‘ಮ್ಯಾನ್ ಆಫ್ ದಿ ಮ್ಯಾಚ್’ ಹಾಡಿಗೆ ವಾಸುಕಿ ಮಸ್ತ್ ಸ್ಟೆಪ್ಸ್ !
Team Udayavani, Aug 4, 2021, 9:40 AM IST
ಬೆಂಗಳೂರು: ಇತ್ತೀಚೆಗಷ್ಟೇ “ಮ್ಯಾನ್ ಆಫ್ ದಿ ಮ್ಯಾಚ್’ ಚಿತ್ರಕ್ಕೆ ನಟ ಪವರ್ಸ್ಟಾರ್ ಪುನೀತ್ ರಾಜಕುಮಾರ್ ಬಂಡವಾಳ ಹೂಡುತ್ತಿದ್ದಾರೆ ಎಂಬ ಸುದ್ದಿ ಹೊರಬಿದ್ದಿತ್ತು. ಇದೀಗ ಚಿತ್ರತಂಡದಿಂದ ಮತ್ತೊಂದು ಸುದ್ದಿ ಹೊರಬಿದ್ದಿದೆ. ಅದೇನೆಂದರೆ, ಚಿತ್ರದ ಹಾಡೊಂದರಲ್ಲಿ ಗಾಯಕ ಕಂ ಸಂಗೀತ ನಿರ್ದೇಶಕ, ಮಾಜಿ ಬಿಗ್ಬಾಸ್ ಕನ್ನಡ ಸೀಸನ್-7ರ ಸ್ಪರ್ಧಿ ವಾಸುಕಿ ವೈಭವ್ ಒಂದು ವಿಶೇಷ ಪಾತ್ರದಲ್ಲಿ ನಟಿಸುತ್ತಿದ್ದಾರೆ.
ಹೌದು, “ರಾಮಾ ರಾಮಾ ರೇ’ ಖ್ಯಾತಿಯ ಡಿ. ಸತ್ಯಪ್ರಕಾಶ್ ಅವರು ನಿರ್ದೇಶನ ಮಾಡುತ್ತಿರುವ ಮೂರನೇ ಸಿನಿಮಾ “ಮ್ಯಾನ್ ಆಫ್ ದಿ ಮ್ಯಾಚ್’ ಚಿತ್ರಕ್ಕೆ ವಾಸುಕಿ ವೈಭವ್ ಸಂಗೀತ ನಿರ್ದೇಶನ ಮಾಡಿದ್ದಾರೆ. ಇದೀಗ ವಾಸುಕಿ ವೈಭವ್ ತಾವೇ ಸಂಯೋಜಿಸಿರುವ ಒಂದು ಹಾಡಿನಲ್ಲಿ ಬಿಂದಾಸ್ ಆಗಿ ಸ್ಟೆಪ್ಸ್ ಕೂಡ ಹಾಕಿದ್ದಾರೆ.
ನಿರ್ದೇಶಕ ಯೋಗರಾಜ್ ಭಟ್ ಮತ್ತು ಸತ್ಯಪ್ರಕಾಶ್ ಜಂಟಿಯಾಗಿ ರಚಿಸಿರುವ ಈ ಹಾಡಿಗೆ ಸ್ವತಃ ನಿರ್ದೇಶಕ ಡಿ. ಸತ್ಯಪ್ರಕಾಶ್ ಕೊರಿಯೋಗ್ರಫಿ ಮಾಡಿದ್ದಾರೆ. ಇನ್ನು ಪುನೀತ್ ರಾಜಕುಮಾರ್ ಒಡೆತನದ “ಪಿಆರ್ಕೆ ಪ್ರೊಡಕ್ಷನ್ಸ್’ ಮತ್ತು “ಸತ್ಯ ಮಯೂರ ಪಿಕ್ಚರ್’ ಜೊತೆಗೂಡಿ ನಿರ್ಮಿಸುತ್ತಿರುವ “ಮ್ಯಾನ್ ಆಫ್ ದಿ ಮ್ಯಾಚ್’ ಚಿತ್ರದ ಬಹುತೇಕ ಚಿತ್ರೀಕರಣ ಪೂರ್ಣಗೊಂಡಿದ್ದು, ಚಿತ್ರದಲ್ಲಿ ನಟರಾಜ್, ಧರ್ಮಣ್ಣ ಕಡೂರು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಉಳಿದಂತೆ ಬಹುತೇಕ ಹೊಸಕಲಾವಿದರು ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Billa Ranga Baashaa: ಬಿಆರ್ಬಿಗೆ ಕಿಚ್ಚ ರೆಡಿ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮತ್ತೆ ಮುಂದೂಡಿಕೆ…
Anish Tejeshwar: ‘ಮುಂದೆ ಹೇಗೋ ಏನೋ..’: ಆರಾಮ್ ಅರವಿಂದ ಸ್ವಾಮಿ ಹಾಡು ಹಬ್ಬ
Vaibhavi Shandilya: ಮಾರ್ಟಿನ್ ಪ್ರೀತಿ ಪಾತ್ರಳು ನಾನು…; ವೈಭವಿ ಕಣ್ತುಂಬ ನಿರೀಕ್ಷೆ
Radhika kumaraswamy: ಭೈರಾದೇವಿ ನನ್ನ ಡ್ರೀಮ್ ಪ್ರಾಜೆಕ್ಟ್…: ರಾಧಿಕಾ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ಅ*ತ್ಯಾಚಾರ ಪ್ರಕರಣ:ಶಾಸಕ ಮುನಿರತ್ನ ಮತ್ತೆ ಪರಪ್ಪನ ಅಗ್ರಹಾರ ಜೈಲಿಗೆ-14 ದಿನ ನ್ಯಾಯಾಂಗ ಬಂಧನ
Navaratri 2024: ನವರಾತ್ರಿ “ನವ ಚೈತನ್ಯದ ನವರಾತ್ರಿಗಳು”
Bengaluru: 5ನೇ ಮಹಡಿಯಿಂದ ಜಿಗಿದು ಮಹಿಳಾ ಟೆಕಿ ಆತ್ಮಹತ್ಯೆ
Bengaluru: ರೇವ್ ಪಾರ್ಟಿ: ಸಿಸಿಬಿ ವಿರುದ್ಧವೇ ದೂರು
Navaratri 2024:ಕರಾವಳಿಯ ನವದಿನದ ಸಂಭ್ರಮ-ಮಂಗಳೂರು ದಸರಾ’ ಒಂದು ವಿಶಿಷ್ಟ ಅನುಭೂತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.