ಮನಸ್ಮಿತ ಹಾಡು ಹಬ್ಬ: ಜೂನ್‌ನಲ್ಲಿ ತೆರೆಗೆ
Team Udayavani, May 18, 2022, 1:49 PM IST
ಮ್ಯೂಸಿಕಲ್ ರೊಮ್ಯಾಂಟಿಕ್ ಕಥಾಹಂದರ ಹೊಂದಿರುವ “ಮನಸ್ಮಿತ’ ಚಿತ್ರ ತೆರೆಗೆ ಬರಲು ಸಿದ್ಧವಾಗಿದ್ದು, ಇತ್ತೀಚೆಗೆ ಚಿತ್ರತಂಡ ಚಿತ್ರದ ಹಾಡುಗಳನ್ನು ಬಿಡುಗಡೆ ಮಾಡುವ ಮೂಲಕ ಚಿತ್ರದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿದೆ.
ಚರಣ್ ಗೌಡ, ಸಂಜನಾ ದಾಸ್, ಅತುಲ್ ಕುಲಕರ್ಣಿ, ಪಲ್ಲವಿ ಪುರೋಹಿತ್, ಸುಚೇಂದ್ರ ಪ್ರಸಾದ್, ರಾಜೇಂದ್ರ ಕಾರಂತ್, ಮೂಗು ಸುರೇಶ್, ಕರಿಸುಬ್ಬು, ಶಿಲ್ಪಾ, ವೀಣಾ ಪೊನ್ನಪ್ಪ, ಸೌಭಾಗ್ಯ, ಪ್ರದೀಪ್ ಶಾಸ್ತ್ರೀ, ಪ್ರದೀಪ್ ಪೂಜಾರಿ ಮೊದಲಾದವರು “ಮನಸ್ಮಿತ’ ಚಿತ್ರದ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದು, ಚಿತ್ರಕ್ಕೆ ಅಪ್ಪಣ್ಣ ಸಂತೋಷ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ.
“ಎರಡು ಕಾಲಘಟ್ಟದಲ್ಲಿ ನಡೆಯುವ ವಿಭಿನ್ನ ಘಟನೆಗಳನ್ನು ಇಟ್ಟುಕೊಂಡು ಅದರ ಮೂಲಕ ಸಂಗೀತದ ವಿವಿಧ ಮಜಲುಗಳನ್ನು ಈ ಸಿನಿಮಾದಲ್ಲಿ ಪರಿಚಯಿಸಲಾಗಿದೆ. ಇಡೀ ಸಿನಿಮಾ ನವಿರಾದ ಪ್ರೇಮಕಥೆಯ ಜೊತೆಗೆ ಸಂಗೀತಮಯವಾಗಿ ಸಾಗುತ್ತದೆ’ ಎಂಬುದು ಚಿತ್ರದ ವಿಶೇಷತೆಯ ಬಗ್ಗೆ ಚಿತ್ರತಂಡದ ಮಾತು.
ಇದನ್ನೂ ಓದಿ: ಮೇ 20 ರಿಂದ “ಪ್ರಾರಂಭ” ಶುಭಾರಂಭ
“ಸುಮಾರು ಮೂರು ವರ್ಷಗಳ ಹಿಂದೆಯೇ “ಮನಸ್ಮಿತ’ ಸಿನಿಮಾದ ಕೆಲಸಗಳು ಶುರುವಾಗಿದ್ದು, ಕೋವಿಡ್ ನಿಂದಾಗಿ ಅಂದುಕೊಂಡ ಸಮಯಕ್ಕೆ ತೆರೆಗೆ ಬರಲು ಸಾಧ್ಯವಾಗಲಿಲ್ಲ. ಸದ್ಯ ಸಿನಿಮಾದ ಎಲ್ಲ ಕೆಲಸಗಳು ಪೂರ್ಣಗೊಂಡಿದ್ದು, ಸಿನಿಮಾದ ಬಿಡುಗಡೆಗೆ ಸೆನ್ಸಾರ್‌ನಿಂದಲೂ ಗ್ರೀನ್ ಸಿಗ್ನಲ್ ಸಿಕ್ಕಿದೆ.
ಇದೇ ಜೂನ್ ಮೊದಲ ವಾರ ಸಿನಿಮಾವನ್ನು ಪ್ರೇಕ್ಷಕರ ಮುಂದೆ ತರುವ ಯೋಚನೆಯಿದೆ’ ಎಂಬುದು ನಿರ್ದೇಶಕ ಅಪ್ಪಣ್ಣ ಸಂತೋಷ್ ಮಾತು.
“ಜಮುನಾ ಪ್ರೊಡಕ್ಷನ್ಸ್’ ಬ್ಯಾನರ್‌ನಲ್ಲಿ ಸೀತಮ್ಮ ವಿ. ಟಿ ನಿರ್ಮಿಸಿರುವ “ಮನಸ್ಮಿತ’ ಚಿತ್ರಕ್ಕೆ ದೀಪಿಕಾ ವಿ. ಟಿ ಸಹ ನಿರ್ಮಾಣವಿದೆ. ಚಿತ್ರಕ್ಕೆ ಕೆ. ಎಸ್ ಚಂದ್ರಶೇಖರ್ ಛಾಯಾಗ್ರಹಣ, ಮಧು ತಂಬಕೆರೆ ಸಂಕಲನವಿದೆ. ಚಿತ್ರದ ಹಾಡುಗಳಿಗೆ ಹರಿಕಾವ್ಯ ಸಂಗೀತ ಸಂಯೋಜಿಸಿದ್ದು, ಕೆ. ಕಲ್ಯಾಣ್ ಹಾಡುಗಳಿಗೆ ಸಾಹಿತ್ಯ ರಚಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
BBK11: ಕಣ್ಣೀರುಡುತ್ತಲೇ ಬಿಗ್ ಬಾಸ್ ಮನೆಯಿಂದ ಆಚೆ ಬಂದ ಧರ್ಮ ಕೀರ್ತಿರಾಜ್
Kannada Cinema: ‘ರುದ್ರಾಭಿಷೇಕಂ’ನಲ್ಲಿ ವಿಜಯ್ ರಾಘವೇಂದ್ರ
Health Issue: ಸರ್ಜರಿಗಾಗಿ ಮುಂದಿನ ತಿಂಗಳು ಅಮೆರಿಕಕ್ಕೆ ಹೋಗುವೆ: ನಟ ಶಿವರಾಜ್‌ಕುಮಾರ್
BBK11: ಚೈತ್ರಾ ಅವರೇ ನನ್ನ ಬಾಸ್.. ಅವರ ಹೆಜ್ಜೆ ಫಾಲೋ ಮಾಡ್ತೇನೆ ಎಂದ ರಜತ್
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್ ಸುಖಾಂತ್ಯ
BBK11: ಧರ್ಮ ಬಿಗ್ ಬಾಸ್ ಆಟಕ್ಕೆ ತೊಡಕಾದ ಅಂಶಗಳೇನು? ʼಚಾಕ್ಲೇಟ್ ಹೀರೋʼ ಎಡವಿದ್ದೆಲ್ಲಿ?
Maharashtra: ಕಾಂಗ್ರೆಸ್ ಗೆ ಕೇವಲ 16 ಸ್ಥಾನ; ಕೈ ಅಧ್ಯಕ್ಷ ಸ್ಥಾನಕ್ಕೆ ಪಟೋಲೆ ರಾಜೀನಾಮೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯ ನೋಟು ಎಗರಿಸಿದ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.