ಚಿತ್ರದ ಆಡಿಯೋ ಬಿಡುಗಡೆ ಮಾಡಲು ನಿರ್ದೇಶಕರು ತಯಾರಿ ನಡೆಸುತ್ತಿದ್ದಾರೆ. ಚಿತ್ರದಲ್ಲಿ ಶರತ್‌, ಸಂಜನಾ, ನಯನಾ ಮುಖ್ಯ ಆಕರ್ಷಣೆಯಾಗಿದ್ದಾರೆ.

ಇನ್ನು, ನಿರ್ದೇಶಕ ನಾಗರಾಜ್‌ ಹಿರಿಯೂರು ಅವರ ಸಹೋದರ ನಿಂಗಪ್ಪ ಚಿತ್ರ ನಿರ್ಮಾಣ ಮಾಡಿದ್ದಾರೆ. ಚಿತ್ರದ ನಾಯಕಿ ಸಂಜನಾ ಆನಂದ್‌, ಈ ಚಿತ್ರಕ್ಕೆ ಆಯ್ಕೆಯಾಗುವ ಮುನ್ನ ಆಡಿಷನ್‌ ಕೊಟ್ಟಿದ್ದರಂತೆ. ಆಡಿಷನ್‌ನಲ್ಲಿ ನಿರ್ದೇಶಕರಿಗೆ ಇಷ್ಟವಾಗಿದ್ದೇ ತಡ, ಸಂಜನಾ ಅವರು ಆಯ್ಕೆಯಾಗಿದ್ದಾರೆ.

ಆ ವೇಳೆಯಲ್ಲೇ ನಿರ್ದೇಶಕರು, ಸಂಜನಾ ಆನಂದ್‌ ಅವರಿಗೆ ಕನ್ನಡ ಚಿತ್ರರಂಗದಲ್ಲಿ ನೀನು ಬೆಳೆಯುತ್ತೀಯ ಎಂದು ಹೇಳಿದ್ದರಂತೆ. ಅದೀಗ ಮೆಲ್ಲನೆ ನಿಜವಾಗುತ್ತಿದೆ ಎಂಬುದು ಚಿತ್ರತಂಡದ ಮಾತು. ಸಂಜನಾ ಆನಂದ್‌ ಈಗ “ದುನಿಯಾ’ ವಿಜಯ್‌ ಜೊತೆ “ಸಲಗ’, ಅಜೇಯ್‌ರಾವ್‌ ಜೊತೆಗೆ ಇನ್ನೂ ಹೆಸರಿಡದ ಚಿತ್ರದಲ್ಲಿ ನಟಿಸುತ್ತಿದ್ದಾರೆ. ಇದರೊಂದಿಗೆ ಶಿವರಾಜಕುಮಾರ್‌ ಪುತ್ರಿ ನಿರ್ಮಿಸುತ್ತಿರುವ “ಹನಿಮೂನ್‌’ ಎಂಬ ವೆಬ್‌ಸೀರೀಸ್‌ನಲ್ಲೂ ಕಾಣಿಸಿಕೊಂಡಿದ್ದಾರೆ.

“ಮಳೆಬಿಲ್ಲು ಚಿತ್ರದಲ್ಲಿ ಸಂಜನಾ ಅವರು ಭಾರ್ಗವಿ ಎಂಬ ಪಾತ್ರ ನಿರ್ವಹಿಸಿದ್ದಾರೆ. ಅದೊಂದು ರೀತಿಯ ಗಂಡುಬೀರಿಯಂತಹ ಪಾತ್ರ. ಸಂಭಾಷಣೆ ಕೂಡ ಸಖತ್‌ ಖಡಕ್‌ ಆಗಿಯೇ ಇರಲಿವೆ ಎನ್ನುವ ಚಿತ್ರತಂಡ, ಚಿತ್ರದ ಬಿಡುಗಡೆಯನ್ನು ಎದುರು ನೋಡುತ್ತಿದೆ. ಚಿತ್ರದುರ್ಗದಲ್ಲಿ ಆಡಿಯೋ ಬಿಡುಗಡೆ ಮಾಡಿದ ಬಳಿಕ ಪ್ರೇಕ್ಷಕರ ಮುಂದೆ ಚಿತ್ರವನ್ನು ತರಲು ನಿರ್ದೇಶಕರು ನಿರ್ಧರಿಸಿದ್ದಾರೆ.

ಟಾಪ್ ನ್ಯೂಸ್

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ

Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್‌?

Kerala: ಅಂಗಿ ತೆಗೆದು ದೇಗುಲ ಪ್ರವೇಶ ಪದ್ಧತಿಗೆ ಕೊಕ್‌?

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚುರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

ರಾಜ್ಯದಲ್ಲಿ ಶೇ. 27 ಪ್ರೌಢಶಾಲಾ ಶಿಕ್ಷಕ ಹುದ್ದೆ ಖಾಲಿ! ಕಲ್ಯಾಣ ಕರ್ನಾಟಕದಲ್ಲಿಯೇ ಹೆಚ್ಚು

New Virus: ಚೀನದಲ್ಲಿ ಹೊಸ ವೈರಸ್‌ ಹಬ್ಬುತ್ತಿರುವ ಬಗ್ಗೆ ವದಂತಿ!

New Virus: ಚೀನದಲ್ಲಿ ಹೊಸ ವೈರಸ್‌ ಹಬ್ಬುತ್ತಿರುವ ಬಗ್ಗೆ ವದಂತಿ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sandalwood: ಸ್ಯಾಂಡಲ್‌ವುಡ್‌ಗೆ ಪ್ರಿಯಾಂಕಾ ಸೋದರ ಎಂಟ್ರಿ

Sandalwood: ಸ್ಯಾಂಡಲ್‌ವುಡ್‌ಗೆ ಪ್ರಿಯಾಂಕಾ ಸೋದರ ಎಂಟ್ರಿ

Ranjani Raghavan: ನಟಿ ರಂಜನಿ ಈಗ ನಿರ್ದೇಶಕಿ

Ranjani Raghavan: ನಟಿ ರಂಜನಿ ಈಗ ನಿರ್ದೇಶಕಿ

Sandalwood: ಮತ್ತೆ ಬಂದ ಪ್ರಿಯಾ ಆನಂದ

Sandalwood: ಮತ್ತೆ ಬಂದ ಪ್ರಿಯಾ ಆನಂದ

Bhuvanam Gaganam Movie: ಪ್ರೇಮಿಗಳ ದಿನಕ್ಕೆ ಭುವನಂ ಗಗನಂ ತೆರೆಗೆ

Bhuvanam Gaganam Movie: ಪ್ರೇಮಿಗಳ ದಿನಕ್ಕೆ ಭುವನಂ ಗಗನಂ ತೆರೆಗೆ

KD Movie: ಕೆಡಿ ಶಿವ ಮೊಗದಲ್ಲಿ 25 ಮಿಲಿಯನ್‌ ನಗು 

KD Movie: ಕೆಡಿ ಶಿವ ಮೊಗದಲ್ಲಿ 25 ಮಿಲಿಯನ್‌ ನಗು 

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Video: ವೇದಿಕೆ ಮೇಲಿಂದ ಕೆಳಗೆ ಬಿದ್ದ ಕೇರಳ ಶಾಸಕಿ ಉಮಾ ಥಾಮಸ್… ಸ್ಥಿತಿ ಗಂಭೀರ

Court-1

Kundapura: ಗ್ರಾಮ ಸಹಾಯಕಿಗೆ ಕಿರುಕುಳ; ಆರೋಪಿಗಳಿಗೆ ನಿರೀಕ್ಷಣ ಜಾಮೀನು

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

Fraud; ಯುವಕರು, ಸ್ತ್ರೀಯರನ್ನು ಗುರಿಯಾಗಿಸಿ ಹೂಡಿಕೆ ವಂಚನೆ: ಕೇಂದ್ರ ಎಚ್ಚರಿಕೆ

1-horoscope

Horoscope: ಉದ್ಯೋಗ,ವ್ಯವಹಾರ ಎರಡರಲ್ಲೂ ಯಶಸ್ಸು,ಅನಾದರದ ಮಾತುಗಳಿಗೆ ಪ್ರತಿಕ್ರಿಯೆ ತೋರದಿರಿ

courts

Kasaragod: ಯೂತ್‌ ಕಾಂಗ್ರೆಸ್‌ ಕಾರ್ಯಕರ್ತರಿಬ್ಬರ ಕೊಲೆ; ಇಂದು ಶಿಕ್ಷೆ ಪ್ರಮಾಣ ಘೋಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.